Homeಕರ್ನಾಟಕಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದ ಮತದಾರ: ಎಬಿಪಿ ಸಿ–ವೋಟರ್ ಸಮೀಕ್ಷೆ

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದ ಮತದಾರ: ಎಬಿಪಿ ಸಿ–ವೋಟರ್ ಸಮೀಕ್ಷೆ

- Advertisement -
- Advertisement -

ಕೇಂದ್ರ ಚುನಾವಣಾ ಆಯೋಗ ಬುಧವಾರವಷ್ಟೇ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದು, ಈ ಬೆನ್ನಲ್ಲೇ ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ. ಎಬಿಪಿ ಸಿ–ವೋಟರ್ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿಚ್ಚಳ ಬಹುಮತ ಸಿಗಲಿದೆ ಎಂದು ಹೇಳಲಾಗಿದೆ.

ಕರ್ನಾಟಕ ವಿಧಾನಸಭೆಯ 224 ಸ್ಥಾನಗಳಿಗೆ ಚುನಾವಣೆ
ಕಾಂಗ್ರೆಸ್‌ ಪಕ್ಷ 115 – 127 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಲಾಗಿದೆ. ಆಡಳಿತರೂಢ ಬಿಜೆಪಿ ಪಕ್ಷ 68 – 80 ಸ್ಥಾನಗಳನ್ನು ಗೆಲ್ಲಬಹುದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ 23 – 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಿ–ವೋಟರ್ ಸಮೀಕ್ಷೆ ಹೇಳುತ್ತಿದೆ.

ರಾಜ್ಯದಲ್ಲಿ ಯಾರು ಸಿಎಂ ಆಗಬೇಕು? ಎನ್ನುವ ಪ್ರಶ್ನೆಗೆ ಮತದಾರರ ಒಲವು ಹೀಗಿದೆ- ರಾಜ್ಯದಲ್ಲಿ ಈ ಹಿಂದೆ 5 ವರ್ಷಗಳ ಕಾಲ ಸಂಪೂರ್ಣ ಅವಧಿಯ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಪರ ಶೇ 39.1 ಜನರು ಒಲವು ತೋರಿದ್ದಾರೆ. ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಶೇ 31.1 ಜನರು ಒಲವು ಹೊಂದಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಪರ ಶೇ 21.4 ಹಾಗೂ ಕಾಂಗ್ರೆಸ್‌ ಪಕ್ಷದಿಂದ ಸಿಎಂ ರೇಸ್‌ನಲ್ಲಿರುವ ಡಿ.ಕೆ.ಶಿವಕುಮಾರ್ ಪರ ಕೇವಲ ಶೇ 3.2 ಜನರು ಒಲವು ಹೊಂದಿದ್ದಾರೆ.

ಇದನ್ನೂ ಓದಿ: ವರುಣ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ: ಸಿದ್ದರಾಮಯ್ಯ

ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಜನರು ಅಭಿಪ್ರಾಯ ಹೇಗಿದೆ? ಎನ್ನುವ ಪ್ರಶ್ನೆಗೆ, ಶೇ 50ರಷ್ಟು ಜನರು ಬಿಜೆಪಿ ಸರ್ಕಾರ ಕಳಪೆ ಸಾಧನೆ ಮಾಡಿದೆ ಎಂದು ಹೇಳಿದ್ದಾರೆ. ಶೇ 47ರಷ್ಟು ಮಂದಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳಪೆ ಸಾಧನೆ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಉಳಿದಂತೆ ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ ಶೇ. 47 ರಷ್ಟು ಜನರು ಉತ್ತಮ ಆಡಳಿತ ಎಂದು ರೇಟಿಂಗ್‌ ನೀಡಿದ್ದಾರೆಂದು ಎಬಿಪಿ ಸಿ –ವೋಟರ್ ಸಮೀಕ್ಷೆ ಹೇಳಿದೆ.

ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ಗೆ ಶೇ 36 ಮತ್ತು ಬಿಜೆಪಿಗೆ ಶೇ 20 ಮತ ಹಂಚಿಕೆಯಾಗಲಿದೆ. ಈ ಭಾಗದ 55 ಸ್ಥಾನಗಳಲ್ಲಿ ಜೆಡಿಎಸ್‌ಗೆ 26-27 ಸ್ಥಾನಗಳನ್ನು ಮತ್ತು ಕಾಂಗ್ರೆಸ್‌ಗೆ 24-28 ಸ್ಥಾನಗಳು ಸಿಗಬಹುದು ಎಂದು ಅಂದಾಜಿಸಲಾಗಿದೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿಪಡಬಹುದು ಎಂದು ಸಮೀಕ್ಷಯಲ್ಲಿ ಹೇಳಲಾಗಿದೆ.

ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಶೇ 44 ಮತ್ತು ಬಿಜೆಪಿಗೆ ಶೇ 37ರಷ್ಟು ಮತ ಹಂಚಿಕೆಯಾಗಲಿದೆ. ಈ ಪ್ರದೇಶದಲ್ಲಿ ಕಾಂಗ್ರೆಸ್ 19-23 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಇನ್ನು ಬಿಜೆಪಿ 8-12 ಕ್ಷೇತ್ರಗಳಿಗೆ ಸೀಮಿತವಾಗಬಹುದು ಎಂದು ಅಂದಾಜಿಸಲಾಗಿದೆ.

ಮುಂಬೈ-ಕರ್ನಾಟಕ ಭಾಗದ 50 ಸ್ಥಾನಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಶೇ 43 ಮತಗಳನ್ನು ಗಳಿಸುವ ನಿರೀಕ್ಷೆಯಿದೆ. ಇದು ಲಿಂಗಾಯತ ಮತಗಳು ಪ್ರಾಬಲ್ಯ ಹೊಂದಿವೆ. ಇಲ್ಲಿಯೂ ಕೂಡ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಕಾಂಗ್ರೆಸ್ 25-29 ಸ್ಥಾನಗಳನ್ನು ಗೆಲ್ಲಲಿದೆ, ಬಿಜೆಪಿ 21-25 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಮೀಕ್ಷೆ ಹೇಳಿದೆ.

ಮಧ್ಯಕರ್ನಾಟಕ ಕೇಸರಿ ಪಕ್ಷದ ಭದ್ರಕೋಟೆ ಎಂದೇ ಹೇಳಲಾಗುತ್ತದೆ ಆದರೆ, ಮತದಾರರು ಮಾತ್ರ ಈ ಬಾರಿ ಕೇಸರಿ ಬಿಟ್ಟು ‘ಕೈ’ನತ್ತು ಒಲವು ತೋರುತ್ತಿದ್ದಾರೆ. ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಶೇ 38ರಷ್ಟು ಮತ, ಕಾಂಗ್ರೆಸ್ ಶೇ 41 ಮತಗಳನ್ನು ಗಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ಭಾಗದ 35 ಸ್ಥಾನಗಳಲ್ಲಿ ಬಿಜೆಪಿ 12-16 ಸ್ಥಾನಗಳನ್ನು ಗೆಲ್ಲುತ್ತದೆ. ಆದರೆ ಕಾಂಗ್ರೆಸ್ 18-22 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಇನ್ನು ಜೆಡಿಎಸ್‌ಗೆ 2ಕ್ಕಿಂತ ಹೆಚ್ಚು ಸ್ಥಾನ ಸಿಗುವುದಿಲ್ಲ ಎಂದು ಹೇಳಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಸಾಂಪ್ರದಾಯಕವಾಗಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಲಾಗಿದೆ. ಈ ಭಾಗದಲ್ಲಿ ಬಿಜೆಪಿ ಶೇ 46 ರಷ್ಟು ಮತಗಳನ್ನು ಗಳಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಶೇ 41ರಷ್ಟು ಮತದಾರರ ಬೆಂಬಲವನ್ನು ಪಡೆಯುತ್ತದೆ. ಜೆಡಿಎಸ್ ಒಟ್ಟು ಮತಗಳ ಶೇ 6ಕ್ಕಿಂತ ಕಡಿಮೆ ಮತ ಪಡೆಯಲಿದೆ. ಕೇವಲ 21 ಸ್ಥಾನಗಳನ್ನು ಕರಾವಳಿ ಹೊಂದಿದ್ದು, ಬಿಜೆಪಿಯು ಕಾಂಗ್ರೆಸ್‌ ಪ್ರಬಲ ಪೈಪೋಟಿ ಬೀಳಲಿದೆ. ಬಿಜೆಪಿ 9-13 ಸ್ಥಾನಗಳು, ಕಾಂಗ್ರೆಸ್‌ 8 ರಿಂದ 12 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...