Homeಕರ್ನಾಟಕಕಾರ್ಯಕ್ರಮಕ್ಕೆ ತಡವಾಗಿ ಬಂದ ಸಿಎಂ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್

ಕಾರ್ಯಕ್ರಮಕ್ಕೆ ತಡವಾಗಿ ಬಂದ ಸಿಎಂ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್

- Advertisement -
- Advertisement -

ಮಂಗಳವಾರ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆಯಲ್ಲಿ (ಕೆಎಸ್‌ಎಲ್‌ಟಿಎ) ನಡೆದ ಸಮಾರಂಭದಲ್ಲಿ ಟೆನಿಸ್ ದಿಗ್ಗಜ ಬೋನ್ ಬೋರ್ಗ್ ಅವರು ಸನ್ಮಾನ ಸ್ವೀಕರಿಸಲು ನಿರಾಕರಿಸಿದ್ದಾರೆ. ಏಕೆಂದರೆ ಈ ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದೂವರೆ ಗಂಟೆ ತಡವಾಗಿ ಬಂದಿದ್ದರು. ಹಾಗಾಗಿ ಸಮಯಕ್ಕೆ ಹೆಚ್ಚು ಮಹತ್ವ ಕೊಡುವ ಬೋರ್ಗ್ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದರು.

ಹನ್ನೊಂದು ಗ್ರಾನ್‌ ಸ್ಲಾಮ್ ಪ್ರಶಸ್ತಿಗಳ ವಿಜೇತ, ಸ್ವೀಡನ್ ದೇಶದ ಬೋರ್ಗ್ ಅವರ ಪುತ್ರ ಲಿಯೊ ಬೋರ್ಗ್, ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ನಡೆಯುತ್ತಿರುವ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯಲ್ಲಿ ಭಾಗವಹಿಸಿದ್ದಾರೆ. ಮಗನ ಆಟ ನೋಡಲು ಬೋರ್ಗ್ ಬೆಂಗಳೂರಿಗೆ ಬಂದಿದ್ದಾರೆ.

ಮಂಗಳವಾರ ಬೆಂಗಳೂರಿನ ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ಭಾರತದ ಮಾಜಿ ಆಟಗಾರ ವಿಜಯ್ ಅಮೃತ್‌ರಾಜಿ ಮತ್ತು ಬೋರ್ಗ್ ಅವರನ್ನು ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬೆಳಿಗ್ಗೆ 9.30ಕ್ಕೆ ಏರ್ಪಡಿಸಲಾಗಿತ್ತು. ಮುಖ್ಯಮಂತ್ರಿ ಬರುವುದು ತಡವಾದದ್ದಕ್ಕೆ ಸಮಾರಂಭವನ್ನು 10.15ಕ್ಕೆ ಮುಂದೂಡಲಾಯಿತು. ಆದರೆ ಸಿಎಂ ಬೊಮ್ಮಾಯಿ ಅವರು 11 ಗಂಟೆಯಾದರೂ ಬರಲಿಲ್ಲ ಎನ್ನುವ ಕಾರಣಕ್ಕೆ ಕಾರ್ಯಕ್ರಮವೂ ಆರಂಭವಾಗಲಿಲ್ಲ.

ಇದನ್ನೂ ಓದಿ:ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ಇತ್ತ ಬೋರ್ಗ್ ಅವರ ಪುತ್ರ ಲಿಯೊ ಅವರ ಪಂದ್ಯ ಬೆಳಿಗ್ಗೆ 11ಕ್ಕೆ ನಿಗದಿಯಾಗಿತ್ತು. ಮಗನ ಆಟ ನೋಡಲು ಬೋರ್ಗ್ ಅವರು ಗ್ಯಾಲರಿಯಲ್ಲಿ ಕುಳಿತುಕೊಂಡರು. ಪಂದ್ಯ ಶುರುವಾಗಿ ಕೆಲಹೊತ್ತಿನ ಬಳಿಕ ಬೊಮ್ಮಾಯಿ ಅವರು ಬಂದರು. ಮುಖ್ಯಮಂತ್ರಿ ಬಂದ ವಿಷಯವನ್ನು ಬೋರ್ಗ್ ಅವರ ಗಮನಕ್ಕೆ ತರಲಾಯಿತು ಆದರೆ ಬೋರ್ಗ್ ಅವರು ಪಂದ್ಯ ಮುಗಿದ ಬಳಿಕವಷ್ಟೇ ಬರುವುದಾಗಿ ಹೇಳಿದರು. ಇದರಿಂದ ಆಯೋಜಕರು ಸಮಾರಂಭವನ್ನು ರದ್ದುಗೊಳಿಸಿದರು.

‘ಬೇರೆ ಕಾರ್ಯಕ್ರಮಗಳು ಇದ್ದ ಕಾರಣ ಮುಖ್ಯಮಂತ್ರಿ ತಡವಾಗಿ ಬಂದರು’ ಎಂದು ಕಾರ್ಯಕ್ರಮದ ಸಂಘಟನಾ ಸಮಿತಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

”ಮಗನ ಪಂದ್ಯದ ವೀಕ್ಷಣೆಯನ್ನು ಅರ್ಧದಲ್ಲೇ ಬಿಟ್ಟು ಬರಲು ಬೋರ್ಗ್  ಒಪ್ಪಲಿಲ್ಲ ಎನ್ನುವುದನ್ನು ಮುಖ್ಯಮಂತ್ರಿಗೆ ತಿಳಿಸಿದೆವು. ಪರಿಸ್ಥಿತಿಯನ್ನು ಕ್ರೀಡಾ ಮನೋಭಾವದಿಂದಲೇ ಸ್ವೀಕರಿಸಿದ ಬೊಮ್ಮಾಯಿ ಅವರು ಕೆಲಹೊತ್ತು ಗ್ಯಾಲರಿಯಲ್ಲಿ ಕುಳಿತು ಪಂದ್ಯ ವೀಕ್ಷಿಸಿ ಅಲ್ಲಿಂದ ತೆರಳಿದರು” ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಮಯಕ್ಕೆ ಬದ್ಧರಾಗಿರುವುದು ಕಷ್ಟ ಆದರೆ ಬೋರ್ಗ್ ಯಾವುದಕ್ಕೂ ಕಾಯುವವರಲ್ಲ, ಅವರು ಈ ಹಿಂದಿನಿಂದಲೂ ಇದನ್ನು ರೂಢಿಸಿಕೊಂಡು ಬಂದಿದ್ದಾರೆ. ಬೋರ್ಗ್ ನಲವತ್ತು ವರ್ಷಗಳ ಹಿಂದಿನಿಂದಲೂ ಸಮಯಕ್ಕೆ ಬೆಲೆ ಕೊಡುವುದನ್ನು ಪಾಲಿಸಿಕೊಂಡುಬಂದಿದ್ದು, ಇದೀಗ ಈ ಸಮಾರಂಭದಲ್ಲಿ ಮತ್ತೆ ಅದು ಕಂಡುಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...