Homeಕರ್ನಾಟಕಬ್ಯಾಡಗಿ| ಮೆಣಸಿನಕಾಯಿ ದರ ಕುಸಿತ, ರೈತರ ಆಕ್ರೋಶ: ವರದಿ ಕೇಳಿದ ಸಿಎಂ

ಬ್ಯಾಡಗಿ| ಮೆಣಸಿನಕಾಯಿ ದರ ಕುಸಿತ, ರೈತರ ಆಕ್ರೋಶ: ವರದಿ ಕೇಳಿದ ಸಿಎಂ

- Advertisement -
- Advertisement -

ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ಮೆಣಸಿನಕಾಯಿ ಬೆಲೆ ದಿಢೀರನೆ ಕುಸಿದಿದ್ದರಿಂದ ಆಕ್ರೋಶಗೊಂಡ ರೈತರು ದಾಂಧಲೆ ನಡೆಸಿದ್ದಾರೆ.

ಘಟನೆಯಲ್ಲಿ 6 ಕಾರು, ಒಂದು ಅಗ್ನಿಶಾಮಕ ದಳದ ವಾಹನ, 6 ಬೈಕ್‌ಗೆ ಬೆಂಕಿ ಹಚ್ಚಲಾಗಿದ್ದು, ಎಪಿಎಂಸಿ ಕಚೇರಿಗೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ನಾಶಗೊಳಿಸಿರುವ ಆರೋಪ ಕೇಳಿ ಬಂದಿದೆ.

ವಿವಿಧ ಜಿಲ್ಲೆಗಳ ರೈತರು ತಾವು ಬೆಳೆದ ಮೆಣಸಿನಕಾಯಿಯನ್ನು ಬ್ಯಾಡಗಿ ಎಪಿಎಂಸಿಗೆ ಮಾರಾಟಕ್ಕೆ ತಂದಿದ್ದರು. ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಬೆಲೆ ಕುಸಿದಿದ್ದರಿಂದ ಆಕ್ರೋಶಗೊಂಡು ದಾಂಧಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧ 47 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ ಬ್ಯಾಡಗಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಘಟನಾ ಸ್ಥಳಕ್ಕೆ ಐಜಿ ತ್ಯಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಸ್ಥಳದಲ್ಲಿ ಸುಮಾರು 200ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ವರದಿ ಕೇಳಿದ ಸಿಎಂ:

ಘಟನೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ದರ ಕುಸಿತಕ್ಕೆ ಕಾರಣವೇನೆಂದು ತಿಳಿದು, ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದೇನೆ. ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

“ಒಂದೇ ದಿನದಲ್ಲಿ ಮೆಣಸಿನಕಾಯಿ ಬೆಲೆ ಕ್ವಿಂಟಲ್‌ಗೆ 20 ಸಾವಿರದಿಂದ 8 ಸಾವಿರಕ್ಕೆ ಕುಸಿದಿದ್ದು, ಹಾವೇರಿ ಎಪಿಎಂಸಿ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ. ಈ ರೀತಿಯ ಬೆಲೆ ಕುಸಿತ ಎಲ್ಲಾ ಎಪಿಎಂಸಿ ಮಾರುಕಟ್ಟೆಗಳಲ್ಲಿ ನಡೆದಿದೆಯೇ ಅಥವಾ ಹಾವೇರಿ ಮಾರುಕಟ್ಟೆಯಲ್ಲಿ ಮಾತ್ರವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಕಾಟನ್‌ ಕ್ಯಾಂಡಿಯಲ್ಲಿ ಹೆಚ್ಚಿನ ಕೃತಕ ಬಣ್ಣಗಳ ಬಳಕೆ ನಿಷೇಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...