ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶೇಷ ಪತ್ರಿಕಾಗೋಷ್ಠಿಯನ್ನು ನಡೆಸಿದ್ದಾರೆ. ಕೊರೋನಾ ಸೋಂಕಿನಿಂದ ಮೃತಪಟ್ಟ ವಯಸ್ಕ (18 ವರ್ಷ ಮೇಲ್ಪಟ್ಟ) ವ್ಯಕ್ತಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರ 1,00,000 ರೂಪಾಯಿ ಪರಿಹಾರವನ್ನು ನೀಡಲು ಮುಂದಾಗಿದೆ. ಸರ್ಕಾರ ನೀಡುತ್ತಿರುವ ಈ ಪರಿಹಾರ ಬಿಪಿಎಲ್ ಕುಟುಂಬಗಳಿಗೆ ಮಾತ್ರ ಸೀಮಿತವಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪನವರು ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡು ಬಡ ಕುಟುಂಬಗಳಿಗೆ ಈ ಸೌಲಭ್ಯವನ್ನು ಸರ್ಕಾರ ನೀಡುತ್ತದೆ. ಇದಕ್ಕಾಗಿ 300 ಕೋಟಿ ಹಣವನ್ನು ತೆಗೆದಿರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
'ಕೋವಿಡ್ ಸೋಂಕಿನಿಂದ ದುಡಿಯುವ ವ್ಯಕ್ತಿಗಳು ಮೃತಪಟ್ಟು ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ. ಇದನ್ನು ಮನಗಂಡು, ಬಿಪಿಎಲ್ ಕುಟುಂಬಗಳಲ್ಲಿ ಕೋವಿಡ್ ಸೋಂಕಿನಿಂದ ವಯಸ್ಕರು ಮೃತಪಟ್ಟಲ್ಲಿ, ಆ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಕುಟುಂಬಕ್ಕೆ ಒಬ್ಬ ವ್ಯಕ್ತಿಯ ಮರಣಕ್ಕೆ ಪರಿಹಾರ ವಿತರಿಸಲಾಗುವುದು' : ಸಿಎಂ @BSYBJP pic.twitter.com/LuWDOhQEmt
— CM of Karnataka (@CMofKarnataka) June 14, 2021
ಬಿಪಿಎಲ್ ಕಾರ್ಡ್ ಹೊಂದಿದ ವ್ಯಕ್ತಿಯು ಕೊರೋನಾ ಕಾರಣದಿಂದ ಮೃತಪಟ್ಟಿದ್ದರೆ, ಕುಟುಂಬವು ವ್ಯಕ್ತಿಯ ದುಡಿಮೆಯ ಮೇಲೆ ಅವಲಂಬಿತವಾಗಿದ್ದರೆ ಅಂತಹ ಕುಟುಂಬಗಳಿಗೆ ಸರ್ಕಾರ 1 ಲಕ್ಷ ರೂಪಾಯಿ ಪರಿಹಾರ ನೀಡಲಿದೆ. ಇದು ಒಂದು ಬಿಪಿಎಲ್ ಕುಟುಂಬದ ಒಬ್ಬ ವ್ಯಕ್ತಿಗೆ ಮಾತ್ರ ಅನ್ವಯಿಸುತ್ತದೆ. ಒಂದು ವೇಳೆ ಒಂದೇ ಕುಟುಂಬದ ಮೂವರು-ನಾಲ್ವರು ವ್ಯಕ್ತಿಗಳು ಮೃತಪಟ್ಟಿದ್ದರೆ ಅವರಲ್ಲಿ ಒಬ್ಬ ವ್ಯಕ್ತಿಯ ಪರವಾಗಿ ಮಾತ್ರ ರಾಜ್ಯ ಸರ್ಕಾರದ ಕಡೆಯಿಂದ ಪರಿಹಾರ ನೀಡಲಾಗುತ್ತದೆ.
ಇದನ್ನೂ ಓದಿ : Sanchari Vijay | ಬೈಕ್ ಅಪಘಾತಕ್ಕೀಡಾಗಿದ್ದ ನಟ ಸಂಚಾರಿ ವಿಜಯ್ ನಿಧನ