Homeಮುಖಪುಟಕಾಂಗ್ರೆಸ್ ಇರುವವರೆಗೆ ಯಾವ ಶಕ್ತಿಗೂ ವಂಚಿತ ಜನರ ಮೀಸಲಾತಿಯನ್ನು ಕಸಿದುಕೊಳ್ಳಲು ಬಿಡುವುದಿಲ್ಲ: ರಾಹುಲ್‌ ಗಾಂಧಿ

ಕಾಂಗ್ರೆಸ್ ಇರುವವರೆಗೆ ಯಾವ ಶಕ್ತಿಗೂ ವಂಚಿತ ಜನರ ಮೀಸಲಾತಿಯನ್ನು ಕಸಿದುಕೊಳ್ಳಲು ಬಿಡುವುದಿಲ್ಲ: ರಾಹುಲ್‌ ಗಾಂಧಿ

- Advertisement -
- Advertisement -

ಸಂವಿಧಾನವನ್ನು ಬದಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು ಮತ್ತು ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರ ಮೀಸಲಾತಿಯನ್ನು ಕಿತ್ತುಕೊಳ್ಳುವುದು ಅವರ ಉದ್ದೇಶ ಎಂಬುದು ಬಿಜೆಪಿ ನಾಯಕರ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಕಾಂಗ್ರೆಸ್ ಇರುವವರೆಗೆ ಜಗತ್ತಿನ ಯಾವ ಶಕ್ತಿಯೂ ವಂಚಿತ ಜನರ ಮೀಸಲಾತಿಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಹೇಳಿದ್ದಾರೆ.

ಈ ಕುರಿತು ರಾಹುಲ್‌ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಬಿಜೆಪಿ ನಾಯಕರು ಮತ್ತು ನರೇಂದ್ರ ಮೋದಿಯವರಿಗೆ ಆಪ್ತರ ಹೇಳಿಕೆಗಳಿಂದ ಈಗ ಸ್ಪಷ್ಟವಾಗಿದೆ. ಅವರ ಉದ್ದೇಶ ಸಂವಿಧಾನವನ್ನು ಬದಲಾಯಿಸುವ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು. ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರ ಮೀಸಲಾತಿಯನ್ನು ಕಸಿದುಕೊಳ್ಳುವುದು ಮತ್ತು ದೇಶವನ್ನು ಮುನ್ನಡೆಸುವಲ್ಲಿ ಈ ಸಮುದಾಯಗಳ ಭಾಗವಹಿಸುವಿಕೆಯನ್ನೂ ತಡೆಯುವುದು ಬಿಜೆಪಿಯ ಗುರಿಯಾಗಿದೆ ಎಂದು ಹೇಳಿದ್ದಾರೆ.

ಸಂವಿಧಾನ ಮತ್ತು ಮೀಸಲಾತಿಯನ್ನು ರಕ್ಷಿಸಲು ಬಿಜೆಪಿಯ ಹಾದಿಯಲ್ಲಿ ಕಾಂಗ್ರೆಸ್ ಬಂಡೆಯಂತೆ ನಿಂತಿದೆ.  ಕಾಂಗ್ರೆಸ್ ಇರುವವರೆಗೆ ಜಗತ್ತಿನ ಯಾವ ಶಕ್ತಿಯೂ ವಂಚಿತ ಜನರ ಮೀಸಲಾತಿಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೋಟಾ ಕಿತ್ತುಕೊಳ್ಳುವ ಹೇಳಿಕೆಗಳನ್ನು ‘ಸುಳ್ಳು ಪ್ರಚಾರ’ ಎಂದು ಶನಿವಾರ ವಾಗ್ದಾಳಿ ನಡೆಸಿದ ಕಾಂಗ್ರೆಸ್,  ಬಿಜೆಪಿ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಗೆ ವಿರುದ್ಧವಾಗಿದೆ ಎಂದು ಹೇಳಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್ ಮಾತನಾಡಿ, ವಾಸ್ತವವೆಂದರೆ 1950 ರಿಂದ ಕಾಂಗ್ರೆಸ್ ಪ್ರಧಾನ ಮಂತ್ರಿಗಳು ಮತ್ತು ಕಾಂಗ್ರೆಸ್ ಸರ್ಕಾರಗಳು ಅಧಿಕಾರದಲ್ಲಿದ್ದಾಗ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ವಿಸ್ತರಿಸಲು ಮತ್ತು ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರಿಗೆ ನೀಡಿರುವ ಹಕ್ಕನ್ನು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಬಯಸಿದೆ ಎಂದು ಆರೋಪಿಸಿದ್ದರು. ಇದನ್ನು ಸುಳ್ಳು ಪ್ರಚಾರ ಎಂದು ಪ್ರಧಾನಿ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್‌ ಆಕ್ರೋಶವನ್ನು ವ್ಯಕ್ತಪಡಿಸಿತ್ತು.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read