Homeಮುಖಪುಟಪರಿಸರವಾದಿ ಸೋನಮ್ ವಾಂಗ್ಚುಕ್ ಬಿಡುಗಡೆ; ಉಪವಾಸ ಅಂತ್ಯ

ಪರಿಸರವಾದಿ ಸೋನಮ್ ವಾಂಗ್ಚುಕ್ ಬಿಡುಗಡೆ; ಉಪವಾಸ ಅಂತ್ಯ

- Advertisement -
- Advertisement -

ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಹಾಗೂ ಲಡಾಖ್‌ನ ಹಲವಾರು ಇತರ ಹೋರಾಟಗಾರರು ಬುಧವಾರ ಸಂಜೆ ಮಹಾತ್ಮ ಗಾಂಧಿಯವರ ಸ್ಮಾರಕ ರಾಜ್‌ಘಾಟ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ, ಅವರನ್ನು ಪೊಲೀಸ್ ಬಂಧನದಿಂದ ಬಿಡುಗಡೆ ಮಾಡಲಾಗಿದೆ. ಬಳಿಕ ಅವರು ತಮ್ಮ ಉಪವಾಸವನ್ನು ಕೊನೆಗೊಳಿಸಲಾಗಿದೆ ಎಂದು ಹೇಳಿದರು.

ಗುಂಪು ತಮ್ಮ ಬೇಡಿಕೆಗಳನ್ನು ಪಟ್ಟಿ ಮಾಡುವ ಜ್ಞಾಪಕ ಪತ್ರವನ್ನು ಸರ್ಕಾರಕ್ಕೆ ನೀಡಿದ್ದು, ಶೀಘ್ರದಲ್ಲೇ ಉನ್ನತ ನಾಯಕತ್ವದೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಲಾಗಿದೆ ಎಂದು ವಾಂಗ್ಚುಕ್ ಹೇಳಿದರು.

“ಇಂತಹ ಸಾಂವಿಧಾನಿಕ ನಿಬಂಧನೆಗಳ ಅಡಿಯಲ್ಲಿ ಲಡಾಖ್ ಅನ್ನು ರಕ್ಷಿಸಲು ನಾವು ಸರ್ಕಾರಕ್ಕೆ ಜ್ಞಾಪಕ ಪತ್ರವನ್ನು ನೀಡಿದ್ದೇವೆ. ಇದರಿಂದ ಅಲ್ಲಿನ ಪರಿಸರವನ್ನು ಸಂರಕ್ಷಿಸಬಹುದು, ಸಂವಿಧಾನದ ಆರನೇ ಶೆಡ್ಯೂಲ್ ಸ್ಥಳೀಯರಿಗೆ ಸಂಪನ್ಮೂಲಗಳನ್ನು ನಿರ್ವಹಿಸುವ ಹಕ್ಕನ್ನು ನೀಡುತ್ತದೆ” ಎಂದು ವಾಂಗ್ಚುಕ್ ಮಾಧ್ಯಮಗಳಿಗೆ ತಿಳಿಸಿದರು.

“ಹಿಮಾಲಯದಲ್ಲಿ ಸ್ಥಳೀಯರು ಸಬಲೀಕರಣಗೊಳ್ಳಬೇಕು. ಏಕೆಂದರೆ, ಅವರು ಅದನ್ನು ಉತ್ತಮವಾಗಿ ಸಂರಕ್ಷಿಸಬಹುದು. ಮುಂದಿನ ದಿನಗಳಲ್ಲಿ ನಾವು ಪ್ರಧಾನಿ, ರಾಷ್ಟ್ರಪತಿ ಅಥವಾ ಗೃಹ ಸಚಿವರನ್ನು ಭೇಟಿ ಮಾಡಲಿದ್ದೇವೆ, ಇದು ಗೃಹ ಸಚಿವಾಲಯ ನಮಗೆ ನೀಡಿರುವ ಭರವಸೆಯಾಗಿದೆ” ಎಂದರು.

“ನಾವು ಲಡಾಖ್‌ಗೆ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಬೇಡಿಕೆ ಇಟ್ಟಿದ್ದೇವೆ, ಆರನೇ ಶೆಡ್ಯೂಲ್ ಕೂಡ ಅದರ ಒಂದು ಭಾಗವಾಗಿದೆ. ನಮಗೆ ಉನ್ನತ ನಾಯಕತ್ವವನ್ನು ಭೇಟಿ ಮಾಡಿಸುವ ಭರವಸೆ ನೀಡಲಾಗಿದೆ ಮತ್ತು ಸಭೆಯ ದಿನಾಂಕವನ್ನು ಒಂದೆರಡು ದಿನಗಳಲ್ಲಿ ದೃಢೀಕರಿಸಲಾಗುವುದು” ಎಂದು ವಾಂಗ್ಚುಕ್ ಹೇಳಿದರು.

ವಾಂಗ್ಚುಕ್ ಮತ್ತು ಇತರ ಎಲ್ಲ ಪಾದಯಾತ್ರಿಗಳನ್ನು ಸಂಜೆ ಬಿಡುಗಡೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

“ರಾಷ್ಟ್ರೀಯ ರಾಜಧಾನಿಯ ಕೇಂದ್ರ ಭಾಗಗಳಲ್ಲಿ ಸೆಕ್ಷನ್ 163 ಅನ್ನು ವಿಧಿಸಲಾಗಿರುವುದರಿಂದ ಯಾವುದೇ ಯಾತ್ರೆಯನ್ನು ನಡೆಸುವಂತಿಲ್ಲ ಎಂಬ ಭರವಸೆಯ ನಂತರ ಅವರನ್ನು ಹೋಗಲು ಅನುಮತಿಸಲಾಗಿದೆ” ಎಂದು ಅಧಿಕಾರಿ ಹೇಳಿದರು.

