Homeಕರ್ನಾಟಕಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ: ಬಸವರಾಜ ಬೊಮ್ಮಾಯಿ

ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ: ಬಸವರಾಜ ಬೊಮ್ಮಾಯಿ

- Advertisement -
- Advertisement -

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಪರಿಶೀಲಿಸಲು ಪರಿಣತರ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 60 ವರ್ಷಾಚರಣೆಯಲ್ಲಿ ಮಾತನಾಡಿದ ಅವರು, “ಇಂದು ನಿಗಮವು ಸಂಕಷ್ಟದಲ್ಲಿದೆ. ಆದರೆ ಸಮಸ್ಯೆಯನ್ನು ಬೆಳೆಯಲು ಬಿಡದೆ ನಾವು ಪರಿಹಾರ ಕಂಡುಕೊಳ್ಳಬೇಕಾಗಿದೆ. ಆದಾಯೋತ್ಪನ್ನ ಮಾದರಿಯಿದ್ದರೂ, ನಿಗಮ ನಷ್ಟದಲ್ಲಿರಲು ಕಾರಣಗಳನ್ನು ವಿಶ್ಲೇಷಿಸುವುದರೊಂದಿಗೆ, ನಿಗಮವನ್ನು ಲಾಭದಾಯಕವಾಗಿಸಲು ಸಲಹೆ ಸೂಚನೆಗಳನ್ನು ನೀಡಲು ಈ ಸಮಿತಿ ರಚಿಸಲಾಗುವುದು” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದ ಅವಧಿಯಲ್ಲಿ ನೌಕರರ ವೇತನ ಸೇರಿದಂತೆ, ನಿಗಮಕ್ಕೆ ಬೆಂಬಲ ನೀಡಲು ರಾಜ್ಯ ಸರ್ಕಾರ 2,300 ಕೋಟಿ ರೂ. ಬಿಡುಗಡೆ ಮಾಡಿದೆ. ತಾವು ಮುಖ್ಯಮಂತ್ರಿಯಾದ ನಂತರವೂ 108 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ನಿಗಮದ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಇದಕ್ಕೆ ಚಿಂತನೆ, ಕಾರ್ಯವಿಧಾನಗಳಲ್ಲಿ ಬದಲಾವಣೆ ಅಗತ್ಯ; ಜೊತೆಗೆ ಕ್ಷಮತೆಯಿಂದ ನಿಗಮವನ್ನು ಮುನ್ನಡೆಸಲು ಸರ್ಕಾರ ಬದ್ಧವಾಗಿದೆ. ನಿಗಮದ ಸುಧಾರಣೆಯೊಂದಿಗೆ ನೌಕರರ ಜೀವನಮಟ್ಟ ಸುಧಾರಣೆಗೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಲಸಿಕೆ ನೀಡಲು ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆ

ವಿಶ್ವದಾದ್ಯಂತ ಸಾರಿಗೆ ವ್ಯವಸ್ಥೆಯಲ್ಲಿ ಎಷ್ಟೇ ಬದಲಾವಣೆಗಳಾದರೂ, ಬಸ್ ಸೇವೆ ನಿರಂತರವಾಗಿ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಹಳ್ಳಿಗಳಲ್ಲಿ ಬಸ್ ಬಂದರೆ ಚಟುವಟಿಕೆ ಪ್ರಾರಂಭವಾಗುತ್ತದೆ. ಈ ಎಲ್ಲ ಕಾರಣಗಳಿಗಾಗಿ ನಿಗಮ ತನ್ನದೇ ಆದ ಗೌರವವನ್ನು ಹೊಂದಿದೆ. ಬಸ್ ಚಾಲಕರು ಅತ್ಯಂತ ಜವಾಬ್ದಾರಿಯ ಕೆಲಸ ನಿರ್ವಹಿಸುತ್ತಾರೆ. ಪ್ರಯಾಣದ ಅವಧಿಯಲ್ಲಿ ನಮ್ಮ ಜೀವ ಅವರ ಕೈಯಲಿರುತ್ತದೆ. ಆದ್ದರಿಂದ ಚಾಲಕರಿಗೆ ಮೊದಲ ಗೌರವ ಸಲ್ಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಪರಿಸರ ಸ್ನೇಹಿ ವಾಹನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಬಿಎಂಟಿಸಿಯು 90 ವಿದ್ಯುತ್ ಚಾಲಿತ ಬಸ್‌ಗಳನ್ನು ಖರೀದಿಸುತ್ತಿದೆ. ಅಂತೆಯೇ ಕೆಎಸ್‌ಆರ್‌ಟಿಸಿಯು 642 ಹೊಸ ಬಸ್ ಗಳನ್ನು ಖರೀದಿಸುತ್ತಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ನಾಲ್ಕೂ ನಿಗಮಗಳ ಅಪಘಾತ ರಹಿತ ಚಾಲನೆ ಮಾಡಿದ 60 ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ 60ನೇ ವರ್ಷದ ಸವಿ ನೆನಪಿಗೆ ಅಂಚೆ ಲಕೋಟೆ ಬಿಡುಗಡೆ ಹಾಗೂ ಕೆಂಪೇಗೌಡ ಬಸ್ ನಿಲ್ದಾಣ 60 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗಿದೆ.


ಇದನ್ನೂ ಓದಿ: ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...