Homeಮುಖಪುಟಜಮ್ಮು ಕಾಶ್ಮೀರದ ಕಿಶ್ತ್ವಾರದಲ್ಲಿ ಮೇಘಸ್ಫೋಟ: 38ಕ್ಕೂ ಹೆಚ್ಚು ಜನರು ಸಾವು, ಕಾಣೆಯಾಗಿರುವ 200ಕ್ಕೂ ಹೆಚ್ಚು ಜನ

ಜಮ್ಮು ಕಾಶ್ಮೀರದ ಕಿಶ್ತ್ವಾರದಲ್ಲಿ ಮೇಘಸ್ಫೋಟ: 38ಕ್ಕೂ ಹೆಚ್ಚು ಜನರು ಸಾವು, ಕಾಣೆಯಾಗಿರುವ 200ಕ್ಕೂ ಹೆಚ್ಚು ಜನ

- Advertisement -
- Advertisement -

ಜಮ್ಮು ಕಾಶ್ಮೀರದ ಕಿಶ್ತ್ವಾರ ಜಿಲ್ಲೆಯ ಚಶೋತಿ ಪ್ರದೇಶದಲ್ಲಿ ಗುರುವಾರ (ಆ.14) ಸಂಭವಿಸಿದ ಮೇಘಸ್ಫೋಟದಿಂದ ಹಠಾತ್ ಪ್ರವಾಹ ಉಂಟಾಗಿ 38ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ  40ಕ್ಕೆ ಏರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. 200ಕ್ಕೂ ಹೆಚ್ಚು ಕಾಣೆಯಾಗಿರುವ ಕುರಿತು ವರದಿಯಾಗಿದೆ.

ಮಚೈಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಈ ದುರಂತ ಸಂಭವಿಸಿದೆ. ಯಾತ್ರಾರ್ಥಿಗಳ ಭಾರೀ ದಟ್ಟಣೆ ಮತ್ತು ನಿರಂತರ ಮಳೆ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ. ಮೇಘಸ್ಫೋಟ ಸಂಭವಿಸಿದಾಗ ದುರಂತ ಸ್ಥಳದಲ್ಲಿ 250ಕ್ಕೂ ಹೆಚ್ಚು ಜನರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದುರಂತ ಸ್ಥಳದಲ್ಲಿ ರಕ್ಷಣಾ ತಂಡಗಳು ಅವಿಶ್ರಾಂತವಾಗಿ ಕೆಲಸ ಮಾಡುತ್ತಿವೆ. ಇದುವರೆಗೆ 100ರಿಂದ 150 ಜನರನ್ನು ರಕ್ಷಿಸಲಾಗಿದೆ. ಅವರನ್ನು ಸ್ಥಳಾಂತರಿಸಲು ಮತ್ತು ವೈದ್ಯಕೀಯ ನೆರವು ನೀಡಲು ನಾವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದೇವೆ” ಎಂದು ಕಿಶ್ತ್ವಾರ ಡಿಡಿಸಿ ಅಧ್ಯಕ್ಷೆ ಪೂಜಾ ಠಾಕೂರ್ ತಿಳಿಸಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಾಹನ ನಿಲುಗಡೆ ಸ್ಥಳ, ಲಂಗರ್ (ಸಮುದಾಯ ಅಡುಗೆಮನೆ) ಮತ್ತು ಸಿಆರ್‌ಪಿಎಫ್ ಶಿಬಿರದ ಮೇಲೆ ಹಠಾತ್ ಪ್ರವಾಹವು ನುಗ್ಗಿದ್ದು, ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಆದರೆ, ಪ್ರತಿಕೂಲ ಹವಾಮಾನ ಮತ್ತು ಹಾನಿಗೊಳಗಾದ ರಸ್ತೆಗಳು ಪ್ರಯತ್ನಗಳಿಗೆ ಅಡ್ಡಿಯಾಗುತ್ತಿವೆ ಎಂದಿದ್ದಾರೆ.

ಬಿಹಾರ ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳು ಮತ್ತು ಅದಕ್ಕೆ ಕಾರಣ ಬಹಿರಂಗಪಡಿಸಿ: ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...