Homeಕರ್ನಾಟಕಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ

ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ

ರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆಯನ್ನು ಆರೆಸ್ಸೆಸ್‌‌ನವರು ಗುರುತು ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದರು

- Advertisement -
- Advertisement -

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ನಿಧಿ ಸಂಗ್ರಹಿಸಲು ನಿಮಗೆ ಯಾರಾದರೂ ಬೆದರಿಕೆ ಹಾಕಿದ್ದರೆ ಅವರ ವಿರುದ್ಧ ದೂರು ನೀಡಿ. ಸರ್ಕಾರ ಮತ್ತು ಸಂಘ ಪರಿವಾರ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಜೆಡಿಎಸ್ ನಾಯಕ ಹೆಚ್‌‌.ಡಿ. ಕುಮಾರಸ್ವಾಮಿಗೆ ಹೇಳಿದ್ದಾರೆ.

“ತಮ್ಮ ತಂದೆಯವರು ಹಿಂದೆ ಮುಖ್ಯಮಂತ್ರಿಗಳಾಗಿದ್ದವರು, ದೇಶದ ಪ್ರಧಾನ ಮಂತ್ರಿಗಳಾಗಿದ್ದವರು, ಜೊತೆಗೆ  ವಿಶೇಷವಾಗಿ ದೈವಭಕ್ತಿ ಹೊಂದಿರುವ ಕುಟುಂಬವಾಗಿದೆ. ನೀವು ಎಲ್ಲಾ ಸಂದರ್ಭದಲ್ಲಿ ಬೇರೆ ಬೇರೆ ದೇವಸ್ಥಾನಗಳಿಗೆ ಹೋಗುತ್ತೀರಿ, ಮಠಮಾನ್ಯಗಳಿಗೆ ಹೋಗುತ್ತೀರಿ, ಹೋಮ ಹವನ ಮಾಡಿಸುತ್ತೀರಿ. ಇಲ್ಲಿ ಭಕ್ತಿ ಸಮರ್ಪಣೆ ಮಾಡಲು ಜಾತಿ-ಧರ್ಮವಿಲ್ಲ, ನೀವು ಯಾಕೆ ಸಂಘಪರಿವಾರದ ಕಾರ್ಯಕರ್ತರನ್ನು ಹಿಟ್ಲರ್‌ಗೆ ಹೋಲಿಕೆ ಮಾಡುತ್ತೀರಿ” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ನಮ್ಮ ಪೂಜೆಯ ಎದುರು ಇವರ ‘ರಾಮ ಜಪ’ ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ ಭ್ರಷ್ಟಾಚಾರ: HDK ಕಿಡಿ

“ಇದುವರೆಗೂ ಎಲ್ಲಿಯೂ ಹಣವನ್ನು ಬಲವಂತವಾಗಿ ವಸೂಲಿ ಮಾಡಿರುವ ಉದಾಹರಣೆ ಇಲ್ಲ. ಯಾರು ಆ ರೀತಿ ನಕಲಿಯಾಗಿ ಮಾಡುತ್ತಾರೋ ಅವರ ಮೇಲೆ ಕೇಸು ನೀಡಿ. ಜನ ಸ್ವಯಂ ಪ್ರೇರಿತವಾಗಿ ರಾಮ ಮಂದಿರ ಆಗಬೇಕು ಎಂದು ಹಣ ನೀಡುತ್ತಿದ್ದಾರೆ. ಇದು ಕೇವಲ ಬಿಜೆಪಿಯ ಮಂದಿರವಲ್ಲ, ಇದು ರಾಷ್ಟ್ರೀಯ ಸ್ಮಾರಕ. ಇದಕ್ಕೆ ಉದಾರವಾಗಿ ದೇಣಿಗೆಯನ್ನು ಕೊಡುತ್ತಿದ್ದಾರೆ” ಎಂದು ರೇಣುಕಾಚಾರ್ಯ ಹೇಳಿದ್ದಾರೆ.

“ದೇಣಿಗೆ ನೀಡದ ಮನೆಯನ್ನು ಗುರುತು ಹಾಕುತ್ತಿದ್ದಾರೆ ಎಂದು ನೀವು ತೋರಿಸಿ, ಯಾರು ನಿಮಗೆ ಬೆದರಿಕೆ ಹಾಕಿದ್ದಾರೆ. ಕುಮಾರಸ್ವಾಮಿಯವರು ಯಾವುದೆ ವಿಷಯ ಇಲ್ಲದ್ದಕ್ಕೆ ವಿಷಯಾಂತರ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ: ಕುಮಾರಸ್ವಾಮಿ

ಕುಮಾರಸ್ವಾಮಿ ಅವರು ಸೋಮವಾರದಂದು ಟ್ವೀಟರ್‌‌‌ನಲ್ಲಿ, “ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದರು.

ಈ ಹೇಳಿಕೆಗೆ ಹಲವಾರು ಜನರು ಪ್ರತಿಕ್ರಿಯೆ ನೀಡಿದ್ದರು. ಇದಕ್ಕೆ ಮತ್ತೇ ಪ್ರತಿಕ್ರಿಯೆ ನೀಡಿದ್ದ ಕುಮಾರಸ್ವಾಮಿ, “ದೇವೇಗೌಡರು, ತಮ್ಮ ಧರ್ಮದ ಬಗ್ಗೆ ಆಳವಾದ ನಂಬಿಕೆ ಇದ್ದೂ, ಪರಧರ್ಮದ ಬಗ್ಗೆ ಅಪಾರ ಗೌರವ ಉಳ್ಳವರು. ಅವರಷ್ಟು ದೈವತ್ವ ನಂಬಿದವರು, ದೇಗುಲ ನೋಡಿದವರು ಇನ್ನೊಬ್ಬರಿಲ್ಲ. ದೈವದ ಮೇಲೆ ನಮ್ಮ ಕುಟುಂಬಕ್ಕಿರುವ ನಂಬಿಕೆ ಪ್ರಶ್ನಿಸುವವರು ಮೂರ್ಖರು. ಪ್ರಧಾನಿ ಸ್ಥಾನ ಕೊಟ್ಟಿದ್ದೂ ದೇವರೇ, ಆ ಸ್ಥಾನದಲ್ಲಿ ಮುಂದುವರಿಯುವ ಅಥವಾ ಸ್ಥಾನ ತೊರೆಯುವ ಅವಕಾಶಗಳಿದ್ದರೂ ಸ್ಥಾನ ತೊರೆಯಬೇಕೆಂಬ ನಿರ್ಣಯ ಕೊಟ್ಟಿದ್ದೂ ದೇವರೇ. ಇದು ಶೃಂಗೇರಿ ಜಗದ್ಗುರುಗಳ ಎದುರು ದೇವೇಗೌಡರು ಪ್ರಮಾಣಿಕವಾಗಿ, ಬಹಿರಂಗವಾಗಿ ಹೇಳಿದ್ದ ಮಾತು. ಇದು ನಮ್ಮ ದೈವ ಬದ್ಧತೆಗೆ ಸಾಕ್ಷಿ. ಇದು ನಮಗಿರುವ ದೈವ ಕೃಪೆಗೂ ಸಾಕ್ಷಿ!” ಎಂದು ತಮ್ಮ ಕುಟುಂಬದ ದೈವಿಕ ಭಕ್ತಿಯ ಬಗ್ಗೆ ಸ್ಪಷ್ಟನೆ ನೀಡಿದ್ದರು.

ಇದಕ್ಕೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತು ಮಾಡುತ್ತಿರುವ RSS: ಕುಮಾರಸ್ವಾಮಿ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...