Homeಮುಖಪುಟಮರಾಠ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ: ಸಿಎಂ ಏಕನಾಥ್ ಶಿಂಧೆ

ಮರಾಠ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ: ಸಿಎಂ ಏಕನಾಥ್ ಶಿಂಧೆ

- Advertisement -
- Advertisement -

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ವ್ಯಾಪಕ ಪ್ರತಿಭಟನೆ, ಹಿಂಸಾಚಾರದ ಬೆನ್ನಲ್ಲೇ ಮೀಸಲಾತಿ ನೀಡಲು ರಾಜ್ಯ ಸರಕಾರವು ಬದ್ಧವಾಗಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಎರಡು ದಿನಗಳ ಹಿಂಸಾಚಾರದ ನಂತರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಪ್ರತಿಭಟನಾ ನಿರತರ ಮೇಲೆ  ಬಲಪ್ರಯೋಗ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಅಜಿತ್ ಪವಾರ್ ಹೇಳಿಕೆಯ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಶುಕ್ರವಾರ ಜಲ್ನಾದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ಘರ್ಷಣೆ ನಡೆದಿದೆ. ಅಂಬಾದ್ ತಹಸಿಲ್‌ನ ಅಂತರವಾಲಿ ಸಾರಥಿ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಸುಮಾರು 20 ಪ್ರತಿಭಟನಾಕಾರರು ಮತ್ತು 37 ಪೊಲೀಸರು ಗಾಯಗೊಂಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಸ್ಥಳೀಯ ಮರಾಠ ಮುಖಂಡ ಮನೋಜ್ ಜಾರಂಗೆ ನೇತೃತ್ವದಲ್ಲಿ ನೂರಾರು ಪ್ರತಿಭಟನಾಕಾರರು ಮೀಸಲಾತಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಪೊಲೀಸರ ಮೇಲೆ ಹಲ್ಲೆ, ಗಲಭೆ, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ  ಹಾನಿ ಆರೋಪದ ಮೇಲೆ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಮರಾಠ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದ ಸ್ಥಳಕ್ಕೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶುಕ್ರವಾರ ತೆರಳಿ ಪ್ರತಿಭಟನಾಕಾರರನ್ನು ಭೇಟಿ ಮಾಡಿದ್ದಾರೆ. ಪೊಲೀಸರ ಲಾಠೀ ಚಾರ್ಜ್ ಬಗ್ಗೆ ಪ್ರತಿಕ್ರಿಯಿಸಿದ್ದ ಶರದ್ ಪವಾರ್,  ಪೊಲೀಸರು  ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ: ಉತ್ತರಾಖಂಡ: ಜೈಶ್ರೀರಾಂ ಘೋಷಣೆ ಕೂಗುತ್ತಾ ಮಝರ್‌ಗಳ ಧ್ವಂಸ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

0
"ಭಾರತದ ಸಂವಿಧಾನದ ಮೂಲ ಪ್ರತಿಯ ಬಣ್ಣ ನೀಲಿಯಾಗಿದೆ. ಚೀನಾದ ಸಂವಿಧಾನದ ಮೂಲ ಪ್ರತಿಯ ಬಣ್ಣ ಕೆಂಪು. ರಾಹುಲ್ ಗಾಂಧಿ ಚೀನಾದ ಸಂವಿಧಾನ ತೋರಿಸಿದ್ದಾರೆಯೇ? ನಾವು ಈ ಬಗ್ಗೆ ಪರಿಶೀಲಿಸಬೇಕಿದೆ" ಎಂದು ಎಕ್ಸ್‌ನಲ್ಲಿ ಬರೆದುಕೊಂಡಿರುವ...