Homeಕರ್ನಾಟಕಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಕಾಂಗ್ರೆಸ್ ನಾಯಕರು ಬಹಿರಂಗವಾಗಿ ಚರ್ಚಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂತಹ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಸೋಮವಾರ ಹೇಳಿದ್ದಾರೆ. ಯಾರೂ ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸಬಾರದು ಎಂದು ಅವರು ಇದೇ ವೇಳೆ ಎಚ್ಚರಿಸಿದರು.

ರಾಜ್ಯದ ಕೆಲವು ಕಾಂಗ್ರೆಸ್ ನಾಯಕರು ಅಕ್ಟೋಬರ್‌ನಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿ ಬದಲಾವಣೆ ಆಗಬಹುದು ಎಂದು ಹೇಳಿಕೆ ನೀಡಿದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಖರ್ಗೆ ಉತ್ತರಿಸಿದರು.

“ನೋಡಿ, ಆ ವಿಚಾರ ಹೈಕಮಾಂಡ್ ಕೈಯಲ್ಲಿದೆ. ಹೈಕಮಾಂಡ್‌ನಲ್ಲಿ ಯಾವ ರೀತಿ ತೀರ್ಮಾನವಾಗುತ್ತದೆ ಎಂದು ಇಲ್ಲಿ ಯಾರೂ ಹೇಳಲು ಸಾಧ್ಯವಿಲ್ಲ. ಇದು ಸಂಪೂರ್ಣವಾಗಿ ಹೈಕಮಾಂಡ್‌ಗೆ ಬಿಟ್ಟ ವಿಷಯ, ಮತ್ತು ಮುಂದಿನ ಕ್ರಮ ಕೈಗೊಳ್ಳುವ ಅಧಿಕಾರ ಹೈಕಮಾಂಡ್‌ಗಿದೆ. ಆದರೆ, ಅನಗತ್ಯವಾಗಿ ಯಾರೂ ಗೊಂದಲ ಸೃಷ್ಟಿಸಬಾರದು” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

2023ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ತಲಾ 2.5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ರೊಟೇಷನ್ ಸೂತ್ರದಡಿ ಅಧಿಕಾರ ನಡೆಸುತ್ತಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಆದರೆ, ಈ ವಾದಗಳನ್ನು ಪಕ್ಷ ಇದುವರೆಗೆ ದೃಢಪಡಿಸಿಲ್ಲ ಅಥವಾ ನಿರಾಕರಿಸಿಲ್ಲ. ಪ್ರಸ್ತುತ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದು, ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿದ್ದಾರೆ. 

https://naanugauri.com/newlywed-bride-dies-by-suicide-over-dowry-torture-had-given-volvo-car-800-gm-gold/

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -