Homeಮುಖಪುಟದೇವಸ್ಥಾನದಲ್ಲಿ ಆದಿವಾಸಿ ಮಹಿಳೆಗೆ ಊಟ ನಿರಾಕರಣೆ: ಆಕೆಯ ಮನೆಗೇ ಭೇಟಿ ನೀಡಿದ ತಮಿಳುನಾಡು ಸಿಎಂ

ದೇವಸ್ಥಾನದಲ್ಲಿ ಆದಿವಾಸಿ ಮಹಿಳೆಗೆ ಊಟ ನಿರಾಕರಣೆ: ಆಕೆಯ ಮನೆಗೇ ಭೇಟಿ ನೀಡಿದ ತಮಿಳುನಾಡು ಸಿಎಂ

ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಅದೇ ದೇವಸ್ಥಾನದಲ್ಲಿ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದರು.

- Advertisement -
- Advertisement -

ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ಇತ್ತೀಚೆಗೆ ಊಟ ನಿರಾಕರಿಸಲಾಗಿದ್ದ ನರಿಕುರವರ್ ಅಲೆಮಾರಿ ಸಮುದಾಯದ ಮಹಿಳೆ ಅಶ್ವಿನಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಗುರುವಾರದಂದು ಭೇಟಿ ಮಾಡಿದ್ದಾರೆ. ಮಹಿಳೆಯ ಮನೆಗೆ ತೆರಳಿದ ಮುಖ್ಯಮಂತ್ರಿ ಅವರೊಂದಿಗೆ ಕೆಲಕಾಲ ಮಾತನಾಡಿದರು.

ನರಿಕುರವರ್ ಮತ್ತು ಇರುಳರ್‌ ಸಮುದಾಯ ವಾಸಿಸುವ ಮಾಮಲ್ಲಪುರಂ ಬಳಿಯ ಪೂಂಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸ್ಟಾಲಿನ್‌ 81 ಜನರಿಗೆ ವಸತಿ ಹಕ್ಕುಪತ್ರ ವಿತರಿಸಿದ್ದಾರೆ. 10 ಲಕ್ಷ ವೆಚ್ಚದ ಅಂಗನವಾಡಿ ಮತ್ತು ಪಂಚಾಯತ್ ಯೂನಿಯನ್ ಶಾಲೆಗಳನ್ನು ನಿರ್ಮಿಸಲು ಮತ್ತು ಇತರ ಅಭಿವೃದ್ಧಿ ಕಾರ್ಯಕ್ರಮಗಳ ಆದೇಶಗಳನ್ನು ಸಹ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಮಾಡಿದ್ದಾರೆ.

ಇದನ್ನೂ ಓದಿ: ಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ಈ ವೇಳೆ ಮಾತನಾಡಿದ ಅಶ್ವಿನಿ ಅವರು, “ಮುಖ್ಯಮಂತ್ರಿಗಳಿಗೆ ಧನ್ಯವಾದಗಳು, ನಾವು ಈಗ ಮತದಾರರ ಗುರುತಿನ ಚೀಟಿ, ಆಧಾರ್ ಮತ್ತು ಕುಟುಂಬ ಪಡಿತರ ಚೀಟಿಗಳನ್ನು ಪಡೆದುಕೊಂಡಿದ್ದೇವೆ. ಇದು ಕನಸಿನಂತೆ ಭಾಸವಾಗುತ್ತಿದೆ. ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಪಡಿತರ ಚೀಟಿ ಪಡೆಯಲು ನಾಲ್ಕು ತಿಂಗಳು ಹರಸಾಹಸ ಪಡಬೇಕಾದ ನಮಗೆ ನೇರವಾಗಿ ಅವರಿಂದಲೇ ಎರಡೇ ದಿನದಲ್ಲಿ ಕಾರ್ಡ್ ಸಿಕ್ಕಿದೆ. ನಾನು ಸಚಿವ ಶೇಖರ್ ಬಾಬು ಅವರನ್ನು ಭೇಟಿಯಾದಾಗ, ನಮ್ಮನ್ನು ಇಲ್ಲಿಂದ ಹೊರಹಾಕುತ್ತಾರೋ ಎಂಬ ಭಯದಲ್ಲಿ ಇಲ್ಲಿ ಪ್ರತಿದಿನ ನಾವು ವಾಸಿಸುತ್ತಿದ್ದೇವೆ ಎಂದು ಹೇಳಿದ್ದೆ. ಈಗ ನಮ್ಮಲ್ಲಿ ಪತ್ರಗಳಿವೆ, ನಮಗೆ ಆ ಭಯವಿಲ್ಲ” ಎಂದು ಹೇಳಿದ್ದಾರೆ.

