Homeಮುಖಪುಟಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

- Advertisement -
- Advertisement -

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ತಮಿಳುನಾಡಿಗೆ ನೀರು ಹರಿಸಲು ಆದೇಶಿಸಿರುವ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಕಾವೇರಿ ಸರ್ವಪಕ್ಷ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನೀರನ್ನು ಸಂಗ್ರಹಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಾವೇರಿ ವಿವಾದ ನಮಗೂ ಹೊಸದಲ್ಲ, ಯಾರಿಗೂ ಹೊಸದಲ್ಲ, ನಾವೆಲ್ಲರೂ ಈ ವಿವಾದವನ್ನು ಮೈಗೆ ಅಂಟಿಸಿಕೊಂಡೇ ಬೆಳೆದಿದ್ದೇವೆ. ರಾಜಕೀಯಕ್ಕಿಂತ ರಾಜ್ಯದ ರೈತರ ಹಾಗೂ ಸಾರ್ವಜನಿಕರ ಹಿತಾಸಕ್ತಿ ಮುಖ್ಯವಾಗಿದ್ದು, ರಾಜ್ಯದ ಹಿತದ ವಿಚಾರ ಬಂದಾಗ ಎಲ್ಲ ರಾಜಕೀಯ ಪಕ್ಷಗಳೂ ಒಟ್ಟಾಗಿ ನಿಲ್ಲುವ ಸುದೀರ್ಘ ಪರಂಪರೆ ಕರ್ನಾಟಕಕ್ಕಿದೆ ಎಂದು ಅವರು ಪುನರುಚ್ಚರಿಸಿದರು.

ಪ್ರಸ್ತುತ ವರುಣನ ಕೃಪೆಯಿಂದ ಕೊಡಗಿನ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯದ ಜಲಾಶಯಗಳಲ್ಲಿ 57 ಟಿಎಂಸಿ ನೀರು ಲಭ್ಯವಿದೆ. ಕಬಿನಿ ಜಲಾಶಯ ಈಗಾಗಲೇ ಭರ್ತಿಯಾಗಿದ್ದು, ನಿತ್ಯ 3,500 ಕ್ಯೂಸೆಕ್ ನೀರು ಬಿಡುವಂತೆ ಆದೇಶವಾಗಿದ್ದರೂ, ಒಳಹರಿವು ಹೆಚ್ಚಿರುವುದರಿಂದ ಹೆಚ್ಚುವರಿ ನೀರನ್ನು ಹಿಡಿದಿಟ್ಟುಕೊಳ್ಳಲಾಗದೆ ತಾನಾಗಿಯೇ ಕೆಳಮುಖವಾಗಿ ಹರಿದುಹೋಗುತ್ತಿದೆ. ರೈತರ ಹಿತದೃಷ್ಟಿಯಿಂದ ಈಗಾಗಲೇ ಕೆ.ಆರ್.ಎಸ್ ಮತ್ತು ಕಬಿನಿ ನಾಲೆಗಳಿಗೆ ನೀರು ಹರಿಸಲಾಗಿದ್ದು, ಬೆಳೆ ರಕ್ಷಣೆಗೆ ಆದ್ಯತೆ ನೀಡಲಾಗಿದೆ.

ಈ ಸಭೆಗೂ ಮುನ್ನವೇ ಕೇಂದ್ರ ಜಲಸಂಪನ್ಮೂಲ ಸಚಿವ ಸಿ.ಆರ್. ಪಾಟೀಲ್, ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಾಗಿತ್ತು. ಕೇಂದ್ರ ನಾಯಕರು ಹಾಗೂ ಸಚಿವರು ರಾಜ್ಯದ ಪರವಾಗಿ ಧ್ವನಿ ಎತ್ತಿದ್ದು, ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆ ಹಾಗೂ ತುಂಗಾಭದ್ರಾ ಅಣೆಕಟ್ಟಿನ ಗೇಟ್ ಅಳವಡಿಕೆ ವಿಚಾರಗಳಲ್ಲೂ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಡಿ.ಕೆ. ಶಿವಕುಮಾರ್ ಧನ್ಯವಾದ ತಿಳಿಸಿದರು.

ಚರ್ಚೆಯ ವೇಳೆ ನಾಯಕರು ರಾಜ್ಯದ ಹಿತ ಕಾಯುವ ಕುರಿತು ಪ್ರಮುಖ ಸಲಹೆಗಳನ್ನು ನೀಡಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕಾವೇರಿ ವಿಚಾರವು ಅತ್ಯಂತ ಭಾವನಾತ್ಮಕ ವಿಷಯವಾಗಿದ್ದು, ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಿದೆ. ಮಳೆ ಅಭಾವದ ಸಂದರ್ಭದಲ್ಲಿ ನಾಲ್ಕೂ ರಾಜ್ಯಗಳು ನೀರನ್ನು ಹೇಗೆ ಹಂಚಿಕೊಳ್ಳಬೇಕು ಎಂಬುದಕ್ಕೆ ಕೇಂದ್ರ ಸರ್ಕಾರ ಅಥವಾ ಸುಪ್ರೀಂ ಕೋರ್ಟ್ ಸೂಕ್ತ ‘ಸಂಕಷ್ಟ ಪರಿಹಾರ ಸೂತ್ರ’ ರಚಿಸುವುದು ಅತ್ಯಗತ್ಯ. ಕಬಿನಿ ಮತ್ತು ಹಾರಂಗಿ ತುಂಬಿರುವುದರಿಂದ ಸದ್ಯಕ್ಕೆ ಸಮಸ್ಯೆ ಬಗೆಹರಿಯುವ ಲಕ್ಷಣಗಳಿದ್ದು, ರೈತರ ಬೆಳೆಗಳಿಗೆ ತಕ್ಷಣವೇ ನೀರು ಒದಗಿಸಬೇಕು ಎಂದು ಒತ್ತಾಯಿಸಿದರು.

ಇನ್ನೋರ್ವ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮಾತನಾಡಿ, ಮಳೆ ಬಾರದಿದ್ದಾಗ ಅಥವಾ ತಮಿಳುನಾಡು ನ್ಯಾಯಾಲಯದ ಮೆಟ್ಟಿಲೇರಿದಾಗ ಮಾತ್ರ ಚರ್ಚೆ ಮಾಡುವ ಜಾಯಮಾನ ಬಿಟ್ಟು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಮೇಕೆದಾಟು ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಪರೋಕ್ಷವಾಗಿ ಅನುಕೂಲ ಮಾಡಿಕೊಟ್ಟಂತಿದ್ದು, ಈ ಬಗ್ಗೆ ಗಂಭೀರ ಹೆಜ್ಜೆ ಇಡಬೇಕಿದೆ ಎಂದರು.

ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಸಚಿವರಾದ ಡಾ. ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಹೆಚ್.ಕೆ. ಪಾಟೀಲ್, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ಗೋವಿಂದ ಕಾರಜೋಳ, ಬಿ.ಕೆ. ಹರಿಪ್ರಸಾದ್, ಟಿ.ಬಿ. ಜಯಚಂದ್ರ, ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೇರಿದಂತೆ ಹಲವು ಹಿರಿಯ ನಾಯಕರು ಹಾಗೂ ಉನ್ನತಾಧಿಕಾರಿಗಳು ಉಪಸ್ಥಿತರಿದ್ದು ತಮ್ಮ ಸಲಹೆಗಳನ್ನು ಹಂಚಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...