Homeಮುಖಪುಟಎಲ್‌ಡಿಎಫ್ ಸರ್ಕಾರದ ಜನಪ್ರಿಯತೆ ಕಡಿಮೆ ಮಾಡಲು ಕೇಂದ್ರದಿಂದ ಪ್ರಯತ್ನ: ಸಿಪಿಐ(ಎಂ)

ಎಲ್‌ಡಿಎಫ್ ಸರ್ಕಾರದ ಜನಪ್ರಿಯತೆ ಕಡಿಮೆ ಮಾಡಲು ಕೇಂದ್ರದಿಂದ ಪ್ರಯತ್ನ: ಸಿಪಿಐ(ಎಂ)

- Advertisement -
- Advertisement -

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರಕಾರದ ಪ್ರತಿನಿಧಿಗಳು ಫೆ.8ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ರಾಜ್ಯದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಲಿದ್ದಾರೆ. ಮಂಗಳವಾರ ತಿರುವನಂತಪುರದಲ್ಲಿ ನಡೆದ ಎಲ್‌ಡಿಎಫ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.  ಎಲ್‌ಡಿಎಫ್ ಸಂಚಾಲಕ ಮತ್ತು ಹಿರಿಯ ಸಿಪಿಐ(ಎಂ) ನಾಯಕ ಇ ಪಿ ಜಯರಾಜನ್ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಅಭಿವೃದ್ಧಿಯಲ್ಲಿ ಹಿನ್ನೆಡೆ ಸೃಷ್ಟಿಸುವ ಮೂಲಕ ಎಲ್‌ಡಿಎಫ್ ಸರ್ಕಾರದ ಜನಪ್ರಿಯತೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರದ ಕಡೆಯಿಂದ ಸಂಘಟಿತ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ತೆರಿಗೆ ಪಾಲು ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಹಣವನ್ನು ಕೇಂದ್ರ ತಡೆ ಹಿಡಿಯುತ್ತದೆ. ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಬಹಳ ಮುಖ್ಯ. ರಾಜ್ಯವು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ ಕೇಂದ್ರ ಸರ್ಕಾರವು ಅಭಿವೃದ್ಧಿ ಚಟುವಟಿಕೆಗಳಿಗೆ ಹಣಕಾಸು ಸಹಾಯ ಪಡೆಯುವ ಹಕ್ಕನ್ನು ಸಹ ಮೊಟಕುಗೊಳಿಸಿದೆ.  ಕೇರಳಕ್ಕೆ ಸಾಲ ಪಡೆಯಲು ಅವಕಾಶವಿಲ್ಲದಂತೆ ಮಾಡಿದೆ ಎಂದು ಆರೋಪಿಸಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೇರಳಕ್ಕೆ ಕೇಂದ್ರ ಸರ್ಕಾರ ಮಾಡಿರುವ ಅನ್ಯಾಯವನ್ನು ಎತ್ತಿ ತೋರಿಸಲಾಗುವುದು ಎಂದು ಜಯರಾಜನ್ ಹೇಳಿದ್ದಾರೆ. ಫೆಬ್ರವರಿ 8 ರಂದು ಪಿಣರಾಯ್‌ ವಿಜಯನ್ ನೇತೃತ್ವದ ಸಚಿವ ಸಂಪುಟವು ದೆಹಲಿಯ ಕೇರಳ ಹೌಸ್‌ನಿಂದ ಜಂತರ್ ಮಂತರ್‌ಗೆ ಪ್ರತಿಭಟನೆ ಮೆರವಣಿಗೆ ನಡೆಸಲಿದೆ. ಅಲ್ಲದೆ ಕ್ಯಾಬಿನೆಟ್ ಸದಸ್ಯರು, ಎಲ್ಲಾ ಎಲ್‌ಡಿಎಫ್ ಶಾಸಕರು ಮತ್ತು ಸಂಸತ್ ಸದಸ್ಯರು ಆಂದೋಲನದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಹಲವಾರು ತಿಂಗಳುಗಳಿಂದ ಕೇರಳ ಸರ್ಕಾರ ಮತ್ತು ಎಲ್‌ಡಿಎಫ್ ರಾಜ್ಯದಲ್ಲಿ ಪ್ರತಿಭಟನೆಗೆ ಮುಂದಾಗಿದೆ. ಬಿಜೆಪಿ ನೇತೃತ್ವದ ಸರ್ಕಾರವು ರಾಜ್ಯದ ಸಾಲದ ಮಿತಿಯನ್ನು ಕಡಿತಗೊಳಿಸುವ ಮೂಲಕ ರಾಜ್ಯವನ್ನು ಹೇಗೆ ಆರ್ಥಿಕವಾಗಿ ಉಸಿರುಗಟ್ಟಿಸುತ್ತಿದೆ ಎಂಬುವುದನ್ನು ಹೇಳಿಕೊಂಡು ಬಂದಿದೆ. ರಾಜ್ಯದ ಸಾಲದ ಮೇಲೆ ಕೇಂದ್ರ ಸರ್ಕಾರ ಹೇರಿರುವ ಮಿತಿಯನ್ನು ಪ್ರಶ್ನಿಸಿ ರಾಜ್ಯವು ಈಗಾಗಲೇ ಸುಪ್ರೀಂಕೋರ್ಟ್‌ಗೆ ಅರ್ಜಿಯನ್ನು ಕೂಡ ಸಲ್ಲಿಸಿದೆ.

ಎಲ್‌ಡಿಎಫ್ ಇಡೀ ರಾಜ್ಯದಲ್ಲಿ ಈ ಬಗ್ಗೆ ಆಂದೋಲನವಾಗಬೇಕೆಂದು ಬಯಸುತ್ತದೆ ಎಂದು ಜಯರಾಜನ್ ಹೇಳಿದ್ದು, ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷ ಯುಡಿಎಫ್ ಆಂದೋಲನಕ್ಕೆ ಸಹಕರಿಸಬೇಕೆಂದು ನಾವು ಬಯಸುತ್ತೇವೆ. ಇದು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧದ ರಾಜ್ಯದ ಪ್ರತಿಭಟನೆಯಾಗಿದೆ. ಯುಡಿಎಫ್‌ ಶಾಸಕರು ಮತ್ತು ಸಂಸದರು ಆಂದೋಲನದಲ್ಲಿ ಪಾಲ್ಗೊಳ್ಳಬೇಕೆಂದು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದರೆ ರಾಜ್ಯದ ಬೂತ್ ಮಟ್ಟದ ಎಲ್‌ಡಿಎಫ್ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ರಾಜ್ಯದ ಜನರಿಗೆ ಈ ಬಗ್ಗೆ ತಿಳಿಸಲಿದ್ದಾರೆ. ಎಲ್ಲಾ ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಈ ಬಗ್ಗೆ ಸಾರ್ವಜನಿಕ ಸಭೆ ಕೂಡ ನಡೆಯಲಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಹಾಗೂ ಉಪ ನಾಯಕ ಪಿ.ಕೆ.ಕುನ್ಹಲಿಕುಟ್ಟಿ ಅವರೊಂದಿಗೆ ಆನ್‌ಲೈನ್ ಮೂಲಕ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಕುರಿತು ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಧರಣಿಯಲ್ಲಿ ಪಾಲ್ಗೊಳ್ಳಬೇಕೇ ಅಥವಾ ಬೇಡವೇ ಎಂಬುದನ್ನು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗೆ ಸತೀಶನ್ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಇದನ್ನು ಓದಿ: ಆಂಧ್ರಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...