Homeಮುಖಪುಟಮೀರತ್‌: ಶಾಲಾ ಬಾಲಕನನ್ನು ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ

ಮೀರತ್‌: ಶಾಲಾ ಬಾಲಕನನ್ನು ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ

- Advertisement -
- Advertisement -

ಉತ್ತರಪ್ರದೇಶದ ಮೀರತ್‌ನಲ್ಲಿ 12ನೇ ತರಗತಿ ವಿದ್ಯಾರ್ಥಿಯ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿ ಮುಖಕ್ಕೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಮೂವರನ್ನು ಬಂಧಿಸಲಾಗಿದೆ.

ಕೃತ್ಯದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ.

ವೈರಲ್‌ ವಿಡಿಯೋವೊಂದರಲ್ಲಿ ಒಬ್ಬ ವ್ಯಕ್ತಿಯು ನಿರ್ಜನ ಸ್ಥಳದಲ್ಲಿ ವಿದ್ಯಾರ್ಥಿಯನ್ನು ಥಳಿಸುತ್ತಿರುವುದು  ಕಂಡು ಬಂದಿದೆ. ವಿದ್ಯಾರ್ಥಿಯ ತಲೆ ಮತ್ತು ಬೆನ್ನಿನ ಮೇಲೆ ಆತ ಪದೇ ಪದೇ ಹಲ್ಲೆ ಮಾಡುವುದು ಕೂಡ  ಸೆರೆಯಾಗಿದೆ. ಇನ್ನೊಂದು ವಿಡಿಯೋದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವುದು ಕಂಡು ಬಂದಿದೆ.

ಘಟನೆಗೆ ಸಂಬಂಧಿಸಿ ಉತ್ತರಪ್ರದೇಶದ ಪೊಲೀಸರು 7 ಜನರ ವಿರುದ್ಧ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತ ನಾಲ್ವರನ್ನು ಅವಿ ಶರ್ಮಾ, ಆಶಿಶ್ ಮಲಿಕ್, ರಾಜನ್ ಮತ್ತು ಮೋಹಿತ್ ಠಾಕೂರ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಸೆಕ್ಷನ್ 294ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಲ್ಲದೆ ಆರೋಪಿಗಳ ವಿರುದ್ಧ ಗಲಭೆ, ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು, ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ ಮತ್ತು ಕ್ರಿಮಿನಲ್ ಬೆದರಿಕೆಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ ಮೀರತ್‌ ಎಸ್ಪಿ ಪಿಯೂಷ್ ಸಿಂಗ್, ಬಾಲಕನ ಮೇಲೆ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಲಾಗಿದ್ದು, ಆತನ ತಂದೆಯ ದೂರಿನ ಆಧಾರದ ಮೇಲೆ ನಾವು ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದೇವೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಸಂತ್ರಸ್ತನ ತಂದೆ ಈ ಬಗ್ಗೆ ಮಾತನಾಡಿದ್ದು, ಸಂಬಂಧಿಕರ ಮನೆಯಿಂದ ಹಿಂತಿರುಗುತ್ತಿದ್ದ ಮಗನನ್ನು ತಂಡವು ಅಪಹರಿಸಿ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಮಗ ಹಿಂತಿರುಗದ ಕಾರಣ ರಾತ್ರಿಯಿಡೀ ಆತನಿಗಾಗಿ ಹುಡುಕಾಟ ನಡೆಸಿದ್ದೇವೆ. ಆತ ರಾತ್ರಿ ಸಿಕ್ಕಿರಲಿಲ್ಲ. ಮರುದಿನ ಬೆಳಿಗ್ಗೆ ಅವರು ಮನೆಗೆ ಬಂದು ನಡೆದ ಘಟನೆಯನ್ನು ವಿವರಿಸಿದ್ದಾನೆ. ಈ ಬಗ್ಗೆ ನಾವು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದೆವು ಆದರೆ ಆರಂಭದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ನ.16ರಂದು ಮತ್ತೆ ಹೋಗಿದ್ದು, ಅಂದು ಪ್ರಕರಣ ದಾಖಲಾಗಿತ್ತು ಆದರೆ ಆರೋಪಿಗಳ ವಿರುದ್ಧ ಸಣ್ಣ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು  ಆರೋಪಿಸಿದ್ದಾರೆ.

ಇದನ್ನು ಓದಿ: ಪಾಲ್ ಲಿಂಚ್ ಅವರ ಕಾದಂಬರಿ ‘ಪ್ರೊಫೆಟ್ ಸಾಂಗ್‌’ಗೆ 2023ರ ಬೂಕರ್ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...