ಸೋನಮ್ ವಾಂಗ್ಚುಕ್ ಅವರನ್ನು ಬವಾನಾ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು ಮತ್ತು ಇತರ ‘ಪಾದಯಾತ್ರಿಗಳು’ ದೆಹಲಿ-ಹರಿಯಾಣ ಗಡಿಯಲ್ಲಿ ಇತರ ಮೂರು ಪೊಲೀಸ್ ಠಾಣೆಗಳಲ್ಲಿ ಇರಿಸಲಾಗಿತ್ತು.

ರಾತ್ರಿ 9.30 ರ ಸುಮಾರಿಗೆ ರಾಜ್‌ಘಾಟ್‌ವರೆಗೆ ಎಲ್ಲರನ್ನು ಪೊಲೀಸ್ ಸಿಬ್ಬಂದಿ ಬಸ್‌ಗಳಲ್ಲಿ ಕರೆದೊಯ್ಯಲಾಯಿತು. ನಂತರ, ವಾಂಗ್‌ಚುಕ್ ಮತ್ತು ಇತರ ಎಲ್ಲ ಪಾದಯಾತ್ರಿಗಳಿಗೆ ಮನೆಗೆ ಹೋಗಲು ಅನುಮತಿಸಲಾಯಿತು.

ಸರ್ಕಾರವನ್ನು ಭೇಟಿಯಾಗಲು ವಾಂಗ್ಚುಕ್ ಇನ್ನೂ ಕೆಲವು ದಿನಗಳ ಕಾಲ ದೆಹಲಿಯಲ್ಲಿ ಉಳಿಯಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಲೇಹ್ ಅಪೆಕ್ಸ್ ಬಾಡಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್‌ನ ಪ್ರತಿನಿಧಿಗಳೊಂದಿಗೆ 15 ದಿನಗಳಲ್ಲಿ ಮಾತುಕತೆ ಪುನರಾರಂಭವಾಗಲಿದೆ ಎಂದು ಅವರಿಗೆ ಭರವಸೆ ನೀಡಲಾಗಿದೆ ಎಂದು ವಾಂಗ್‌ಚುಕ್ ಹೇಳಿದರು.

ವಾಂಗ್ಚುಕ್ ಅವರು ಒಂದು ತಿಂಗಳ ಹಿಂದೆ ಲೇಹ್‌ನಿಂದ ಪ್ರಾರಂಭವಾದ ‘ದೆಹಲಿ ಚಲೋ ಪಾದಯಾತ್ರೆ’ಯನ್ನು ಮುನ್ನಡೆಸುತ್ತಿದ್ದರು. ಕೇಂದ್ರಾಡಳಿತ ಪ್ರದೇಶಕ್ಕೆ ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ರಕ್ಷಣೆ ನೀಡುವಂತೆ ಒತ್ತಾಯಿಸಿ ದೆಹಲಿಗೆ ಮೆರವಣಿಗೆ ನಡೆಸುತ್ತಿದ್ದ ಲಡಾಖ್‌ನಿಂದ ಸುಮಾರು 170 ಜನರನ್ನು ಸೋಮವಾರ ರಾತ್ರಿ ದೆಹಲಿಯ ಸಿಂಘು ಗಡಿಯಲ್ಲಿ ಬಂಧಿಸಲಾಯಿತು. ವಿವಿಧ ಪೊಲೀಸ್ ಠಾಣೆಗಳಿಗೆ ಕರೆದೊಯ್ದ ನಂತರ ಅವರು ಉಪವಾಸ ಮುಷ್ಕರ ಆರಂಭಿಸಿದ್ದರು.

ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಜೊತೆಗೆ ಕಳೆದ ನಾಲ್ಕು ವರ್ಷಗಳಿಂದ ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಒತ್ತಾಯಿಸಿ, ಅದನ್ನು ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಸೇರಿಸಲು ಆಂದೋಲನವನ್ನು ಮುನ್ನಡೆಸುತ್ತಿರುವ ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ) ಈ ಮೆರವಣಿಗೆಯನ್ನು ಆಯೋಜಿಸಿದೆ. ಲಡಾಖ್‌ಗೆ ಸಾರ್ವಜನಿಕ ಸೇವಾ ಆಯೋಗ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಪ್ರತ್ಯೇಕ ಲೋಕಸಭಾ ಸ್ಥಾನಗಳ ಜೊತೆಗೆ ಆರಂಭಿಕ ನೇಮಕಾತಿ ಪ್ರಕ್ರಿಯೆಗೆ ಬೇಡಿಕೆ ಇಟ್ಟಿವೆ.

ಇದನ್ನೂ ಓದಿ; ಕುಕಿ ಬಂಡುಕೋರರಿಂದ ಅಪಹರಣಕ್ಕೊಳಗಾದ ಇಬ್ಬರು ಮೈತೆಯಿ ಯುವಕರ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...