Homeಕರ್ನಾಟಕಎಸ್ ಸಿ-ಎಸ್ ಟಿ  ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ವಿತರಿಸಲು ಕ್ರಮಕೈಗೊಳ್ಳುವಂತೆ ಸಿಎಂ ಸೂಚನೆ

ಎಸ್ ಸಿ-ಎಸ್ ಟಿ  ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ವಿತರಿಸಲು ಕ್ರಮಕೈಗೊಳ್ಳುವಂತೆ ಸಿಎಂ ಸೂಚನೆ

- Advertisement -
- Advertisement -

ಸಿಎಂ ಸಿದ್ದರಾಮಯ್ಯ ಅವರು ವಿಶ್ವವಿದ್ಯಾಲಯಗಳಲ್ಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ  ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿವಿಗಳ ಕುಲಪತಿಗಳು ಮತ್ತು ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಎಸ್‌.ಪಿ.ಎಸ್.ಪಿ.,  ಟಿ.ಎಸ್.ಪಿ. ಅಡಿ ಲ್ಯಾಪ್ ಟಾಪ್ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ,  ಟಿ.ಎಸ್.ಪಿ. ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ಸಭೆಯಲ್ಲಿ ಸಿಎಂ ಸೂಚಿಸಿದ್ದಾರೆ.

ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಹೇಳಿದ್ದಾರೆ.

ಇದೇ ವೇಳೆ  ರಾಜ್ಯದ ವಿವಿಗಳಲ್ಲಿ ಮಂಜೂರಾದ ಶೇ. 50 ಕ್ಕೂ ಹೆಚ್ಚು ಹುದ್ದೆಗಳು  ಖಾಲಿ ಇದೆ. ವಿಶ್ವವಿದ್ಯಾಲಯಗಳ ಸಂಪನ್ಮೂಲದಿಂದಲೇ 2865 ಅತಿಥಿ ಉಪನ್ಯಾಸಕರಿಗೆ ವೇತನ ಭರಿಸಲಾಗುತ್ತಿದ್ದು, ಅವರಿಗೆ ಆರ್ಥಿಕ ಸಮಸ್ಯೆಯಾಗುತ್ತಿದೆ ಎಂದು ಕುಲಪತಿಗಳು ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದಾರೆ .

ಇದನ್ನು ಓದಿ:  ವಕೀಲರ ಸೋಗಿನಲ್ಲಿ ಬಂದು ಸಮಾಜವಾದಿ ಪಕ್ಷದ ನಾಯಕನ ಮೇಲೆ ಶೂ ಎಸೆತ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. The government will knowingly or unknowingly create divide between students.
    This is where the leaders are failing to bridge the divide. Give the benefit to all the students.

LEAVE A REPLY

Please enter your comment!
Please enter your name here

- Advertisment -

Must Read

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ...

0
ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು...