Homeಮುಖಪುಟಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ದಿನಾಚರಣೆಗೆ ಸಿಎಂ ಉಮರ್ ಅಬ್ದುಲ್ಲಾ ಗೈರು

ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ದಿನಾಚರಣೆಗೆ ಸಿಎಂ ಉಮರ್ ಅಬ್ದುಲ್ಲಾ ಗೈರು

- Advertisement -
- Advertisement -

ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ದಿನಾಚರಣೆ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಗೈರಾಗಿದ್ದಾರೆ. ಅವರ ನ್ಯಾಷನಲ್‌ ಕಾನ್ಫರೆನ್ಸ್ ಪಕ್ಷ ಮತ್ತು ಮೆಹಬೂಬ ಮುಫ್ತಿಯವರ ಪಿಡಿಪಿ ಕೂಡ ಕಾರ್ಯಕ್ರಮವನ್ನು ಬಹಿಷ್ಕರಿಸಿದೆ.

ಈ ಬಾರಿ ಆರನೇ ವರ್ಷದ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ದಿನಾಚರಣೆ ಮಾಡಲಾಗುತ್ತಿದೆ. ಜಮ್ಮುವಿನ ಕನ್ವೆನ್ಷನ್ ಸೆಂಟರ್‌ನಲ್ಲಿ ಈ ಪ್ರಯುಕ್ತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಕಲ್ಪಿಸಬೇಕು ಎಂದು ಆಗ್ರಹಿಸುತ್ತಿರುವ ಸಿಎಂ ಅಬ್ದುಲ್ಲಾ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.

ಅಬ್ದುಲ್ಲಾ ಅವರು ಗೈರಾಗಿದ್ದಕ್ಕೆ ವಾಗ್ದಾಳಿ ನಡೆಸಿರುವ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, “ಅಬ್ದುಲ್ಲಾ ಇಬ್ಬಗೆ ನೀತಿ ಪ್ರದರ್ಶಿಸುತ್ತಿದ್ದಾರೆ. ಸಾವಿಂಧಾನಿಕ ಹುದ್ದೆಯಲ್ಲಿದ್ದು, ಅವರು ಗೈರಾಗಿದ್ದು ದುರದೃಷ್ಟಕರ. ಅವರು ಏನೇ ಹೇಳಿದರೂ ಪ್ರಸ್ತುತ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಎಂಬುವುದು ಸತ್ಯ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶೀಘ್ರದಲ್ಲೇ ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಕಲ್ಪಿಸುವ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಮೊದಲು ಕ್ಷೇತ್ರ ವಿಂಗಡನೆ, ನಂತರ ಚುನಾವಣೆ. ಆ ಬಳಿಕ ರಾಜ್ಯತ್ವ ಕಲ್ಪಿಸುವ ಭರವಸೆ ನೀಡಿದ್ದಾರೆ” ಎಂದಿದ್ದಾರೆ.

ಅಬ್ದುಲ್ಲಾ ವಿರುದ್ದ ವಾಗ್ದಾಳಿ ನಡೆಸಿರುವ ಜಮ್ಮು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವಿಂದರ್ ರೈನಾ, “ಪಕ್ಷದ ಹೊರತಾಗಿಯೂ ತಾನು ಸಾಂವಿಧಾನಿಕ ಹುದ್ದೆಯಲ್ಲಿದ್ದೇನೆ ಎಂಬುವುದನ್ನು ಅಬ್ದುಲ್ಲಾ ಅವರು ಅರ್ಥ ಮಾಡಿಕೊಳ್ಳಬೇಕು. ಕೇಂದ್ರಾಡಳಿತ ಪ್ರದೇಶ ದಿನಾಚರಣೆ ಪ್ರತೀ ವರ್ಷ ಮಾಡಲಾಗುತ್ತಿದೆ. ಸಾವಿಂಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ಈ ಕಾರ್ಯಕ್ರಮಕ್ಕೆ ಹಾಜರಾಗುವುದು ಅವರ ಜವಾಬ್ಧಾರಿ ಎಂದಿದ್ದಾರೆ.

ಇದನ್ನೂ ಓದಿ : ಮಹಿಳಾ ಗಿಗ್ ಕಾರ್ಮಿಕರಿಂದ ಕರಾಳ ದೀಪಾವಳಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ಡಿಜಿಟಲ್ ಮುಷ್ಕರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...