ಪ್ರಿಯಾಂಕ ಗಾಂಧಿ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಮಹಿಳಾ ಪೊಲೀಸರ ವಿರುದ್ದ ತನಿಖೆಗೆ ಆದೇಶ | Naanu gauri

ಬುಧವಾರ ಆಗ್ರಾಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಉತ್ತರ ಪ್ರದೇಶದ ಪೊಲೀಸರು ತಡೆದಿದ್ದರು. ಈ ವೇಳೆ ಅವರೊಂದಿಗೆ ಕೆಲವು ಮಹಿಳಾ ಪೊಲೀಸರು ಖುಷಿಯಿಂದ ಸೆಲ್ಫಿ ತೆಗೆದುಕೊಂಡಿದ್ದರು. ಇದೀಗ ಅವರ ವಿರುದ್ದ ಪ್ರಾಥಮಿಕ ತನಿಖೆಗೆ ಲಕ್ನೋ ಪೊಲೀಸ್ ಆಯುಕ್ತ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಮಹಿಳಾ ಪೊಲೀಸರು ಪ್ರಿಯಾಂಕ ಅವರೊಂದಿಗೆ ಸೆಲ್ಪಿ ತೆಗೆದುಕೊಳ್ಳುತ್ತಿರುವ ಚಿತ್ರ ವೈರಲ್ ಆಗುತ್ತಿದ್ದಂತೆ, ಮಹಿಳಾ ಪೊಲೀಸರ ವರ್ತನೆಯೂ ಪೊಲೀಸ್ ನಿಯಮಾವಳ ಉಲ್ಲಂಘನೆಯಾಗಿದೆಯೆ ಎಂದು ವಿಚಾರಿಸಲು ಕೇಂದ್ರೀಯ ವಿಭಾಗದ ಉಪ ಪೊಲೀಸ್‌ ಆಯುಕ್ತರಿಗೆ ಕೇಳಲಾಗಿದ್ದು, ಈ ವರದಿಯ ಆಧಾರಲ್ಲಿ ಮಹಿಳಾ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವುದೋ ಬೇಡವೇ ಎಂದು ಆಯುಕ್ತರು ನಿರ್ಧರಿಸಲಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಹತ್ಯಾಕಾಂಡದ ಹುತಾತ್ಮ ರೈತರಿಗೆ ಅಂತಿಮ ನಮನ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿ

ಈ ಫೋಟೊ ವೈರಲ್ ಆಗುತ್ತಿದ್ದಂತೆ ಯುಪಿ ಸರ್ಕಾರ ಅವರ ವಿರುದ್ದ ಕ್ರಮ ಕೈಗೊಳ್ಳುತ್ತದೆ ಎಂದು ಹಲವರು ಅಂದಾಜಿಸಿದ್ದರು. ಇದೇ ಆತಂಕವನ್ನು ಪ್ರಿಯಾಂಕ ಗಾಂಧಿ ಕೂಡಾ ವ್ಯಕ್ತಪಡಿಸಿದ್ದಾರೆ. “ಈ ಚಿತ್ರದಿಂದ ಆದಿತ್ಯಾನಾಥ್‌ ಅವರು ತುಂಬಾ ಅಸಮಾಧಾನಗೊಂಡಿದ್ದಾರೆ ಎಂದು ಸುದ್ದಿ ಬರುತ್ತಿದೆ. ಈ ಮಹಿಳಾ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲು ಅವರು ಬಯಸುತ್ತಿದ್ದಾರೆ” ಎಂದು ಪ್ರಿಯಾಂಕ ಗಾಂಧಿ ಹೇಳಿದ್ದು, ನನ್ನೊಂದಿಗೆ ಚಿತ್ರ ತೆಗೆಯುವುದು ಅಪರಾಧವಾಗಿದ್ದರೆ, ಅದಕ್ಕಾಗಿ ನನಗೂ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕ ಗಾಂಧಿ, “ಈ ಚಿತ್ರದಿಂದ ಆದಿತ್ಯನಾಥ್‌‌ ತುಂಬಾ ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿ ಬರುತ್ತಿದೆ. ಅವರು ಈ ಮಹಿಳಾ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲು ಬಯಸುತ್ತಿದ್ದಾರೆ. ನನ್ನೊಂದಿಗೆ ಚಿತ್ರ ತೆಗೆಯುವುದು ಅಪರಾಧವಾಗಿದ್ದರೆ, ಅದಕ್ಕಾಗಿ ನನಗೂ ಶಿಕ್ಷೆಯಾಗಬೇಕು. ಸರ್ಕಾರ ಈ ಶ್ರಮಜೀವಿ ಮತ್ತು ನಿಷ್ಠಾವಂತ ಪೊಲೀಸರ ವೃತ್ತಿಜೀವನವನ್ನು ಹಾಳು ಮಾಡುವುದು ಸರಿಯಲ್ಲ” ಎಂದು ಹೇಳಿದ್ದಾರೆ.

 

 

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬವನ್ನು ಭೇಟಿಯಾಗಲು ಪ್ರಿಯಾಂಕ ಗಾಂಧಿ ಆಗ್ರಾಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು. ಹಲವಾರು ಮಹಿಳಾ ಪೊಲೀಸರು ಅವರೊಂದಿಗೆ ಖುಷಿಯಿಂದಲೇ ಸೆಲ್ಫಿ ತೆಗೆದುಕೊಂಡಿದ್ದರು.

ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಶೇ.40 ರಷ್ಟು ಟಿಕೆಟ್‌ ಮಹಿಳೆಯರಿಗೆ: ಪ್ರಿಯಾಂಕಾ ಗಾಂಧಿ

LEAVE A REPLY

Please enter your comment!
Please enter your name here