Homeಕರ್ನಾಟಕಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಸಿಎಂ ಸೂಚನೆ

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಸಿಎಂ ಸೂಚನೆ

- Advertisement -
- Advertisement -

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂಪಾಯಿಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ, ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ ಅನುದಾನ ಹಂಚಿಕೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಲು ಸಿಎಂ ಆದೇಶಿಸಿದ್ದಾರೆ.

ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್‌ ಮೂಲಕ ಭಾರೀ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲು ತೀರ್ಮಾನಿಸಲಾಗಿದೆ.

ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಈ ವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್‌ ಒಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಬಂಧಿಸಿದ ಇಂಜಿನಿಯರ್‌ಗಳ ಸಭೆ ನಡೆಸಿ, ಲಿಂಟೆಲ್‌ ಮತ್ತು ಛಾವಣಿ ಹಂತದಲ್ಲಿರುವ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಲು ಹೇಳಿದ್ದಾರೆ.

ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ 1.8 ಲಕ್ಷ ಮನೆಗಳು ಪ್ರಗತಿಯಲ್ಲಿದೆ. ಫಲಾನುಭವಿಗಳ ವಂತಿಗೆ ಸೇರಿದಂತೆ 5 ಲಕ್ಷ ರೂ. ಗಳನ್ನು ಭರಿಸಲು ಹಾಗೂ ಇದಕ್ಕಾಗಿ ಮತ್ತು ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಮುಕ್ತಾಯದ ಹಂತದಲ್ಲಿರುವ 25 ಸಾವಿರ ಮನೆಗಳನ್ನು ಫೆಬ್ರವರಿ ಅಂತ್ಯದ ವೇಳೆ ಪೂರ್ಣಗೊಳಿಸುವಂತೆ ಸಿಎಂ ಸೂಚಿಸಿದ್ದಾರೆ.

ರಾಜೀವ್‌ ಗಾಂಧಿ ವಸತಿ ನಿಗಮದ ಮುಕ್ತಾಯದ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಸೂಚಿಸಿದ್ದು,
ನಿಗಮದ ವ್ಯಾಪ್ತಿಯಲ್ಲಿ 2,133 ಕೋಟಿ ರೂ. ಲಭ್ಯವಿದ್ದು, ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ನಿರ್ದೇಶನ ನೀಡಿದ್ದಾರೆ.

ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಜ್‌ ಸಚಿವ ಬಿ.ಝಡ್‌. ಜಮೀರ್‌ ಅಹ್ಮದ್‌ ಖಾನ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್‌ ಅಹ್ಮದ್‌, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್‌, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್‌, ವಸತಿ ಇಲಾಖೆ ಕಾರ್ಯದರ್ಶಿ ನವೀನ್‌ ರಾಜ್‌ ಸಿಂಗ್‌, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : ಬೆಂಗಳೂರು: ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ವಿದ್ಯುತ್ ತಗುಲಿ ಬಾಲಕಿ ಮೃತ್ಯು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...