Homeಕರ್ನಾಟಕಎಸ್‌ಎಸ್‌ಎಲ್‌ಸಿಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ: ಡಿಡಿಪಿಐಗಳಿಗೆ ನೋಟಿಸ್ ನೀಡಲು ಸಿಎಂ ಸೂಚನೆ

ಎಸ್‌ಎಸ್‌ಎಲ್‌ಸಿಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ: ಡಿಡಿಪಿಐಗಳಿಗೆ ನೋಟಿಸ್ ನೀಡಲು ಸಿಎಂ ಸೂಚನೆ

- Advertisement -
- Advertisement -

ಎಸ್ಎಸ್‌ಎಲ್‌ಸಿಯಲ್ಲಿ‌ ಶೇಕಡ 60ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು, ನೋಟಿಸ್‌ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಎರಡನೇ ದಿನವೂ (ಶನಿವಾರ) ಸಭೆ ಮುಂದುವರಿಸಿದ ಸಿಎಂ, ಹಲವು ಸೂಚನೆಗಳನ್ನು ಕೊಟ್ಟರು.

ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಎಸ್‌ಎಸ್‌ಎಲ್‌ಸಿ ಯಲ್ಲಿ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ಎನ್ನುವ ನೆಪ ಹೇಳಬೇಡಿ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿದೆ. ಡಿಡಿಪಿಐಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಸಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಿಕ್ಷಕರು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೋ ಇಲ್ಲವೋ ಎನ್ನುವುದನ್ನು ಪರಿಶೀಲನೆ ನಡೆಸಬೇಕು. ಶಿಕ್ಷಕರು ಮತ್ತು ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ ಎಂದರು.

ವಿವೇಕ ಯೋಜನೆಯಡಿಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹಣ ಮಂಜೂರು ಮಾಡುವುದರಲ್ಲಿ ವಿಳಂಬ ಆಗಬಾರದು. ಕ್ರಿಯಾ ಯೋಜನೆ ತಕ್ಷಣ ತಕ್ಷಣ ಸಿದ್ದಪಡಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು. ಹಣ ಬಿಡುಗಡೆ ಆಗಿದ್ದರೂ, ಇನ್ನೂ ಶಾಲಾ ಕೊಠಡಿಗಳ ನಿರ್ಮಾಣ ಆಗದಿರುವ ಬಗ್ಗೆ ಜಿಲ್ಲಾಧಿಕಾರಿಗಳನ್ನು ಪ್ರಶ್ನಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆ ಆಗದಂತೆ ಶಿಕ್ಷಕರು ಮತ್ತು ಅಧಿಕಾರಿಗಳು ಪೋಷಕರ ಜೊತೆ ಮಾತನಾಡಬೇಕು. ಡ್ರಾಪ್‌ಔಟ್‌ ತಡೆಯಲು ಏನೆಲ್ಲಾ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐಗಳು, ಬಿಇಒಗಳು ಶಾಲೆಗಳಿಗೆ ಭೇಟಿ ನೀಡುತ್ತಿದ್ದಾರಾ ಎನ್ನುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು. ಪ್ರತೀ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವುದು ಕೆಟ್ಟ ಬೆಳವಣಿಗೆ. ಸರ್ಕಾರ ಮೊಟ್ಟೆ, ಹಾಲು, ರಾಗಿಮಾಲ್ಟ್‌, ಸೂಪು, ಹಾಸ್ಟೆಲ್‌ ಸವಲತ್ತು ಎಲ್ಲಾ ಕೊಟ್ಟು ಮಕ್ಕಳ ದಾಖಲಾತಿ ಪ್ರಮಾಣ ಏಕೆ ಕಡಿಮೆ ಆಗುತ್ತಿದೆ. ನಿಮ್ಮ ಪ್ರಾಯೋಗಿಕ ಅನುಭವಗಳು ಏನು ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸಿ ಎಂದು ಸಿಎಂ ಸೂಚಿಸಿದರು.

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವುದನ್ನು ಗಮನದಲ್ಲಿಡಿ. ಡಿಡಿಪಿಐಗಳು ಜಿಲ್ಲೆಗಳಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಇಡೀ ಜಿಲ್ಲೆ ಪ್ರಯಾಣ ಮಾಡಬೇಕು. ಸಿಇಒಗಳು ಕಡ್ಡಾಯವಾಗಿ ಈ ಬಗ್ಗೆ ನಿಗಾವಹಿಸಿ ಪೋಷಕರ ಜೊತೆ ಸಭೆ ನಡೆಸಿ ಚರ್ಚಿಸಲೇಬೇಕು ಎಂದು ಸಿಎಂ ತಾಕೀತು ಮಾಡಿದರು.

ಪರೀಕ್ಷಾ ಫಲಿತಾಂಶದಲ್ಲಿ ಮತ್ತು ಮಕ್ಕಳ ದಾಖಲಾತಿಯಲ್ಲಿ ರಾಜ್ಯ ಸರಾಸರಿಗಿಂತ ಶೇಕಡಾವಾರು ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಸಿಇಒ ಮತ್ತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಖಡಕ್‌ ಸೂಚನೆ ನೀಡಿ, ಮುಂದಿನ ಶೈಕ್ಷಣಿಕ ಸಾಲಿನ ಹೊತ್ತಿಗೆ ಪರಿಸ್ಥಿತಿ ಉತ್ತಮಗೊಳ್ಳಬೇಕು ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಮತ್ತು ಹೈದರಾಬಾದ್‌ ಕರ್ನಾಟಕ ಜಿಲ್ಲೆಗಳ ಸಿಇಓ ಗಳು ಹೆಚ್ಚಿನ ಆಸಕ್ತಿ ಕೊಟ್ಟು ಈ ಬಗ್ಗೆ ನಿಗಾ ಇಡಬೇಕು. ಫಲಿತಾಂಶ ಕಡಿಮೆ ಇರುವುದಕ್ಕೆ ಕಾರಣಗಳು, ನೆಪಗಳು ಮುಖ್ಯ ಅಲ್ಲ, ಫಲಿತಾಂಶ ತರುವುದು ಮುಖ್ಯ. ಪ್ರಾಮಾಣಿಕ ಪ್ರಯತ್ನ ಇದ್ದರೆ ಪ್ರಾಮಾಣಿಕ ಫಲಿತಾಂಶ ಬರುತ್ತದೆ ಎಂದರು.

ಅನುಮತಿಯಿಲ್ಲದೆ ಸಿಡಿಆರ್ ಪಡೆಯುವ ಕ್ರಮ| ಪೊಲೀಸ್ ರಾಜ್ಯವಾದೀತು: ಹೈಕೋರ್ಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...