ರಾಜ್ಯದ ವೃದ್ಧರು, ಅಂಗವಿಕಲರು ಮತ್ತು ವಿಧವೆಯರಿಗೆ ನೀಡಲಾಗುತ್ತಿದ್ದ ಮಾಸಿಕ ಸಾಮಾಜಿಕ ಭದ್ರತಾ ಪಿಂಚಣಿಯನ್ನು ಜುಲೈನಿಂದ 400 ರೂ.ಗಳಿಂದ 1,100 ರೂ.ಗಳಿಗೆ ಹೆಚ್ಚಿಸುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಘೋಷಿಸಿದ್ದಾರೆ. ಬಿಹಾರ ಚುನಾವಣೆಗೂ
ಈ ಪಿಂಚಣಿಯಿಂದ ರಾಜ್ಯದ 1.09 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದು, ಪ್ರತಿ ತಿಂಗಳ 10ನೇ ತಾರೀಖಿನೊಳಗೆ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಈ ಮೊತ್ತವನ್ನು ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.
“ವೃದ್ಧರು ಸಮಾಜದ ಅಮೂಲ್ಯ ಭಾಗವಾಗಿದ್ದು, ಅವರ ಗೌರವಾನ್ವಿತ ಜೀವನವನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ರಾಜ್ಯ ಸರ್ಕಾರ ಈ ದಿಕ್ಕಿನಲ್ಲಿ ಪ್ರಯತ್ನಗಳನ್ನು ಮುಂದುವರಿಸುತ್ತದೆ.” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಬಿಹಾರದಲ್ಲಿ ವಿಧಾನಸಭಾ ಚುನಾವಣೆಗಳು ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ನಡೆಯುವ ನಿರೀಕ್ಷೆಯಿದೆ. ಸಿಎಂ ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.
मुझे यह बताते हुए खुशी हो रही है कि सामाजिक सुरक्षा पेंशन योजना के तहत सभी वृद्धजनों, दिव्यांगजनों और विधवा महिलाओं को अब हर महीने 400 रु॰ की जगह 1100 रु॰ पेंशन मिलेगी। सभी लाभार्थियों को जुलाई महीने से पेंशन बढ़ी हुई दर पर मिलेगी। सभी लाभार्थियों के खाते में यह राशि महीने की 10…
— Nitish Kumar (@NitishKumar) June 21, 2025
2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗದ ಕಾರಣ ಪಕ್ಷವೂ ಜನತಾದಳ (ಯುನೈಟೆಡ್) ಮತ್ತು ಅದರ ಎನ್‌ಡಿಎ ಮೈತ್ರಿಯ ಇತರ ಪಕ್ಷಗಳ ಸಹಾಯದಿಂದ ಕೇಂದ್ರದಲ್ಲಿ ಸರ್ಕಾರ ರಚಿಸಿತ್ತು. ಬಿಹಾರ ಮೂಲದ ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ನೇತೃತ್ವದ ಪಕ್ಷ ಕೂಡಾ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರದ ಭಾಗವಾಗಿದೆ.
ವಿರೋಧ ಪಕ್ಷದ ನಾಯಕ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮಾರ್ಚ್‌ನಲ್ಲಿ ಮಾಯ್-ಬಹಿನ್ ಸಮ್ಮಾನ್ ಯೋಜನೆಯಡಿ ಮಾಸಿಕ ಪಿಂಚಣಿಯನ್ನು 1,500 ರೂ.ಗೆ ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದರು. ಅದಾಗಿ ತಿಂಗಳುಗಳ ನಂತರ ಶನಿವಾರ ಮುಖ್ಯಮಂತ್ರಿ ಈ ಘೋಷಣೆ ಮಾಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.
ತಮ್ಮ ಪಕ್ಷವೂ ಅಧಿಕಾರಕ್ಕೆ ಬಂದರೆ 500 ರೂ.ಗೆ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ಮತ್ತು 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಅವರು ಜನರಿಗೆ ಭರವಸೆ ನೀಡಿದ್ದರು. ಬಿಹಾರ ಚುನಾವಣೆಗೂ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ
ಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ

