Homeಕರ್ನಾಟಕಗ್ರಾಮವಾಸ್ತವ್ಯದಲ್ಲಿ ಕುಮಾರಸ್ವಾಮಿ : ತಳಮಟ್ಟದ ಸಂಕಟಗಳಿಗೆ ಪರಿಹಾರ ಸಿಗುವುದೇ?

ಗ್ರಾಮವಾಸ್ತವ್ಯದಲ್ಲಿ ಕುಮಾರಸ್ವಾಮಿ : ತಳಮಟ್ಟದ ಸಂಕಟಗಳಿಗೆ ಪರಿಹಾರ ಸಿಗುವುದೇ?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಚುನಾವಣೆ, ಕ್ಯಾಬಿನೆಟ್ ಸಭೆ, ಸಮನ್ವಯ ಸಮಿತಿ ಸಭೆ, ಮೈತ್ರಿಯ ಗೊಂದಲಗಳಲ್ಲೇ ಮುಳುಗಿ ಗ್ರಾಮ ಕರ್ನಾಟಕವನ್ನೇ ಮರೆತಿದ್ದ ಮುಖ್ಯಮಂತ್ರಿ ಮತ್ತು ಆ ಕಾರಣಕ್ಕಾಗಿ ಸರ್ಕಾರಕ್ಕೆ ಎಚ್ಚರವಾದಂತಿದೆ. ಇದು ಬರಪೀಡಿತ ಗ್ರಾಮ ಕರ್ನಾಟಕದ ಜನತೆಗೆ ತನ್ನ ಸಂಕಟಗಳನ್ನು ಮುಖಾಮುಖಿ ತೋರಿಸಲು ಅವಕಾಶವಾಗಿದೆ.

ಈಗ ಯಾದಗಿರಿ ತಾಲೂಕಿನ ಚಂಡರಕಿಯಲ್ಲಿ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯ ನಡೆದಿದೆ. ಚಂಡರಕಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತಾಡುತ್ತಿರುವ ಕುಮಾರಸ್ವಾಮಿ, ಇಡೀ ಯಾದಗಿರಿ ಜಿಲ್ಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಯಾದಗಿರಿಗೊಂದು 300 ವಾರ್ಡುಗಳ ಆಸ್ಪತ್ರೆ ನಿರ್ಮಾಣದ ಭರವಸೆ ನೀಡಿದ್ದಾರೆ. ಯಾದಗಿರಿಯ ಎಲ್ಲ ಗ್ರಾಮಗಳಿಗೂ ಒಂದೂವರೆ ವರ್ಷದಲ್ಲಿ ನದಿನೀರನ್ನು ತಲುಪಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಇದಕ್ಕೂ ಮೊದಲು ಅವರು ಯಾದಗಿರಿ ಪಟ್ಟಣದಲ್ಲಿ 28 ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ಯಾದಗಿರಿಯ ಜಿಲ್ಲೆಯಲ್ಲಿ ಸಾಲಮನ್ನಾ ಕುರಿತಂತೆ ಆಗಿರುವ ಎಡವಟ್ಟಿಗೆ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ, ಡಿಸಿಸಿ ಬ್ಯಾಂಕಿನ ತಪ್ಪಿನಿಂದಾಗಿ ಇದು ನಡೆದಿದ್ದು ಅದನ್ನು ಸರಿಪಡಿಸುವ ಭರವಸೆ ನೀಡಿ, ಹೊಸ ಸಾಲ ಪಡೆಯಲು 100 ರೂ ಕೋಟಿ ಒದಗಿಸಲು ಆದೇಶ ನೀಡಿದ್ದಾರೆ. ಸಂಜೆ ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಚರ್ಚೆ ನಡೆಸಿ, ರಾತ್ರಿ ಅಲ್ಲಿಯೇ ಊಟ ಮಾಡಿ ವಾಸ್ತವ್ಯ ಮಾಡಲಿದ್ದಾರೆ.

ಹಿಂದುಳಿದ ಭಾಗದ ವಾಸ್ತವತೆ ಅರಿವಾಗಲಿ
ಸದಾ ಬೆಂಗಳೂರಿನಿಂದಲೇ ಆಡಳಿತ ನಿರ್ವಹಿಸುವ ಅಧಿಕಾರಸ್ಥರಿಗೆ ಇಂತಹ ಗ್ರಾಮ ವಾಸ್ತವ್ಯಗಳು ಜನರ ನೈಜ ಸಮಸ್ಯೆಗಳ ದರ್ಶನಕ್ಕೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಸ್ವಾಗತಾರ್ಹ. ಜಿಲ್ಲೆಯಾದ ಮೇಲೂ ಯಾದಗಿರಿಗೆ ಬಹುಪಾಲು ಜಿಲ್ಲಾ ಸೌಕರ್ಯಗಳು ಸಿಕ್ಕಿಲ್ಲ. ಇಂದಿಗೂ ಬಹುಪಾಲು ಸರ್ಕಾರಿ ಕಚೇರಿಗಳು ಖಾಸಗಿ ಕಟ್ಟಡಗಳಲ್ಲೇ ನಡೆಯುತ್ತಿವೆ. ಎಲ್ಲ ಕಡೆಯಂತೆಯೇ ಸರ್ಕಾರಿ ಶಾಲೆಗಳು ಸಮಸ್ಯೆಯಲ್ಲಿವೆ.

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ (ಯುಕೆಪಿ) ನಿರ್ಮಿಸಿದ ಕಳಪೆ ಕಾಲುವೆಗಳಿಂದ ನೀರು ಪೋಲಾಗುತ್ತಿದೆ. ನೀರಾವರಿ ಯೋಜನೆಗಳ ಕೊರತೆಯ ಕಾರಣಕ್ಕೆ ಅಪಾರ ನೀರು ಸುಮ್ಮನೇ ಹರಿದು ತೆಲಂಗಾಣ ತಲುಪುತ್ತಿದೆ. ಕೃಷ್ಣ ಮತ್ತು ಭೀಮಾ ನದಿಗಳು ಪಕ್ಕದಲ್ಲೇ ಹರಿದರೂ ಯಾದಗಿರಿ ಮತ್ತು ಶಹಾಪುರ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸಲಾಗಿಲ್ಲ!

ಸರ್ಕಾರಿ ಯೋಜನೆಗಳ ಅನುಷ್ಟಾನ ಸರಿಯಾಗದೇ ಇರುವುದರಿಂದ ಯಾದಗಿರಿಯ ಜಿಲ್ಲೆಯ ಜನ ಕಳೆದ 20 ವರ್ಷಗಳಿಂದ ಬೆಂಗಳೂರು, ಹೈದರಾಬಾದ್‍ಗಳಿಗೆ ಕಟ್ಟಡ, ರಸ್ತೆ ನಿರ್ಮಾಣದ ಕೆಲಸಗಳಿಗೆ ಗುಳೆ ಹೋಗುವುದು ನಡೆದೇ ಇದೆ. ಬೆಂಗಳೂರಿನ ಹೊರವಲಯದ ಖಾಲಿ ಜಾಗಗಳಲ್ಲಿ ಹತ್ತಾರು ‘ಯಾದಗಿರಿ ಕ್ಯಾಂಪ್’ಗಳು ತಲೆಎತ್ತಿವೆ. ಪೋಷಕರೊಂದಿಗೆ ಅಲ್ಲಿಗೆ ಹೋಗಿರುವ ಮಕ್ಕಳ ಶಿಕ್ಷಣ ಮೊಟಕುಗೊಳ್ಳುತ್ತಿದೆ.

ಇಂತಹ ವಾಸ್ತವ್ಯಗಳಿಂದಲಾದರೂ ನೈಜ ಸಮಸ್ಯೆಗಳನ್ನು ಅಧಿಕಾರಸ್ಥರು ಅರಿಯುವಂತಾಗಲಿ. ಜನರು ಕೂಡ ತಮ್ಮ ಹಕ್ಕುಗಳಿಗಾಗಿ ದನಿ ಎತ್ತಿ ನ್ಯಾಯ ಪಡೆಯುವ ಅವಕಾಶ ಸಿಗಲಿ.
ರೆಸಾರ್ಟು, ರಾಜಧಾನಿ ರಾಜಕಾರಣ ಹಿಂದಕ್ಕೆ ಸರಿದು, ಈ ಬಗೆಯಲ್ಲಾದರೂ ಗ್ರಾಮಗಳತ್ತ ಸರ್ಕಾರ ಕಣ್ಣು ತೆರೆಯುಂತಾಗಲಿ.

ಹಿಂದೆ 13 ವರ್ಷಗಳ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯ ಜನರಲ್ಲಿ ಒಳ್ಳೆಯ ಅಭಿಪ್ರಾಯವನ್ನು ಮೂಡಿಸಿತ್ತು. ಈ ಬಾರಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...