Homeಮುಖಪುಟಪೆಟ್ರೋಲ್‌ ಬಂಕ್‌ಗಳಲ್ಲಿರುವ ಮೋದಿ ಭಾವಚಿತ್ರವನ್ನು ಶೀಘ್ರವೇ ತೆರವುಗೊಳಿಸಿ: ಚುನಾವಣಾ ಆಯೋಗ

ಪೆಟ್ರೋಲ್‌ ಬಂಕ್‌ಗಳಲ್ಲಿರುವ ಮೋದಿ ಭಾವಚಿತ್ರವನ್ನು ಶೀಘ್ರವೇ ತೆರವುಗೊಳಿಸಿ: ಚುನಾವಣಾ ಆಯೋಗ

ಎಲ್ಲಾ ಪೆಟ್ರೋಲ್ ವಿತರಕರು ಮತ್ತು ಇತರ ಏಜೆನ್ಸಿಗಳಿಗೆ ಕಲ್ಕತ್ತಾ ಚುನಾವಣಾ ಆಯೋಗ ಬುಧವಾರ ನಿರ್ದೇಶನ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ

- Advertisement -
- Advertisement -

ಪೆಟ್ರೋಲ್ ಬಂಕ್‌ಗಳಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಇನ್ನು 72 ಗಂಟೆಗಳ ಒಳಗೆ ತೆರವುಗೊಳಿಸಬೇಕು ಎಂದು ಭಾರತದ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಹೊಂದಿರುವ ಕೇಂದ್ರ ಸರ್ಕಾರದ ಯೋಜನೆಗಳ ಜಾಹೀರಾತುಗಳನ್ನು 72 ಗಂಟೆಗಳ ಒಳಗೆ ಆವರಣದಿಂದ ತೆರವುಗೊಳಿಸುವಂತೆ ಎಲ್ಲಾ ಪೆಟ್ರೋಲ್ ವಿತರಕರು ಮತ್ತು ಇತರ ಏಜೆನ್ಸಿಗಳಿಗೆ ಕಲ್ಕತ್ತಾ ಚುನಾವಣಾ ಆಯೋಗ ಬುಧವಾರ ಆದೇಶ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಾಹೀರಾತು ಪ್ರಕಟಣೆಗಳಲ್ಲಿ ಪ್ರಧಾನ ಮಂತ್ರಿಯ ಭಾವಚಿತ್ರವನ್ನು ಬಳಸುವುದು ಚುನಾವಣಾ ಮಾದರಿ ನೀತಿ ಸಂಹಿತೆಯನ್ನು (ಎಂಸಿಸಿ) ಉಲ್ಲಂಘಿಸುತ್ತದೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ಇತ್ತೀಚೆಗಷ್ಟೆ ತೃಣಮೂಲ ಕಾಂಗ್ರೆಸ್ ಪಕ್ಷದ ನಿಯೋಗ ಇಸಿಐ ಅಧಿಕಾರಿಗಳನ್ನು ಭೇಟಿಯಾಗಿ, ಪಿಎಂ ಮೋದಿಯವರ ಭಾವಚಿತ್ರಗಳನ್ನು ಕೇಂದ್ರದ ವಿವಿಧ ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಬ್ಯಾನರ್‌ಗಳಲ್ಲಿ ಬಳಸುವುದು ಹಾಗೂ ಕೋವಿಡ್‌ ವ್ಯಾಕ್ಸಿನ್‌ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಭಾವಚಿತ್ರವನ್ನು ಬಳಸುವುದು ಚುನಾವಣಾ ಸಂಹಿತೆಯನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿತ್ತು.

ಫೆಬ್ರವರಿ 26 ರಂದು ಚುನಾವಣಾ ಆಯೋಗವು ಪಂಚರಾಜ್ಯಗಳ ಚುನಾವಣಾ ದಿನಾಂಕವನ್ನು ಘೋಷಿಸಿತ್ತು. ಅಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ.


ಇದನ್ನೂ ಓದಿ: ‘ನಾಝಿ ಆಡಳಿತ ಬೇಟೆಯಾಡುತ್ತಿದೆ’ – ಕೇಂದ್ರದ ವಿರುದ್ದ ತೇಜಸ್ವಿ ಯಾದವ್‌ ತೀವ್ರ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

“ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗದಿದ್ದರೆ ಮತ್ತೆ ಹಾಗೆ ಮಾಡ್ತಾರೆ”: ಅತ್ಯಾಚಾರ ಸಂತ್ರಸ್ತೆಯ ಸಹೋದರಿ ಹೇಳಿಕೆ

0
"ಪ್ರಜ್ವಲ್ ಮತ್ತು ರೇವಣ್ಣ ಯಾವತ್ತೂ ತಲೆ ಎತ್ತಿ ನಡೆಯಬಾರದು, ಅಂತಹ ಶಿಕ್ಷೆಯಾಗಬೇಕು" ಎಂದು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೊಬ್ಬರ ಸಹೋದರಿ ಮಾಲಾ (ಹೆಸರು ಬದಲಿಸಲಾಗಿದೆ) ಹೇಳಿರುವುದಾಗಿ thenewsminute.com ವರದಿ ಮಾಡಿದೆ. ಮಾಲಾಗೆ ತನ್ನ ಸಹೋದರಿ...