Homeಕರೋನಾ ತಲ್ಲಣಕೊರೊನಾ ಆತಂಕ: ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆಗಳು ರದ್ದು, 12 ನೇ ತರಗತಿ ಪರೀಕ್ಷೆ...

ಕೊರೊನಾ ಆತಂಕ: ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆಗಳು ರದ್ದು, 12 ನೇ ತರಗತಿ ಪರೀಕ್ಷೆ ಮುಂದೂಡಿಕೆ

- Advertisement -
- Advertisement -

ದೇಶಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸಿಬಿಎಸ್‌ಇ 12 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. 10 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಎಂದು ಬುಧವಾರ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಘೋಷಣೆ ಮಾಡಲಾಗಿದೆ.

ರಾಷ್ಟ್ರವ್ಯಾಪಿ ಕೊರೊನಾ ಸೋಂಕು ಉಲ್ಬಣದಿಂದಾಗಿ ಪೋಷಕರು, ವಿದ್ಯಾರ್ಥಿಗಳು, ಪ್ರತಿಪಕ್ಷಗಳು ಸೇರಿದಂತೆ ವಿವಿಧ ರಾಜ್ಯಗಳು ಸಿಬಿಎಸ್‌ಇ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದರು. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಶಿಕ್ಷಣ ಸಚಿವರು ಮತ್ತು ಉನ್ನತ ಅಧಿಕಾರಿಗಳು ಸಭೆ ನಡೆಸಿ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ.

ಮೇ 4 ರಿಂದ ಜೂನ್ 14 ರವರೆಗೆ ನಡೆಯಬೇಕಿದ್ದ 12 ನೇ ತರಗತಿಯ ಸಿಬಿಎಸ್‌ಇ (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್) ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಟ್ವೀಟ್‌ಗಳಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮರ್ಕಾಜ್ ಮಸೀದಿಯಲ್ಲಿ ಪ್ರಾರ್ಥನೆಗೆ 20 ಜನರಿಗಷ್ಟೇ ಅವಕಾಶ: ಕೇಂದ್ರದ ನಿಲುವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಜೂನ್ 1 ರಂದು ಈ ಬಗ್ಗೆ ಮಂಡಳಿಯು ಪರಿಸ್ಥಿತಿ ಅವಲೋಕಿಸಲಿದೆ. ಹೊಸ ಪರೀಕ್ಷೆಯ ದಿನಾಂಕದ ಮೊದಲು ವಿದ್ಯಾರ್ಥಿಗಳಿಗೆ ಕನಿಷ್ಠ 15 ದಿನಗಳ ಮೊದಲೇ ಸೂಚನೆ ನೀಡಲಾಗುತ್ತದೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ರದ್ದುಗೊಳಿಸಿರುವ 10 ನೇ ತರಗತಿ ಪರೀಕ್ಷೆಗಳಲ್ಲಿ, “ಮಂಡಳಿಯು ರೂಪಿಸುವ ವಸ್ತುನಿಷ್ಠ ಮಾನದಂಡದ ಆಧಾರದ ಮೇಲೆ” ಫಲಿತಾಂಶವನ್ನು ನೀಡಲಾಗುತ್ತದೆ. ಮಂಡಳಿ ನೀಡುವ ಅಂಕಗಳಿಂದ ತೃಪ್ತರಾಗದ ವಿದ್ಯಾರ್ಥಿಗಳಿಗೆ ಅವರು ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಫ್ತಾರ್‌ ಕೂಟ ನಡೆಸುವಂತಿಲ್ಲ, ರಂಜಾನ್‌ಗೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ

 

ಸರ್ಕಾರದ ನಿರ್ಧಾರಕ್ಕೆ ಸಮ್ಮತ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, “ಸರ್ಕಾರವು ಅಂತಿಮವಾಗಿ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ, ಆದರೆ 12 ನೇ ತರಗತಿ ಪರೀಕ್ಷೆಗಳ ಬಗ್ಗೆಯೂ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು. ಜೂನ್ ತನಕ ವಿದ್ಯಾರ್ಥಿಗಳನ್ನು ಅನಗತ್ಯ ಒತ್ತಡಕ್ಕೆ ಒಳಪಡಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಇದು ಅನ್ಯಾಯವಾಗಿದೆ. ಈಗಲೇ ನಿರ್ಧಾರ ತೆಗೆದುಕೊಳ್ಳಬೇಕೆಂದು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಕ್ಷಾಂತರ ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗುವುದನ್ನು ತಡೆಯಲು ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು. ಹಲವು ಪೋಷಕರ ಗುಂಪುಗಳು ಪರೀಕ್ಷೆ ರದ್ದುಗೊಳಿಸುವಂತೆ ಪ್ರಧಾನಿಯವರಿಗೆ ಪತ್ರ ಬರೆದಿದ್ದವು.

ಸೋಂಕಿನ ಎರಡನೇ ಅಲೆಯಲ್ಲಿ ಬುಧವಾರ ಬೆಳಿಗ್ಗೆ, ಭಾರತದಲ್ಲಿ 1,84,372 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 1,027 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.


ಇದನ್ನೂ ಓದಿ: ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...