Homeಮುಖಪುಟಸಿಎಂ ಹುದ್ದೆಯನ್ನು ಯಾವುದೇ ಕಾರಣಕ್ಕೆ ಬಿಟ್ಟು ಕೊಡುವುದಿಲ್ಲ: ಇಟ್ಟ ಹೆಜ್ಜೆ ಹಿಂದಕ್ಕೆ ತೆಗೆಯಲ್ಲ- ಶಿವಸೇನೆ ಎಚ್ಚರಿಕೆ

ಸಿಎಂ ಹುದ್ದೆಯನ್ನು ಯಾವುದೇ ಕಾರಣಕ್ಕೆ ಬಿಟ್ಟು ಕೊಡುವುದಿಲ್ಲ: ಇಟ್ಟ ಹೆಜ್ಜೆ ಹಿಂದಕ್ಕೆ ತೆಗೆಯಲ್ಲ- ಶಿವಸೇನೆ ಎಚ್ಚರಿಕೆ

- Advertisement -
- Advertisement -

ಮಹಾರಾಷ್ಟ್ರ ಅಧಿಕಾರ ಗದ್ದುಗೆ ಏರಲು ಬಿಜೆಪಿ ಮತ್ತು ಶಿವಸೇನೆಯ ಹಾವು-ಏಣಿ ಆಟ ಮುಂದುವರೆದಿದೆ. ನಾ ಕೊಡೆ, ನೀ ಬಿಡೆ ಕದನದಲ್ಲಿ ರಾಜ್ಯ ಆಡಳಿತ ಸೂತ್ರವಿಲ್ಲದ ಗಾಳಿಪಟದಂತಾಗಿದೆ. ಬಿಜೆಪಿ ಮತ್ತು ಶಿವಸೇನೆಯ ಕುರ್ಚಿ ಗುದ್ದಾಟ ಹಾಸ್ಯಾಸ್ಪದಕ್ಕೆ ಗುರಿಯಾಗಿದೆ. ಮೈತ್ರಿ ಪಾಲುದಾರ, ಮಿತ್ರ ಬಿಜೆಪಿಗೆ, ಶಿವಸೇನೆ ಖಡಕ್ ಎಚ್ಚರಿಕೆ ನೀಡಿದೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನವನ್ನು ಬಿಜೆಪಿಗೆ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದೆ.

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮಾತನಾಡಿ, ಯಾವುದೇ ಕಾರಣಕ್ಕೂ ಇಟ್ಟ ಹೆಜ್ಜೆ ಹಿಂದೆ ತೆಗೆಯುವುದಿಲ್ಲ. ಸಿಎಂ ಸ್ಥಾನ ಶಿವಸೇನೆಗೆ ಬೇಕು ಎಂದು ತೀಕ್ಷ್ಣ ಸಂದೇಶ ರವಾನಿಸಿದ್ದಾರೆ. ಮಾತೋಶ್ರೀ ನಿವಾಸದಿಂದ 3 ಕಿ.ಮೀ ದೂರದಲ್ಲಿರುವ ಹೋಟೆಲ್ ನಲ್ಲಿ ಮಾತನಾಡಿದ ಠಾಕ್ರೆ, ಬಿಜೆಪಿ ಶಿವಸೇನೆಯ ಕೆಲ ಶಾಸಕರನ್ನು ಬಂಧಿಸುವುದು ಮತ್ತು ತನ್ನತ್ತ ಸೆಳೆಯಲು ತಂತ್ರ ಹೂಡಿರಬಹುದು ಎಂದು ಕಳವಳ ವ್ಯಕ್ತಪಡಿಸಿದರು.

ಬಿಜೆಪಿ ನಾಯಕರ ತಂಡವು ಇಂದು ಮತ್ತೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿ ಮಾಡಿದೆ. ಆದರೆ ರಾಜ್ಯಪಾಲರನ್ನು ಸರ್ಕಾರ ರಚನೆ ವಿಚಾರಕ್ಕಾಗಿ ಭೇಟಿ ಮಾಡಿಲ್ಲ. ಸರ್ಕಾರಿ ಯೋಜನೆಗಳ ನವೀಕರಣ ಕುರಿತು ಚರ್ಚಿಸಲಾಗಿದೆ ಎಂದು ಬಿಜೆಪಿ ಹೇಳಿದೆ. ಇನ್ನು ಶಿವಸೇನೆ ಮಾತ್ರ ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿದೆ. 15 ದಿನಗಳಿಂದ ನಾವು ಇದಕ್ಕಾಗೇ ಕಾಯುತ್ತಿದ್ದೇವೆ.  ಕಾಲಹರಣ ಮಾಡಲು ವೃಥಾ ಮನಸ್ಸಿಲ್ಲ. ಶಿವಸೇನೆಯಿಂದ ಸಿಎಂ ಅಭ್ಯರ್ಥಿ ಆಯ್ಕೆಯಾಗುವ ಬಗ್ಗೆ ಬಿಜೆಪಿ ಲಿಖಿತ ಒಪ್ಪಂದ ಮಾಡಿಕೊಳ್ಳಬೇಕು ಎಂದು ಹೇಳಿದೆ.

ಅಲ್ಲದೇ ಅಮಿತ್ ಶಾ ಅವರೊಂದಿಗೆ ನಡೆದ ಸಭೆಯಲ್ಲೇ ಉದ್ಧವ್ ಠಾಕ್ರೆ ಅವರು ಸಿಎಂ ಹುದ್ದೆಗಾಗಿ ನೇರವಾಗಿಯೇ ಬೇಡಿಕೆಯಟ್ಟಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಈ ನಿರ್ಧಾರಕ್ಕೆ ಶಿವಸೇನೆ ಬದ್ಧವಾಗಿದೆ. ಸಿಎಂ ಹುದ್ದೆ ಬೇಡವಾಗಿದ್ದರೆ ನಾವ್ಯಾಕೆ ಇಷ್ಟು ದಿನಗಳನ್ನು ವ್ಯರ್ಥ ಮಾಡಬೇಕಿತ್ತು ಅಂತಾ ಶಿವಸೇನೆ ಶಾಸಕ ಸಂಜಯ್ ಶಿರ್ಸತ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...