ಚೆಂಗಲ್‌ಪೇಟ್‌ನಲ್ಲಿ ತಮಿಳುನಾಡು ಮುಖ್ಯಮಂತ್ರಿಗಳು ನರಿಕುರವರ್ ಮತ್ತು ಇರುಳ ಬುಡಕಟ್ಟು ಜನಾಂಗದ 282 ಜನರಿಗೆ 4.53 ಕೋಟಿ ರೂಪಾಯಿಗಳ ಸರ್ಕಾರದ ಕಲ್ಯಾಣ ಯೋಜನೆಯನ್ನು ಘೋಷಿಸಿದ್ದಾರೆ. ಜೊತೆಗೆ ಪುರಸಭೆಯ ಸಾರ್ವಜನಿಕ ನಿಧಿ ಯೋಜನೆಯಡಿ 10 ಲಕ್ಷ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಆದೇಶಿಸಿದರು.

ಇದನ್ನೂ ಓದಿ: ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಚೆಂಗಲ್‌ಪೇಟೆ ಜಿಲ್ಲೆಯಲ್ಲಿ ವಾಸಿಸುತ್ತಿರುವ 282 ಜನರಿಗೆ ವಸತಿ ಬಾಂಡ್‌ಗಳು, ಕುಟುಂಬ ಕಾರ್ಡ್‌ಗಳು, ಮತದಾರರ ಗುರುತಿನ ಚೀಟಿಗಳು, ಜಾತಿ ಪ್ರಮಾಣಪತ್ರಗಳು, ಕಲ್ಯಾಣ ಮಂಡಳಿ ಕಾರ್ಡ್‌ಗಳು, ತರಬೇತಿ ಆದೇಶಗಳು ಮತ್ತು ಬ್ಯಾಂಕ್ ಸಾಲವನ್ನು ಸಿಎಂ ವಿತರಿಸಿದ್ದಾರೆ. ಇಷ್ಟೇ ಅಲ್ಲದೆ, ನಗರಾಭಿವೃದ್ಧಿ ಯೋಜನೆ ಪ್ರಸ್ತಾವನೆಗೂ ಮುಖ್ಯಮಂತ್ರಿ ಅನುಮೋದನೆ ನೀಡಿದ್ದು, ಜಿಲ್ಲೆಯಲ್ಲಿ ಅಂಗನವಾಡಿ ಹಾಗೂ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಆದೇಶ ಹೊರಡಿಸಿದ್ದಾರೆ.

