Homeಮುಖಪುಟಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತಕ್ಕೆ 5 ಮಂದಿ ಬಲಿ

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ, ಭೂಕುಸಿತಕ್ಕೆ 5 ಮಂದಿ ಬಲಿ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಶುಕ್ರವಾರದಿಂದ ಸುರಿಯುತ್ತಿರುವ ಭಾರೀ ಮಳೆ ಮತ್ತು ಭೂಕುಸಿತದಿಂದ ಉಂಟಾಗಿರುವ ಹವಾಮಾನ ವೈಪರೀತ್ಯದಿಂದ ಐದು ಜನರು ಸಾವನ್ನಪ್ಪಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಮಿಂಚು, ಬಿರುಗಾಳಿ, ಆಲಿಕಲ್ಲು ಮತ್ತು ಹಿಮ ಬಿದ್ದಿದ್ದು, ರಂಬನ್ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ಹಲವಾರು ವಸತಿ ಮತ್ತು ವಾಣಿಜ್ಯ ಕಟ್ಟಡಗಳು ಕುಸಿದು ಬಿದ್ದಿದ್ದು, ಕನಿಷ್ಠ 500 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

“ಭಾನುವಾರ ರಿಯಾಸಿಯ ಅರ್ನಾಸ್‌ನ ಜಮೇದಿ ಗ್ರಾಮದಲ್ಲಿ ಸಿಡಿಲು ಬಡಿದಿದೆ. ಇದರಿಂದ ಇಬ್ಬರು ಸ್ಥಳೀಯರು ಸಾವನ್ನಪ್ಪಿದರು. ಸುಮಾರು 40 ಜಾನುವಾರುಗಳು ಸಿಡಿಲಿಗೆ ಬಲಿಯಾದವು.” ಎಂದು ಸಮುದಾಯದ ನಾಯಕ ತಾಲಿಬ್ ಹುಸಿಯಾನ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ರಾಂಬನ್ ಜಿಲ್ಲೆಯ ಬಾಗ್ನಾದಲ್ಲಿ ಮನೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. “ರಾಂಬನ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ರಾಂಬನ್ ಪ್ರದೇಶದಲ್ಲಿ ರಾತ್ರಿಯಿಡೀ ಭಾರೀ ಆಲಿಕಲ್ಲು ಮಳೆ, ಹಲವಾರು ಭೂಕುಸಿತಗಳು ಮತ್ತು ವೇಗದ ಗಾಳಿ ಬೀಸಿತು” ಎಂದು ಉಧಂಪುರ್‌ ಬಿಜೆಪಿ ಸಂಸದ ಜಿತೇಂದ್ರ ಸಿಂಗ್ ಎಕ್ಸ್‌ನಲ್ಲಿ ಹೇಳಿದ್ದಾರೆ. “ರಾಷ್ಟ್ರೀಯ ಹೆದ್ದಾರಿ ಮುಚ್ಚಿಹೋಗಿದ್ದು, ದುರದೃಷ್ಟವಶಾತ್ ಮೂರು ಸಾವುನೋವುಗಳು ಮತ್ತು ಎರಡು ಕುಟುಂಬಗಳಿಗೆ ಆಸ್ತಿ ನಷ್ಟ ಸಂಭವಿಸಿದೆ.” ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರ ಸರ್ಕಾರವು ಅಧಿಕೃತವಾಗಿ ಯಾವುದೇ ಸಾವುನೋವುಗಳ ಅಂಕಿ ಅಂಶ ಬಿಡುಗಡೆ ಮಾಡಿಲ್ಲ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ರಾಂಬನ್‌ನ ತಗ್ಗು ಪ್ರದೇಶಗಳಿಂದ ನಿವಾಸಿಗಳನ್ನು ರಕ್ಷಿಸಲು ಕೇಂದ್ರಾಡಳಿತ ಪ್ರದೇಶದ ತುರ್ತು ನಿಯಂತ್ರಣ ಕೇಂದ್ರವು ಕಂದಾಯ ಇಲಾಖೆ ಮತ್ತು ಪೊಲೀಸ್ ತಂಡಗಳನ್ನು ನೇಮಿಸಿದೆ.

ಜಮ್ಮು ಕಾಶ್ಮೀರದಲ್ಲಿ ಭಾನುವಾರದವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ತಿಳಿಸಿತ್ತು. ಭಾನುವಾರ ಹೊಸದಾಗಿ ನೀಡಿರುವ ಸಲಹೆಯಲ್ಲಿ, ಸೋಮವಾರದವರೆಗೆ ಪ್ರದೇಶದಾದ್ಯಂತ ಗುಡುಗು ಮತ್ತು ಮಿಂಚಿ ಸಹಿತ ಮಳೆ ಇರಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅನಿರೀಕ್ಷಿತ ಹಠಾತ್ ಪ್ರವಾಹದ ಅಪಾಯವನ್ನು ಉಲ್ಲೇಖಿಸಿ, ರಸ್ತೆ ಅಂಡರ್‌ಪಾಸ್‌ಗಳು, ಒಳಚರಂಡಿ ಹಳ್ಳಗಳು ಮತ್ತು ನೀರು ಸಂಗ್ರಹವಾಗುವ ತಗ್ಗು ಪ್ರದೇಶಗಳಿಂದ ದೂರವಿರಲು ಸಾರ್ವಜನಿಕರಿಗೆ ಹವಮಾನ ಇಲಾಖೆ ಸಲಹೆ ನೀಡಿದೆ.

“ಪ್ರವಾಹಕ್ಕೆ ಸಿಲುಕಿರುವ ರಸ್ತೆಯನ್ನು ದಾಟಲು ಪ್ರಯತ್ನಿಸಬೇಡಿ. ನೀರು ನೀವು ಕಾಣುವುದಕ್ಕಿಂತ ಆಳ ಮತ್ತು ತೀವ್ರವಾಗಿರಬಹುದು ಮತ್ತು ಬಂಡೆಯ ರಾಶಿಗಳು, ಚೂಪಾದ ಅಥವಾ ಅಪಾಯಕಾರಿ ವಸ್ತುಗಳು, ಗುಂಡಿಗಳು ಅಥವಾ ವಿದ್ಯುತ್ ತಂತಿಗಳು ಇರದಲ್ಲಿ ಬಿದ್ದಿರಬಹುದು” ಎಂದು ಇಲಾಖೆ ಹೇಳಿದೆ.

ರಂಬನ್‌ನಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹದಿಂದ “ತೀವ್ರ ದುಃಖಿತನಾಗಿದ್ದೇನೆ” ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಅಗತ್ಯವಿರುವಲ್ಲೆಲ್ಲಾ ತಕ್ಷಣದ ರಕ್ಷಣಾ ಪ್ರಯತ್ನಗಳನ್ನು ಖಚಿತಪಡಿಸಿಕೊಳ್ಳಲು ನಾವು ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಅವರು ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ. ಜಮ್ಮು ಕಾಶ್ಮೀರದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಮಿಳುನಾಡಿನಲ್ಲಿ ಹೇಗಾದರೂ ಹಿಂದಿ ಹೇರಲು ಕೇಂದ್ರ ಸರ್ಕಾರ ಬಯಸುತ್ತಿದೆ: ಉದಯನಿಧಿ ಸ್ಟಾಲಿನ್

ತಮಿಳುನಾಡಿನಲ್ಲಿ ಹೇಗಾದರೂ ಹಿಂದಿ ಹೇರಲು ಕೇಂದ್ರ ಸರ್ಕಾರ ಬಯಸುತ್ತಿದೆ: ಉದಯನಿಧಿ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...