Homeಕರ್ನಾಟಕಸಿಎಂ ಸಭೆ ನಡೆಸಿ ಬೇಡಿಕೆ ಈಡೇರಿಸುವ ಭರವಸೆ : ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

ಸಿಎಂ ಸಭೆ ನಡೆಸಿ ಬೇಡಿಕೆ ಈಡೇರಿಸುವ ಭರವಸೆ : ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

- Advertisement -
- Advertisement -

ನೌಕರರ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸುವುದಾಗಿ ಭರವಸೆ ನೀಡಿರುವ ಹಿನ್ನೆಲೆ, ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ಸಾರಿಗೆ ನೌಕರರು ಮುಂದೂಡಿದ್ದಾರೆ.

2020ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿತ್ತು. 2023ರ ಫೆಬ್ರವರಿ 28ರವರೆಗೆ ಪರಿಷ್ಕರಣೆಯ ಹಿಂಬಾಕಿಯನ್ನು ಆಗಿನ ಸರ್ಕಾರ ನೀಡಿಲ್ಲ. ನೌಕರರ ಮತ್ತು ಈ ಸಮಯದಲ್ಲಿ ನಿವೃತ್ತರಾದವರಿಗೆ ನೀಡಬೇಕಾದ ಹಿಂಬಾಕಿ 1,785 ಕೋಟಿ ರೂಪಾಯಿ ಆಗಿದ್ದು, ಅದನ್ನು ಕೂಡಲೇ ಪಾವತಿಸಬೇಕು. 2024ರ ಜನವರಿ 1ರಿಂದ ಅನ್ವಯವಾಗುವಂತೆ ಮತ್ತೆ ವೇತನ ಪರಿಷ್ಕರಣೆ ಮಾಡಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿತ್ತು.

ನೌಕರರು ಮುಷ್ಕರ ಪ್ರಾರಂಭಿಸಿದರೆ ಜನರಿಗೆ ಸಮಸ್ಯೆಯಾಗುವ ಆತಂಕವಿತ್ತು. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಭಾನುವಾರ (ಡಿ.29) ರಾತ್ರಿ ಸಭೆ ಕರೆಯಲಾಗಿತ್ತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಆರ್‌ಟಿಸಿ, ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಮತ್ತು ಉನ್ನತ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ರಾಮಲಿಂಗಾರೆಡ್ಡಿ, “ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ನೀಡಬೇಕಿದ್ದ ಬಾಕಿ ಉಪಧನ, ಗಳಿಕೆ ನಗದೀಕರಣ ಮೊತ್ತ 224 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 5,900 ಕೋಟಿ ರೂ. ನಷ್ಟ ಉಂಟಾಗಿತ್ತು. ಅದನ್ನು ತುಂಬಿಸುವ ಕೆಲಸ ಮಾಡುತ್ತಿದ್ದೇವೆ. ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಸಲಾಯಿತು. 2000 ಕೋಟಿ ರೂ. ಬಿಡುಗಡೆ ಮಾಡಲು ಸಿಎಂ ತಯಾರಿದ್ದಾರೆ. ಫೆಬ್ರವರಿಯಲ್ಲಿ ಮಂಡಿಸುವ ಬಜೆಟ್‌ನಲ್ಲಿ ಬೇಡಿಕೆಗಳನ್ನು ಸೇರಿಸಲಾಗುವುದು” ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಹೆಚ್‌.ವಿ ಅನಂತಸುಬ್ಬರಾವ್ ಅವರು “ಸಂಕ್ರಾತಿ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೌಕರರ ಸಮಸ್ಯೆ ಆಲಿಸಲು ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಪತ್ರ ಕಳಿಸಿದ್ದಾರೆ. ಈ ಹಿನ್ನೆಲೆ ಡಿ.31ರಿಂದ ನಡೆಸಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ, ಹನಿಟ್ರ್ಯಾಪ್, ಹೆಚ್‌ಐವಿ ಹರಡಿದ ಆರೋಪ : ಚಾರ್ಜ್‌ಶೀಟ್ ಸಲ್ಲಿಸಿದ ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...