Homeರಾಜಕೀಯಬಿಹಾರ: ತೇಜಸ್ವಿ ಯಾದವ್‌‌ ಆಯೋಜಿಸಿದ್ದ ಇಫ್ತಾರ್‌‌ ಕೂಟದಲ್ಲಿ ಸಿಎಂ ನಿತೀಶ್‌ ಕುಮಾರ್‌ ಭಾಗಿ!; ಮತ್ತೊಮ್ಮೆ ‘ಮಹಾಘಟಬಂಧನ್‌’?

ಬಿಹಾರ: ತೇಜಸ್ವಿ ಯಾದವ್‌‌ ಆಯೋಜಿಸಿದ್ದ ಇಫ್ತಾರ್‌‌ ಕೂಟದಲ್ಲಿ ಸಿಎಂ ನಿತೀಶ್‌ ಕುಮಾರ್‌ ಭಾಗಿ!; ಮತ್ತೊಮ್ಮೆ ‘ಮಹಾಘಟಬಂಧನ್‌’?

- Advertisement -
- Advertisement -

ಬಿಹಾರ ವಿಧಾನಸಭೆ ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ಅವರು ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾಗಿಯಾಗಿರುವ ಘಟನೆ ಶುಕ್ರವಾರ ನಡೆದಿದೆ. ಮುಖ್ಯಮಂತ್ರಿಯ ಈ ನಡೆ ಬಿಹಾರದ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದೆ.

ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಅವರ ನಿವಾಸದಲ್ಲಿ ನಡೆದ ಇಫ್ತಾರ್ ಕೂಟದಲ್ಲಿ, ತೇಜಸ್ವಿ ಯಾದವ್, ತೇಜ್ ಪ್ರತಾಪ್ ಯಾದವ್ ಅವರೊಂದಿಗೆ 5 ವರ್ಷಗಳ ಬಳಿಕ ನಿತೀಶ್ ಕುಮಾರ್ ಆತ್ಮೀಯವಾಗಿ ಬೆರೆತು ಮಾತನಾಡಿದ್ದಾರೆ. ನಿತೀಶ್ ಅವರ ಈ ನಡೆ ಬಿಹಾರ ರಾಜಕೀಯದಲ್ಲಿ ಬದಲಾವಣೆ ಸಂಭವಿಸಲಿದೆ ಎಂಬ ರಾಜಕೀಯ ವಿಶ್ಲೇಷಣೆಗಳಿಗೆ ಎಡೆ ಮಾಡಿಕೊಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಹಾರದಲ್ಲಿ ಸದ್ಯ ಬಿಜೆಪಿ-ಜೆಡಿಯು ಮೈತ್ರಿಕೂಟದ ಸರ್ಕಾರ ಅಸ್ತಿತ್ವದಲ್ಲಿದ್ದು, ನಿತೀಶ್ ಕುಮಾರ್ ಹಾಗೂ ಬಿಜೆಪಿ ನಾಯಕರ ನಡುವೆ ಸಂಬಂಧ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಈ ನಡುವೆ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರ ಆರ್‌ಜೆಡಿ ಉತ್ತಮ ಫಲಿತಾಂಶ ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ನಿತೀಶ್ ಅವರು ಮತ್ತೆ ಆರ್‌ಜೆಡಿಗೆ ಹತ್ತಿರವಾಗುತ್ತಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿವೆ.

ಇದನ್ನೂ ಓದಿ: ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

ಆದರೆ ಈ ಎಲ್ಲಾ ಊಹಾಪೋಹಗಳನ್ನು ತೇಜಸ್ವಿ ಯಾದವ್‌ ನಿರಾಕರಿಸಿದ್ದಾರೆ. “ಇಫ್ತಾರ್ ಕೂಟಕ್ಕೆ ರಾಜ್ಯದ ಎಲ್ಲಾ ಪ್ರಮುಖ ರಾಜಕೀಯ ನಾಯಕರಿಗೆ ಆಹ್ವಾನ ನೀಡಲಾಗಿತ್ತು. ಅದರಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೂ ಭಾಗವಹಿಸಿದ್ದರು. ಇದರಲ್ಲಿ ವಿಶೇಷವೇನೂ ಇಲ್ಲ” ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಅತ್ಯಾಚಾರ ವಿರೋಧಿಸಿದ್ದ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ, ಬಿಹಾರದ ಸಚಿವ ಸೈಯ್ಯದ್ ಶಾನವಾಝ್‌ ಹುಸೈನ್‌, “ಇಫ್ತಾರ್‌ ಕೂಟದಲ್ಲಿ ನಿತೀಶ್‌ ಕುಮಾರ್‌ ಭಾಗಿಯಾಗಿರುವುದರಲ್ಲಿ ಯಾವುದೇ ರಾಜಕೀಯ ಇಲ್ಲ. ಸುಶೀಲ್‌ ಮೋದಿ ಮತ್ತು ನಾನು ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲೂ ನಿತೀಶ್‌ ಕುಮಾರ್‌ ಪಾಲ್ಗೊಂಡಿದ್ದರು” ಎಂದು ಹೇಳಿದ್ದಾರೆ.

ಇಫ್ತಾರ್ ಕೂಟದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ, ಬಿಜೆಪಿ ನಾಯಕ ಅವಧೇಶ್ ನಾರಾಯಣ್ ಸಿಂಗ್, ಸೈಯ್ಯದ್ ಶಾನವಾಝ್ ಹುಸೇನ್, ಲೋಕ ಜನಶಕ್ತಿ ಪಕ್ಷದ ಚಿರಾಗ್‌ ಪಾಸ್ವಾನ್‌, ಎಡಪಕ್ಷಗಳ ನಾಯಕರು ಸೇರಿದಂತೆ ಹಲವು ರಾಜಕೀಯ ಮುಖಂಡರು ಭಾಗವಹಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

0
"ನಮಗೊಬ್ಬ ನಾಯಕನಿದ್ದಾನೆ. ಆತ 2019ರಲ್ಲಿ ಕ್ಯಾಮರಾ ಮ್ಯಾನ್‌ಗಳ ಜೊತೆ ಗುಹೆ ಸೇರ್ಕೊಂಡ. ಈಗ ಚುನಾವಣೆ ಬರುವಾಗ ನೀರಿನೊಳಗೆ ಹೋಗಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ಆತ 20ನೇ ಶತಮಾನದ ದೇಶದ ನಾಯಕನಾ?"...