Homeಮುಖಪುಟಸಿಎಂ ಹೇಮಂತ್‌‌ ಸೊರೇನ್ ಅನರ್ಹತೆ ಭೀತಿ: ಜಾರ್ಖಂಡ್‌ನಲ್ಲಿ ರೆಸಾರ್ಟ್ ರಾಜಕಾರಣ ಆರಂಭ

ಸಿಎಂ ಹೇಮಂತ್‌‌ ಸೊರೇನ್ ಅನರ್ಹತೆ ಭೀತಿ: ಜಾರ್ಖಂಡ್‌ನಲ್ಲಿ ರೆಸಾರ್ಟ್ ರಾಜಕಾರಣ ಆರಂಭ

- Advertisement -
- Advertisement -

ಜಾರ್ಖಂಡ್ ವಿಧಾನಸಭೆ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಅನರ್ಹತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ರಂಗೇರಿದೆ. ಶನಿವಾರ ಹೇಮಂತ್ ಸೊರೇನ್ ಮತ್ತು ಆಡಳಿತಾರೂಢ ಶಾಸಕರು ಹಲವು ಬಸ್‌ಗಳಲ್ಲಿ ರೆಸಾರ್ಟ್‌ಗೆ ತೆರಳಿರುವುದು ವರದಿಯಾಗಿದೆ. ಶಾಸಕರನ್ನು ರಾಜ್ಯದ ಲಟ್ರಾಟು ಅಣೆಕಟ್ಟಿನ ಬಳಿಯ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಮೂರು ಬಸ್‌ಗಳನ್ನು ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಶಾಸಕರನ್ನು ರೆಸಾರ್ಟ್‌ಗೆ ಕರೆದೊಯ್ಯಲಾಗಿದ್ದು, ಭದ್ರತಾ ಸಿಬ್ಬಂದಿ ಕಾವಲು ಕಾಯುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೇಮನ್ ಸೋರೆನ್ ಅವರ ಶಾಸಕ ಸ್ಥಾನವನ್ನು‘ಅನರ್ಹ’ಗೊಳಿಸುವ ಬಗ್ಗೆ ಸುದ್ದಿಯಾದ ನಂತರ ರಾಜ್ಯದಲ್ಲಿ ಪ್ರಾರಂಭವಾದ ರಾಜಕೀಯ ಬಿಕ್ಕಟ್ಟನ್ನು ಎದುರಿಸಲು ಕಾರ್ಯತಂತ್ರವನ್ನು ರೂಪಿಸಲು ಆಡಳಿತಾರೂಢ ಮೈತ್ರಿಕೂಟದ ಶಾಸಕರ ಸಭೆಯನ್ನು ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆಸಲಾಯಿತು.

ಇದನ್ನೂ ಓದಿ: ಜಾರ್ಖಂಡ್‌‌‌‌ ಸಿಎಂ ಹೇಮಂತ್‌‌ ಸೋರೆನ್‌‌ ಶಾಸಕ ಸ್ಥಾನದಿಂದ ಅನರ್ಹ ಸಾಧ್ಯತೆ; ಉರುಳಲಿದೆಯೆ ಮತ್ತೊಂದು ಸರ್ಕಾರ?

ಆಡಳಿತಾರೂಢ ಶಾಸಕರು ತಮ್ಮ ಲಗೇಜ್ ಸಮೇತ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ನಂತರ ಹೇಮಂತ್ ಸೊರೆನ್ ಸರ್ಕಾರದ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಶಾಸಕರೊಂದಿಗೆ ಲಟ್ರಾಟು ಅಣೆಕಟ್ಟಿನ ಬಳಿಯ ಸ್ಥಳಕ್ಕೆ ತೆರಳಿದ್ದಾರೆ

ಪ್ರಸ್ತುತ ಆಡಳಿತರೂಢ ಶಾಸಕರು ಬೀಡುಬಿಟ್ಟಿರುವ ಲಟ್ರಾಟು ಅಣೆಕಟ್ಟಿಗೆ ಹೋಗುವ ರಸ್ತೆಗಳನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ. ಮಾಧ್ಯಮಗಳಿಗೆ ರಸ್ತೆ ಅಥವಾ ಕಾಲ್ನಡಿಗೆಯಲ್ಲೂ ಅಲ್ಲಿಗೆ ತೆರಳಲು ಅನುಮತಿಯಲ್ಲ.

