Homeಕರ್ನಾಟಕಮಹಾಧರಣಿ| ದುಡಿವ ಜನರ ಸಮಸ್ಯೆ ಆಲಿಸಲು ಸಿಎಂ ಒಪ್ಪಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

ಮಹಾಧರಣಿ| ದುಡಿವ ಜನರ ಸಮಸ್ಯೆ ಆಲಿಸಲು ಸಿಎಂ ಒಪ್ಪಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಧರಣಿ ನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದಾರೆ. ಶೀಘ್ರದಲ್ಲೇ ಹೋರಾಟಗಾರರೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ದುಡಿಯುವ ಜನರ ಮಹಾಧರಣಿ ಸ್ಥಳಕ್ಕೆ ಬಂದು ಹೋರಾಟಗಾರರ ಹಕ್ಕೊತ್ತಾಯಗಳನ್ನು ಆಲಿಸಿ, ಅವರು ಮಾತನಾಡಿದರು. “ಮುಖ್ಯಮಂತ್ರಿಗಳು ಜನತಾ ದರ್ಶನ ಕಾರ್ಯಕ್ರಮದಲ್ಲಿದ್ದಾರೆ. ಇಲ್ಲಿನ ಹೋರಾಟದ ಬಗ್ಗೆ ಅವರಿಗೆ ಅರಿವಿದೆ. ಅವರ ಪರವಾಗಿ ನನ್ನನ್ನು ಕಳಿಸಿದ್ದಾರೆ. ಹೋರಾಟಗಾರರು ಮುಂದಿಟ್ಟಿರುವ ಎಲ್ಲ ಹಕ್ಕೊತ್ತಾಯಗಳ ಬಗ್ಗೆ ಚರ್ಚಿಸಲು ಸಮಯ ಕೊಡುತ್ತೇನೆಂದು ಹೇಳಿದ್ದಾರೆ” ಎಂದರು.

“ಹೋರಾಟಗಾರರು 18 ಹಕ್ಕೊತ್ತಾಯಗಳನ್ನು ನಮ್ಮ ಮುಂದಿಟ್ಟಿದ್ದಾರೆ. ಇವುಗಳಲ್ಲಿ ಮೂರು ಕಂದಾಯ ಇಲಾಖೆಗೆ ಸಂಬಂಧಿಸಿದ ವಿಚಾರಗಳೂ ಇವೆ. ಮಂಗಳವಾರ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಸಭೆ ಇದೆ. ಅಲ್ಲಿ, ಇಲ್ಲಿನ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಮಯ ನಿಗದಿ ಮಾಡಿಸಲು ನಾನು ಒತ್ತು ಕೊಡುತ್ತೇನೆ. ಶೀಘ್ರದಲ್ಲೇ ಹೋರಾಟಗಾರರೊಂದಿಗಿನ ಸಭೆಯನ್ನು ನಿಗದಿ ಮಾಡಿಸುತ್ತೇನೆ” ಎಂದು ಸಚಿವರು ಹೇಳಿದರು.

“ಕಾರ್ಮಿಕರು, ಭೂಮಿ ರಹಿತರು ಸೇರಿದಂತೆ ನಾನಾ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಬರ ಪರಿಹಾರಕ್ಕೆ ಅನುದಾನ ಕೇಂದ್ರದಿಂದ ಬಂದಿಲ್ಲ. ಅದರ ಬಗ್ಗೆ ಚರ್ಚಿಲು ಮುಖ್ಯಮಂತ್ರಿಗಳು ದೆಹಲಿಗೆ ತರಳಲಿದ್ದಾರೆ. ಡಿಸೆಂಬರ್ 4ರಿಂದ ಅಧಿವೇಶನವೂ ಇದೆ. ಈ ಎಲ್ಲದರ ನಡುವೆ ಸಮಯವನ್ನು ನೋಡಿಕೊಂಡು, ಸಭೆ ನಿಗದಿ ಮಾಡಿಸುತ್ತೇನೆ. ಎಲ್ಲರ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇವೆ” ಎಂದರು.

“ಹೋರಾಟಗಾರರು ಮುಂದಿಟ್ಟಿರುವ ಎಲ್ಲ ವಿಷಯಗಳು ಶ್ರಮಿಕರು, ಬಡವರ ಪರವಾಗಿವೆ. ಅವುಗಳೆಲ್ಲವನ್ನೂ ನಾವು ಈಡೇರಿಸಲು ಸಾಧ್ಯವಾಗುತ್ತದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ, ಬಡವರು, ರೈತರು, ಕಾರ್ಮಿಕರ ಪರವಾಗಿ ನಡೆಯುತ್ತಿರುವ ಹೋರಾಟ ಸ್ವಾಗತಾರ್ಹ. ಸಾಮಾನ್ಯ ಜನರ ವಿಷಯಗಳು ಚರ್ಚೆಯಾಗಬೇಕು. ಜೀವನಾಧಾರ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕು. ಅದಕ್ಕಾಗಿ, ಎಲ್ಲ ಹಕ್ಕೊತ್ತಾಯಗಳ ಬಗ್ಗೆ ಖಂಡಿತವಾಗಿಯೂ ಚರ್ಚಿಸುತ್ತೇನೆ. ಸಭೆ ಕರೆಯುತ್ತೇವೆ” ಎಂದು ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ಸರ್ಕಾರದ ಪರವಾಗಿ ಧರಣಿ ಸ್ಥಳಕ್ಕೆ ಆಗಮಿಸಿದ್ದ ಸಚಿವರಿಗೆ ವಿವಿಧ ಸಂಘಟನೆಗಳು ಮುಖಂಡರು ತಮ್ಮ ಬೇಡಿಕೆಗಳ ಕುರಿತ ಆಗ್ರಹ ಪತ್ರವನ್ನು ನೀಡಿದರು.

ಇದನ್ನೂ ಓದಿ : ಮಹಾಧರಣಿ| ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರ: ನೂರ್ ಶ್ರೀಧರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...