Homeಕರ್ನಾಟಕಮಾಸಿಕ ₹10 ಸಾವಿರ ಗೌರವಧನ ನೀಡುವುದಾಗಿ ಸಿಎಂ ಭರವಸೆ : ಮುಷ್ಕರ ಹಿಂಪಡೆದ ಆಶಾ ಕಾರ್ಯಕರ್ತೆಯರು

ಮಾಸಿಕ ₹10 ಸಾವಿರ ಗೌರವಧನ ನೀಡುವುದಾಗಿ ಸಿಎಂ ಭರವಸೆ : ಮುಷ್ಕರ ಹಿಂಪಡೆದ ಆಶಾ ಕಾರ್ಯಕರ್ತೆಯರು

- Advertisement -
- Advertisement -

 

ಮಾಸಿಕ ಹತ್ತು ಸಾವಿರ ರೂಪಾಯಿ ಗೌರವಧನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿರುವ ಹಿನ್ನೆಲೆ, ಜನವರಿ 7ರಿಂದ ನಡೆಸುತ್ತಿದ್ದ ಮುಷ್ಕರವನ್ನು ಆಶಾ ಕಾರ್ಯಕರ್ತೆಯರು ಶುಕ್ರವಾರ (ಜ.10) ಹಿಂಪಡೆದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಮಾಸಿಕ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.

ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು 5000 ರೂ. ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ನೀಡಲಾಗುವುದು ಎಂದು ಆಶಾ ಕಾರ್ಯಕರ್ತೆಯರಿಗೆ ಸಿಎಂ ಭರವಸೆ ನೀಡಿದ್ದಾರೆ.

ಪೋರ್ಟಲ್ ಸುಧಾರಣೆಗೆ ಸೂಚನೆ

ವಿವಿಧ ಮಾಹಿತಿಗಳನ್ನು ಪೋರ್ಟಲ್‌ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ, ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗೌರವಧನ ನಿಲ್ಲಿಸದೆ ರಜೆ

ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವಧನ ನಿಲ್ಲಿಸದೆ ರಜೆ ಮಂಜೂರು ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಬಜೆಟ್‌ಗೂ ಮುನ್ನ ಸಭೆ

ಆಯವ್ಯಯ ಅಥವಾ ಬಜೆಟ್ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಸಿಎಂ ಹೇಳಿದ್ದಾರೆ.

ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ

ಹೋರಾಟ ಮಾಡುವುದು ಸಂವಿಧಾನ ಬದ್ಧ ಹಕ್ಕು. ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ

ಬುಧವಾರ (ಜ.8) ಪ್ರತಿಭಟನಾ ಸ್ಥಳಕ್ಕೆ ರಾಜ್ಯ ಸರ್ಕಾರದ ‌ಪರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದರು. ರಾಜ್ಯ ಮತ್ತು ‌ಕೇಂದ್ರದ ಗೌರವಧನ ಸೇರಿಸಿ ಸದ್ಯಕ್ಕೆ 9,500 ರೂ. ಮುಂಗಡವಾಗಿ ನೀಡಲಾಗುವುದು. ಆದರೆ, ಆಶಾಗಳು ಮಾಡುವ ಕೆಲಸವು ಕಡಿಮೆಯಾದರೆ, ವ್ಯತ್ಯಾಸದ ಮೊತ್ತವನ್ನು ಈ 9,500ರೂ.ನಿಂದ ಕಡಿತ ಮಾಡಲಾಗುವುದು ಎಂದಿದ್ದರು.

ಆರೋಗ್ಯ ಸಚಿವರ ಈ ಹೇಳಿಕೆಯನ್ನು ಒಪ್ಪದ ಆಶಾಗಳು, 15 ಸಾವಿರ ರೂ. ನಿಶ್ಚಿತ ಗೌರವಧನ ನಿಗದಿ ಮಾಡುವುದು ಸೇರಿದಂತೆ ಇತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ಮುಂದುವರೆಸಿದ್ದರು. ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ನಮ್ಮ ಅಹವಾಲು ಆಲಿಸಬೇಕು ಎಂದು ಒತ್ತಾಯಿಸಿದ್ದರು.

ಹೋರಾಟಕ್ಕೆ ಮಣಿದ ಸಿಎಂ ಸಿದ್ದರಾಮಯ್ಯ, ಶುಕ್ರವಾರ (ಜ.10) ಮಧ್ಯಾಹ್ನ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ನಾಗಲಕ್ಷ್ಮಿ ಸೇರಿದಂತೆ ಪ್ರಮುಖರ ಜೊತೆ ಸಭೆ ನಡೆಸಿ ಭರವಸೆಗಳನ್ನು ನೀಡಿದರು. ಆ ಬಳಿಕ ಆಶಾಗಳು ತಮ್ಮ ಅನಿರ್ಧಿಷ್ಟಾವಧಿ ಮುಷ್ಕರ ಹಿಂಪಡೆದರು.

ಇದನ್ನೂ ಓದಿ : ಬಗರ್‌ ಹುಕುಂ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಸಹ ಅರ್ಹ ಕುಟುಂಬಸ್ಥರಿಗೆ ಭೂ ಮಂಜೂರುಗೊಳಿಸಬೇಕು: ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...