Homeಕರ್ನಾಟಕ'ಮಹಾಧರಣಿ'ಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಡಿ.19ರಂದು ಸಭೆ ನಿಗದಿ

‘ಮಹಾಧರಣಿ’ಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಡಿ.19ರಂದು ಸಭೆ ನಿಗದಿ

- Advertisement -
- Advertisement -

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ‘ದುಡಿವ ಜನರ ಮಹಾಧರಣಿ’ಗೆ ರಾಜ್ಯ ಸರ್ಕಾರ ಸ್ಪಂದಿಸಿದೆ.

ಇಂದು ಧರಣಿ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಆಗಮಿಸಿದ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್‌, ಡಿಸೆಂಬರ್ 19ರಂದು ಸಂಜೆ 4 ಗಂಟೆಗೆ ರೈತ, ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಲು ಸಿಎಂ ಸಮಯ ನಿಗದಿ ಮಾಡಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಮುಖ್ಯಮಂತ್ರಿಗಳು ಸಭೆ ನಡೆಸಲು ಒಪ್ಪಿರುವ ಪತ್ರವನ್ನು ಸಂಯುಕ್ತ ಹೋರಾಟ ಸಮಿತಿ ಮುಖಂಡರಿಗೆ ನೀಡಿದರು.

ಬಳಿಕ ಮಾತನಾಡಿದ ಅವರು, ಕೃಷ್ಣ ