Homeಮುಖಪುಟರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ಕೇಜ್ರಿವಾಲ್ ಅವರ ನಿವಾಸವವನ್ನು ಸಂಪೂರ್ಣವಾಗಿ ಬ್ಯಾರಿಕೇಡ್ ಗಳಿಂದ ಮುಚ್ಚಲಾಗಿದೆ, ಯಾರಿಗೂ ಆವರಣಕ್ಕೆ ಪ್ರವೇಶಿಸಲು ಅಥವಾ ಹೊರಬರಲು ಅವಕಾಶವಿಲ್ಲ ಎಂದು ಆಪ್ ಹೇಳಿದೆ.

- Advertisement -
- Advertisement -

ದೆಹಲಿಯಲ್ಲಿ ಕಳೆದ 13 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟವನ್ನು ನಿನ್ನೆಯಷ್ಟೆ ಬೆಂಬಲಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗೃಹಬಂಧನ ವಿಧಿಸಲಾಗಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ.

ಅರವಿಂದ್ ಕೇಜ್ರಿವಾಲ್ ನಿನ್ನೆ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ತಮ್ಮ ಸಂಪುಟ ಸದಸ್ಯರೊಂದಿಗೆ ಸಿಂಘು ಗಡಿಗೆ ಭೇಟಿ ನೀಡಿ, ದೆಹಲಿ-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮಾಡಿರುವ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ್ದರು.

ಇಂದು ಬೆಳಿಗ್ಗೆ ಆಪ್‌ ಪಕ್ಷವು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು “ನಿನ್ನೆ ಸಿಂಘು ಗಡಿಯಲ್ಲಿ ಹೋರಾಟ ನಿರತ ರೈತರನ್ನು ಭೇಟಿ ಮಾಡಿದ ನಂತರ ಮಾನ್ಯ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರನ್ನು ದೆಹಲಿ ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ. ಯಾರೂ ಅವರ ಮನೆ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ” ಎಂದಿದೆ.

ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ದೆಹಲಿಯ ವಿವಿಧ ಪುರಸಭೆಗಳ ಮೂವರು ಮೇಯರ್‌ಗಳು ಮುಖ್ಯಮಂತ್ರಿ ನಿವಾಸದ ಮುಂದೆ ಪ್ರತಿಭಟಿಸಲು ಪೊಲೀಸರ ಪಡೆದಿದ್ದರು. ಇದನ್ನೆ ನೆಪವಾಗಿಟ್ಟುಕೊಂಡು ಪೊಲೀಸರು ಮುಖ್ಯಮಂತ್ರಿಗಳನ್ನು ಗೃಹಬಂಧನದಲ್ಲಿಟ್ಟಿದ್ದಾರೆ. ಕೇಜ್ರಿವಾಲ್ ಅವರ ನಿವಾಸವವನ್ನು ಸಂಪೂರ್ಣವಾಗಿ ಬ್ಯಾರಿಕೇಡ್ ಗಳಿಂದ ಮುಚ್ಚಲಾಗಿದೆ, ಯಾರಿಗೂ ಆವರಣಕ್ಕೆ ಪ್ರವೇಶಿಸಲು ಅಥವಾ ಹೊರಬರಲು ಅವಕಾಶವಿಲ್ಲ ಎಂದು ಆಪ್ ಹೇಳಿದೆ. ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಅಧೀನದಲ್ಲಿರುವುದನ್ನು ಇಲ್ಲಿ ಸ್ಮರಿಸಬಹುದು

ಈ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ಅವರ ಎಲ್ಲಾ ಅಧಿಕೃತ ಸಭೆಗಳನ್ನು ರದ್ದುಪಡಿಸಲಾಗಿದೆ ಎಂದು ಎಎಪಿ ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ರೈತರನ್ನು ಬೆಂಬಲಿಸಿ ಮಾತನಾಡಿದ್ದ ಕೇಜ್ರಿವಾಲ್ “ಎಎಪಿ ಡಿಸೆಂಬರ್ 8 ರಂದು ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಅನ್ನು ಬೆಂಬಲಿಸುತ್ತದೆ. ಎಎಪಿ ಸ್ವಯಂಸೇವಕರು ಕೂಡ ಆ ದಿನ ದೇಶಾದ್ಯಂತ ನಡೆಯುವ ಶಾಂತಿಯುತ ಪ್ರತಿಭಟನೆಗಳಲ್ಲಿ ರೈತರೊಂದಿಗೆ ಕೈಜೋಡಿಸುತ್ತಾರೆ. ರೈತರನ್ನು ಬೆಂಬಲಿಸುವಂತೆ ಭಾರತದ ನಾಗರಿಕರಲ್ಲಿ ಮನವಿ ಮಾಡುತ್ತೇನೆ” ಎಂದಿದ್ದರು.

‘ರೈತರ ಎಲ್ಲ ಬೇಡಿಕೆಗಳನ್ನು ನಾವು ಬೆಂಬಲಿಸುತ್ತೇವೆ. ಅವರ ಸಮಸ್ಯೆ ಮತ್ತು ಬೇಡಿಕೆಗಳು ಮಾನ್ಯವಾಗಿವೆ. ನನ್ನ ಪಕ್ಷ ಮತ್ತು ನಾನು ಮೊದಲಿನಿಂದಲೂ ಅವರೊಂದಿಗೆ ಬೆಂಬಲಕ್ಕೆ ನಿಂತಿದ್ದೇವೆ. ರೈತರ ಪ್ರತಿಭಟನೆಯ ಆರಂಭದಲ್ಲಿ ದೆಹಲಿ ಪೊಲೀಸರು 9 ಕ್ರೀಡಾಂಗಣಗಳನ್ನು ಜೈಲುಗಳಾಗಿ ಪರಿವರ್ತಿಸಲು ಅನುಮತಿ ಕೋರಿದ್ದರು. ನನ್ನ ಮೇಲೆ ಒತ್ತಡ ಹೇರಿದ್ದರೂ ಅನುಮತಿ ನೀಡಲಿಲ್ಲ’ ಎಂದಿದ್ದರು.


ಇದನ್ನೂ ಓದಿ: ಹೋರಾಟನಿರತ ರೈತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...