Homeಮುಖಪುಟ'ಶುದ್ದ ಗಾಳಿ ಮೂಲಭೂತ ಹಕ್ಕು' : ದೆಹಲಿಯಲ್ಲಿ ವಾಯುಮಾಲಿನ್ಯದ ವಿರುದ್ಧ ಬೀದಿಗಿಳಿದ ಜನ

‘ಶುದ್ದ ಗಾಳಿ ಮೂಲಭೂತ ಹಕ್ಕು’ : ದೆಹಲಿಯಲ್ಲಿ ವಾಯುಮಾಲಿನ್ಯದ ವಿರುದ್ಧ ಬೀದಿಗಿಳಿದ ಜನ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ವಿರುದ್ದ ಭಾನುವಾರ (ನ.9) ಬೃಹತ್ ಪ್ರತಿಭಟನೆ ನಡೆದಿದೆ. ಪೋಷಕರು, ಮಕ್ಕಳು, ಪರಿಸರ ಹೋರಾಟಗಾರರು ಮತ್ತು ಕೆಲ ರಾಜಕೀಯ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇಂಡಿಯಾ ಗೇಟ್‌ ಬಳಿ ಪ್ರತಿಭಟನೆ ನಡೆಸಿದ ನಾಗರಿಕರು, “ಸ್ವಚ್ಚ ಗಾಳಿ ನಮ್ಮೆಲ್ಲರ ಹಕ್ಕು” ಎಂದು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುದ್ದ ಗಾಳಿ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಲಾದ ಮೂಲಭೂತ ಹಕ್ಕಾಗಿದೆ (ಜೀವಿಸುವ ಹಕ್ಕು) ಎಂದು ಹೇಳಿದ್ದಾರೆ.

ವಿಷ ಗಾಳಿಯಿಂದ ಈಗಾಗಲೇ ಜನರು ಅನಾರೋಗ್ಯಕ್ಕೀಡಾಗಿದ್ದಾರೆ. ಮೂವರಲ್ಲಿ ಒಬ್ಬ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಸರ್ಕಾರ ಅಸಲಿ ದತ್ತಾಂಶಗಳನ್ನು ಮುಚ್ಚಿಟ್ಟು ರಾಜಕೀಯ ಮಾಡುತ್ತಿದೆ. ವಸ್ತುಸ್ಥಿತಿ ತಿಳಿಯಬೇಕೆಂದರೆ ಜನಪ್ರತಿನಿಧಿಗಳು ಬೀದಿಗಿಳಿಯಬೇಕು ಎಂದು ಪ್ರತಿಭಟನಾ ನಿರತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಸಂಸ್ಥೆಗಳು ಸುಳ್ಳು ದತ್ತಾಂಶಗಳನ್ನು ಒದಗಿಸಿ ರಾಜಕೀಯ ನಾಯಕರ ಹಿತ ಕಾಯುತ್ತಿವೆ. ವಾಯುಮಾಲಿನ್ಯ ರಾಜಕೀಯ ಮಾಡಬೇಕಾದ ವಿಷಯವಲ್ಲ. ಇಡೀ ನಗರ ವಿಷಗಾಳಿಯಿಂದ ತುಂಬಿಕೊಂಡಿದೆ. ಜನರು ಸಾಯುತ್ತಿದ್ದಾರೆ. ಹಾಗಾಗಿ, ಸ್ವಾಯತ್ತ ಸಂಸ್ಥೆಗಳಿಂದ ವಾಯು ಗುಣಮಟ್ಟವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ದೆಹಲಿಯ ವಾಯುಮಾಲಿನ್ಯದ ಬಗ್ಗೆ ಧ್ವನಿ ಎತ್ತದ, ಅದಕ್ಕೂ ನಮಗೂ ಸಂಬಂಧವೇ ಇಲ್ಲ ಎಂಬಂತೆ ಇರುವ ಜನರ ವಿರುದ್ದವೂ ಪ್ರತಿಭಟನಾ ನಿರತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರತಿಕ್ಷಣ ಉಸಿರಾಡುವ ಗಾಳಿಯ ಗಾಳಿಯ ಬಗ್ಗೆಯೂ ತಲೆ ಕೆಡಿಸಿಕೊಳ್ಳದ ಜನರು, ಇನ್ಯಾವುದನ್ನು ಪ್ರಶ್ನಿಸಿಯಾರು?” ಎಂದು ಕೆಲ ಪ್ರತಿಭಟನಾಕಾರರು ಪ್ರಶ್ನಿಸಿದ್ದಾಗಿ ವರದಿಯಾಗಿದೆ.

ಪೂರ್ವಾನುಮತಿ ಪಡೆಯದೆ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದಕ್ಕೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ.

ದೆಹಲಿಯ ವಾಯುಮಾಲಿನ್ಯದ ವಿರುದ್ದ ನವೆಂಬರ್ 6ರಂದು ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆದಿತ್ತು. ಅದರಲ್ಲಿ ವಿಜ್ಞಾನಿಗಳು, ಪರಿಸರ ಹೋರಾಟಗಾರರು, ವಿವಿಧ ವಲಯಗಳ ಪ್ರಮುಖರು ಮತ್ತು ಸಾಮಾನ್ಯ ನಾಗರಿಕರು ಸೇರಿ ಸುಮಾರು 80 ಮಂದಿ ಪಾಲ್ಗೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ವಿಪಕ್ಷ ನಾಯಕ ರಾಹುಲ್ ಗಾಂಧಿ ಈ ಪ್ರತಿಭಟನೆಯನ್ನು ಬೆಂಬಲಿಸಿದ್ದರು.

ಶುದ್ಧ ಗಾಳಿ ಪಡೆಯುವುದು ಮೂಲಭೂತ ಹಕ್ಕು ರಾಹುಲ್ ಗಾಂಧಿ ಹೇಳಿದ್ದರು. ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರನ್ನು ಬಂಧಿಸಿದ ಪೊಲೀಸರ ಕ್ರಮವನ್ನು ಅವರು ಟೀಕಿಸಿದ್ದರು.

ಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಂಪುಟ ಅಸ್ತು : ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...