ಛತ್ತೀಸ್‌ಗಢ ಅಥವಾ ಪಶ್ಚಿಮ ಬಂಗಾಳದಲ್ಲಿ ಸಮ್ಮಿಶ್ರ ಸರ್ಕಾರದ ಶಾಸಕರನ್ನು ಉಳಿಸಿಕೊಳ್ಳಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಇದಕ್ಕಾಗಿ ಛತ್ತೀಸ್‌ಗಢ, ಬರ್ಮುಡಾ ಮತ್ತು ರಾಯ್‌ಪುರ ಸೇರಿದಂತೆ ಮೂರು ಸ್ಥಳಗಳು ಮತ್ತು ಪಶ್ಚಿಮ ಬಂಗಾಳದ ಕೆಲವು ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅನರ್ಹರಾಗುವ ವದಂತಿ: ರಾಂಚಿಯಲ್ಲಿ ಯುಪಿಎ ಮಹತ್ವದ ಸಭೆ

“ಅಗತ್ಯವಿದ್ದಲ್ಲಿ ಎಲ್ಲಾ ಆಡಳಿತಾರೂಢ ಶಾಸಕರನ್ನು ಒಂದೇ ಸ್ಥಳಕ್ಕೆ ಕಳುಹಿಸಲಾಗುವುದು” ಎಂದು ಮತ್ತೊಂದು ಮೂಲಗಳು ತಿಳಿಸಿವೆ. ಶಾಸಕರನ್ನು ಜಾರ್ಖಂಡ್‌ನಿಂದ ಹೊರಗೆ ಕರೆದೊಯ್ಯುವ ಆಯ್ಕೆಯು ಮುಕ್ತವಾಗಿದ್ದು ಮತ್ತು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜೆಎಂಎಂ ಮೂಲವು ಪಿಟಿಐಗೆ ತಿಳಿಸಿದೆ.

ಚುನಾವಣಾ ಆಯೋಗವು ತನ್ನ ಅಭಿಪ್ರಾಯವನ್ನು ಆಗಸ್ಟ್ 25 ರಂದು ಜಾರ್ಖಂಡ್ ಗವರ್ನರ್ ರಮೇಶ್ ಬೈಸ್ ಅವರಿಗೆ ಕಳುಹಿಸಿದ್ದು, ಗಣಿಗಾರಿಕೆಯ ಗುತ್ತಿಗೆಯನ್ನು ಸ್ವತಃ ತಮಗೆ ವಿಸ್ತರಿಸುವ ಮೂಲಕ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹೇಮಂತ್ ಸೋರೆನ್ ಅವರನ್ನು ಶಾಸಕರಾಗಿ ಅನರ್ಹಗೊಳಿಸುವಂತೆ ಕೋರಿ ಚುನಾವಣಾ ಆಯೋಗ ಮನವಿ ಸಲ್ಲಿದೆ.

ಹೇಮಂತ್ ಸೋರೆನ್ ಅವರನ್ನು ಶಾಸಕರಾಗಿ ಅನರ್ಹಗೊಳಿಸುವ ಕುರಿತ ಚುನಾವಣಾ ಆಯೋಗದ ಅಭಿಪ್ರಾಯಗಳ ಬಗ್ಗೆ ರಾಜ್ಯಪಾಲರು ಸಂಜೆಯೊಳಗೆ ಕರೆ ಮಾಡಿ ಅನರ್ಹತೆಯ ಆದೇಶವನ್ನು ಆಯೋಗಕ್ಕೆ ಕಳುಹಿಸಬಹುದು ಎಂದು ರಾಜಭವನದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

81 ಸದಸ್ಯರಿರುವ ಜಾರ್ಖಂಡ್‌ ವಿಧಾನಸಭೆಯಲ್ಲಿ ಆಡಳಿತರೂಢ ಮೈತ್ರಿಯು 49 ಶಾಸಕರನ್ನು ಹೊಂದಿದೆ. ಅತಿದೊಡ್ಡ ಪಕ್ಷವಾದ ಜೆಎಂಎಂ 30 ಶಾಸಕರನ್ನು ಹೊಂದಿದ್ದು, ಕಾಂಗ್ರೆಸ್ 18 ಶಾಸಕರನ್ನು ಮತ್ತು ಆರ್‌ಜೆಡಿ ಒಂದು ಶಾಸಕರನ್ನು ಹೊಂದಿದೆ. ಸದನದಲ್ಲಿ ಪ್ರಮುಖ ಪ್ರತಿಪಕ್ಷ ಬಿಜೆಪಿ 26 ಶಾಸಕರನ್ನು ಹೊಂದಿದೆ.

“ಕೇಂದ್ರದ ಬಿಜೆಪಿಯು ಎಷ್ಟು ಕೆಟ್ಟ ಅನೈತಿಕ ವೃತ್ತವನ್ನು ಸೃಷ್ಟಿಸುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ನಾನು ಆದಿವಾಸಿಗಳ ಮಗ, ಜಾರ್ಖಂಡ್‌ನ ಮಗ. ನಾವು ಹೆದರುವುದಿಲ್ಲ, ಹೋರಾಡುತ್ತೇವೆ” ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...