Homeಮುಖಪುಟಮೂರನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಬಾಲಕರು

ಮೂರನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಬಾಲಕರು

- Advertisement -
- Advertisement -

ಅಪ್ರಾಪ್ತ ವಿದ್ಯಾರ್ಥಿಗಳು ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಬಳಿಕ ಹತ್ಯೆಗೈದಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ನಡೆದಿದೆ.

ಮೃತ ಬಾಲಕಿ ಮೂರನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಆಕೆಯ ಸೀನಿಯರ್‌ಗಳಾದ ಆರನೇ ತರಗತಿಯಲ್ಲಿ ಓದುತ್ತಿರುವ 12 ಮತ್ತು 13 ವರ್ಷ ವಯಸ್ಸಿನ ಇಬ್ಬರು ಬಾಲಕರು ಅತ್ಯಾಚಾರವೆಸಗಿ, ಬಳಿಕ ಕೊಲೆ ಮಾಡಿದ್ದಾರೆ. ಸಾಕ್ಷ್ಯ ನಾಶಕ್ಕಾಗಿ ಬಾಲಕಿಯ ಮೃತದೇಹವನ್ನು ಕಾಲುವೆಯೊಂದಕ್ಕೆ ಎಸೆದಿದ್ದಾರೆ ಎಂದು ವರದಿಗಳು ಹೇಳಿವೆ.

ಆಂಧ್ರ ಪ್ರದೇಶದ ರಾಜಧಾನಿ ಅಮರಾವತಿಯಿಂದ 300 ಕಿಮೀ ದೂರದಲ್ಲಿರುವ ಮುಚ್ಚುಮರ್ರಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿಯ ಮೃತದೇಹ ಇನ್ನೂ ಪತ್ತೆಯಾಗಿಲ್ಲ ಎಂದು ಎನ್‌ಡಿವಿ ವರದಿ ಮಾಡಿದೆ.

ಬಾಲಕಿ ಭಾನುವಾರದಿಂದ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ತಂದೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಾಲಕಿ ಮುಚ್ಚುಮರ್ರಿ ಪಾರ್ಕ್‌ನಲ್ಲಿ ಆಟವಾಡುತ್ತಿದ್ದಳು, ಆದರೆ ಮನೆಗೆ ವಾಪಸ್ ಬಂದಿಲ್ಲ ಎಂದು ದೂರಿನಲ್ಲಿ ಹೇಳಿದ್ದರು. ಪೊಲೀಸರು ಹುಡುಕಾಟ ಆರಂಭಿಸಿ ಸ್ಥಳೀಯ ನಿವಾಸಿಗಳನ್ನು ವಿಚಾರಿಸಿದರೂ, ಬಾಲಕಿ ಪತ್ತೆಯಾಗಿರಲಿಲ್ಲ.

ಕೊನೆಗೆ ಬಾಲಕಿಯ ಪತ್ತೆ ಕಾರ್ಯಕ್ಕೆ ಪೊಲೀಸರು ಶ್ವಾನಗಳನ್ನು ಬಳಸಿದ್ದರು. ಶ್ವಾನವು ಬಾಲಕಿ ಹೋಗುತ್ತಿದ್ದ ಶಾಲೆಯ ವಿದ್ಯಾರ್ಥಿಗಳಾದ ಮೂವರು ಬಾಲಕರ ಮನೆ ಮುಂದೆ ಹೋಗಿ ನಿಂತಿತ್ತು. ಇಬ್ಬರು ಬಾಲಕರು 12 ವರ್ಷದವರಾಗಿದ್ದು 6 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇನ್ನೋರ್ವ 13 ವರ್ಷದ ಬಾಲಕ 7 ತರಗತಿಯ ವಿದ್ಯಾರ್ಥಿಯಾಗಿದ್ದ. ಪೊಲೀಸರು ಬಾಲಕರನ್ನು ವಿಚಾರಣೆಗೆ ಒಳಪಡಿಸಿದಾಗ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ವಿಚಾರವನ್ನು ಅವರು ಬಾಯ್ಬಿಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

“ಬಾಲಕಿ ಪಾರ್ಕ್‌ನಲ್ಲಿ ಆಟವಾಡುತ್ತಿದ್ದುದನ್ನು ನೋಡಿದ ನಾವು, ಆಕೆಯ ಜೊತೆ ಸೇರಿಕೊಂಡೆವು. ಬಳಿಕ ಆಕೆಯನ್ನು ಮುಚ್ಚುಮರ್ರಿ ಅಣೆಕಟ್ಟಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದೆವು. ಆಕೆ ಪೋಷಕರಿಗೆ ವಿಷಯ ತಿಳಿಸಬಹುದು ಎಂದು ಭಯಪಟ್ಟು ಕೊಲೆ ಮಾಡಿ ಮೃತದೇಹವನ್ನು ಸಮೀಪದ ಕಾಲುವೆಗೆ ಎಸೆದೆವು” ಎಂದು ಬಾಲಕರು ಹೇಳಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಶವ ಇನ್ನೂ ಪತ್ತೆಯಾಗದ ಕಾರಣ ನಾಪತ್ತೆ ಪ್ರಕರಣವಾಗಿ ಪರಿಗಣಿಸಿದ್ದೇವೆ ಎಂದು ಮುಚ್ಚುಮರ್ರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಜಯಶೇಖರ್ ಹೇಳಿದ್ದಾರೆ.

ಇದನ್ನೂ ಓದಿ : ‘ಅತ್ಯಂತ ವಿಷಾದಕರ’: ಜಾತಿ ತಾರತಮ್ಯ ಉತ್ತೇಜಿಸುವ ಜೈಲು ಕೈಪಿಡಿಗಳ ಕುರಿತು ಸುಪ್ರೀಂ ಕೋರ್ಟ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...