81 ಮಂದಿಗೆ 3.52 ಕೋಟಿ ರೂ.ವೆಚ್ಚದ ವಸತಿ ಪತ್ರ, ಆರು ಮಂದಿಗೆ ವೃದ್ಧಾಪ್ಯ ಕಲ್ಯಾಣ ಯೋಜನೆ, 21 ಮಂದಿಗೆ ಪಡಿತರ ಚೀಟಿ, 18 ಮಂದಿಗೆ ಮತದಾರರ ಗುರುತಿನ ಚೀಟಿ, ಇರುಳ ಸಮುದಾಯದ 88 ಮಂದಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ಮತ್ತು 34 ನರಿಕುರವರ್ ಜನರು ತಮ್ಮ ಅತ್ಯಂತ ಹಿಂದುಳಿದ ವರ್ಗ (MBC) ಪ್ರಮಾಣಪತ್ರಗಳನ್ನು ಪಡೆದಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಹೆಚ್ಚುವರಿಯಾಗಿ, 12 ಜನರು ಮುದ್ರಾ ಯೋಜನೆಯಡಿಯಲ್ಲಿ ತಲಾ ರೂ 1 ಲಕ್ಷ ಸಾಲದ ಮೊತ್ತವನ್ನು ಮತ್ತು ಸಣ್ಣ ವ್ಯಾಪಾರ ಯೋಜನೆಯಡಿಯಲ್ಲಿ 33 ಜನರಿಗೆ ತಲಾ ರೂ 10,000 ಸಾಲದ ಮೊತ್ತವನ್ನು ನೀಡಲಾಗಿದೆ. ಪೂಂಚೇರಿಗೆ ರಸ್ತೆ, ವಿದ್ಯುತ್, ಕುಡಿಯುವ ನೀರು ಮತ್ತು ಇತರ ಅಗತ್ಯ ವಸ್ತುಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಸಿಎಂ ಸ್ಟಾಲಿನ್ ಅವರು ಕಾರ್ಯಕ್ರಮದಲ್ಲಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?

ಅಶ್ವಿನಿ ಅವರಿಗೆ ಇತ್ತೀಚೆಗೆ ಮಾಮಲ್ಲಪುರಂ ದೇವಸ್ಥಾನದಲ್ಲಿ ಊಟ ನಿರಾಕರಿಸಲಾಗಿತ್ತು. ‘ಅನ್ನದಾನಂ’ ಬಡವರಿಗೆ ಉಚಿತ ದೇವಸ್ಥಾನದ ಊಟವನ್ನು ನೀಡುವ ಯೋಜನೆಯಾಗಿದೆ. ಡಿಎಂಕೆ ಸರ್ಕಾರದ ಮಾನವ ಸಂಪನ್ಮೂಲ ಮತ್ತು ಸಿಇ ಇಲಾಖೆಯಿಂದ ಪ್ರಾರಂಭಿಸಲ್ಪಟ್ಟಿದ್ದು, ಪ್ರಸ್ತುತ ತಮಿಳುನಾಡಿನಾದ್ಯಂತ 754 ಸ್ಥಳಗಳಲ್ಲಿ ಸಕ್ರಿಯವಾಗಿದೆ. ಈ ಯೋಜನೆಯಡಿಯಲ್ಲಿ ತಾರತಮ್ಯ ಎಸಗಲಾಗಿದೆ, ತನಗೆ ಮತ್ತು ತನ್ನ ಸಮುದಾಯದವರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಿಲ್ಲ ಎಂದು ಅಶ್ವಿನಿ ಆರೋಪಿಸಿದ್ದರು. ಅಶ್ವಿನಿ ಪ್ರಶ್ನಿಸಿದ್ದ ಈ ವಿಡಿಯೊ ವೈರಲ್ ಆಗಿತ್ತು.

ಇದು ಸರ್ಕಾರದ ಗಮನಕ್ಕೆ ಬಂದ ನಂತರ, ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಅವರಿಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದರು.

ಅಕ್ಟೋಬರ್ 29 ರಂದು ಸಚಿವ ಪಿ.ಕೆ ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್ ಬಾಲಾಜಿ ಕೂಡಾ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದ್ದರು. ಇದರ ಜೊತೆಗೆ ಅಶ್ವಿನಿಯವರೊಂದಿಗೆ ಊಟ ನಿರಾಕರಿಸಲ್ಪಟ್ಟ ನರಿಕುರವರ್‌‌ ಸಮುದಾಯದ ಹಲವು ಜನರು ಭಾಗವಹಿಸಿದ್ದರು

ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...