Homeಕರೋನಾ ತಲ್ಲಣರಾಜ್ಯದಲ್ಲಿ ಇಂದಿನಿಂದ ಬಿಗಿ ನೈಟ್ ಕರ್ಫ್ಯೂ, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ

ರಾಜ್ಯದಲ್ಲಿ ಇಂದಿನಿಂದ ಬಿಗಿ ನೈಟ್ ಕರ್ಫ್ಯೂ, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ನಿಧಾನಗತಿಯಲ್ಲಿ ಏರುತ್ತಿರುವುದು ಮತ್ತು ಗಡಿಯ ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಆರ್ಭಟ ಹೆಚ್ಚಾಗಿದ್ದು ರಾಜ್ಯದಲ್ಲಿಯೂ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ.

ಈಗಿರುವ ನೈಟ್ ಕರ್ಫ್ಯೂವನ್ನು ಬಿಗಿಗೊಳಿಸಲು ಆದೇಶಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜೊತೆಗೆ  ವಾರಾಂತ್ಯದ ಕರ್ಫ್ಯೂ ಕೂಡ ಜಾರಿ ಮಾಡಿ ಆದೇಶ ನೀಡಲಾಗಿದೆ.

ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ  ಸಭೆ ನಡೆಸಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ಕೊರೊನಾ ಏರಿಕೆ: ವೀಕೆಂಡ್ ಲಾಕ್‌ಡೌನ್, ಕೇಂದ್ರದಿಂದ ತಂಡ ರವಾನೆ

 

ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು ಹೀಗಿವೆ.

೧.ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನ.

2. ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲು ತೀರ್ಮಾನ.

 

3. ಶಾಲೆಗಳನ್ನು ಎರಡು ಹಂತದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಮೊದಲನೇ ಹಂತದಲ್ಲಿ ನಿಬಂಧನೆಗಳಿಗೊಳಪಟ್ಟಂತೆ, ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಕುರಿತು ಅಧಿಕೃತ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು.

4. ಕೋವಿಡ್ ತೀವ್ರತೆ ನೋಡಿಕೊಂಡು ಆಗಸ್ಟ್ ತಿಂಗಳಾಂತ್ಯಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿ ಶಾಲೆ ಆರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು.

5. ರಾಜ್ಯದಲ್ಲಿ ರಾತ್ರಿ ಕರ್ಫ್ಯೂ (ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ) ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಸೂಚಿಸಲಾಗಿದೆ.

ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿ ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ವಾರಾಂತ್ಯ ಲಾಕ್‌ಡೌನ್ ಜಾರಿಗೊಳಿಸಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಗಡಿ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಮಂಗಳೂರು, ಮಡಿಕೇರಿ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ ಮತ್ತು ಬೀದರ್‌ನಲ್ಲಿ ನಾಳೆಯಿಂದ ವಾರಾಂತ್ಯ ಲಾಕ್‌ಡೌನ್ ಜಾರಿಗೊಳಿಸಲಾಗುತ್ತಿದೆ.


ಇದನ್ನೂ ಓದಿ: ಕೊರೊನಾ ಭಯ:15 ತಿಂಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್ ಆದ ಕುಟುಂಬ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ...

0
"ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ"...