Homeಮುಖಪುಟರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

- Advertisement -
- Advertisement -

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶಾಸಕರ ರಾಜೀನಾಮೆ ಬೆದರಿಕೆ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ರಾಜೀನಾಮೆ ಕೊಡುವವರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಪಕ್ಷ ಬೇಕು ಮತ್ತು ತಮಗೆ ರಾಜಕೀಯ ಭವಿಷ್ಯ ಬೇಕು ಅನ್ನುವುದಾದರೆ ಶಾಸಕರು ಪಕ್ಷದಲ್ಲೇ ಇರುತ್ತಾರೆ” ಎಂದು ಸ್ಪಷ್ಟಪಡಿಸಿದರು.

ತಮ್ಮದೇ ಉದಾಹರಣೆಯನ್ನು ನೀಡಿದ ಅವರು, ಧರಂ ಸಿಂಗ್ ಹಾಗೂ ಸಿದ್ದರಾಮಯ್ಯ ಅವರ ಸಚಿವ ಸಂಪುಟ ರಚನೆ ವೇಳೆ ನನಗೂ ಸಚಿವ ಸ್ಥಾನ ತಪ್ಪಿತ್ತು. ಹಾಗೆಂದು ನಾನು ಆಗ ರಾಜೀನಾಮೆ ನೀಡಲು ಸಾಧ್ಯವಿರಲಿಲ್ಲವೇ? ನಾನು ಮತ್ತು ಡಾ. ಜಿ. ಪರಮೇಶ್ವರ್ ಆ ಸಂದರ್ಭದಲ್ಲಿ ತಾಳ್ಮೆಯಿಂದಿರಲಿಲ್ಲವೇ? ಹಿಂದೆ ವೀರೇಂದ್ರ ಪಾಟೀಲ್ ಅವರ ಕಾಲದಲ್ಲಿ ಬಂಗಾರಪ್ಪ, ಮಲ್ಲಿಕಾರ್ಜುನ ಖರ್ಗೆ ಮತ್ತು ಧರಂ ಸಿಂಗ್ ಅವರಿಗೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದರೆ ನಂತರದ ದಿನಗಳಲ್ಲಿ ಅವರೆಲ್ಲರೂ ರಾಜ್ಯದ ಮುಖ್ಯಮಂತ್ರಿಯಾದರು. ರಾಜಕೀಯದಲ್ಲಿ ಕೆಲವು ಸಂದರ್ಭಗಳಲ್ಲಿ ತಾಳ್ಮೆಯಿಂದಿರುವುದು ಅಗತ್ಯ. ಅಧಿಕಾರಕ್ಕಿಂತ ಪಕ್ಷವೇ ಸದಾ ದೊಡ್ಡದು ಎಂದು ಕಿವಿಮಾತು ಹೇಳಿದರು.

ನಿಗಮ-ಮಂಡಳಿಗಳಲ್ಲಿ ಕಾರ್ಯಕರ್ತರಿಗೆ ಆದ್ಯತೆ

ರಾಜ್ಯ ಸರ್ಕಾರದ ವಿವಿಧ ನಿಗಮ ಮತ್ತು ಮಂಡಳಿಗಳ ಹುದ್ದೆಗಳ ಕುರಿತು ಮಾತನಾಡಿದ ಸಿಎಂ, “ಎಲ್ಲಾ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಸೇರಿದಂತೆ ಇತರ ಹುದ್ದೆಗಳಿಗೆ ರಾಜೀನಾಮೆ ನೀಡುವಂತೆ ಶಾಸಕರಿಗೆ ಸೂಚಿಸುತ್ತೇನೆ. ಸರ್ಕಾರ ಅಧಿಕಾರಕ್ಕೆ ಬಂದಾಗ ಎಲ್ಲರಿಗೂ ಎರಡೂವರೆ ವರ್ಷಗಳ ಕಾಲಾವಧಿ ಎಂದು ಮುಂಚಿತವಾಗಿಯೇ ಸ್ಪಷ್ಟಪಡಿಸಲಾಗಿತ್ತು. ಮೊದಲು ಪಕ್ಷದ ಶ್ರಮಿಕ ಕಾರ್ಯಕರ್ತರಿಗೆ ಈ ಪದವಿಗಳಲ್ಲಿ ಅವಕಾಶ ನೀಡಲಾಗುವುದು, ಆ ನಂತರ ಶಾಸಕರನ್ನು ಕರೆದು ಚರ್ಚಿಸಲಾಗುವುದು” ಎಂದರು.

ರಾಜ್ಯದಲ್ಲಿನ ಹವಾಮಾನ ಪರಿಸ್ಥಿತಿಯ ಕುರಿತು ಉಲ್ಲೇಖಿಸಿದ ಮುಖ್ಯಮಂತ್ರಿಗಳು, “ನಾಳೆಯಿಂದಲೇ ಎಲ್ಲ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಿಗೆ ತೆರಳಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿಯ ಪರಿವೀಕ್ಷಣೆ ನಡೆಸುವಂತೆ ಸೂಚಿಸಿದ್ದೇನೆ. ಸಚಿವರು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳು ಮತ್ತು ಪ್ರಸ್ತುತ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು” ಎಂದು ಆದೇಶಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...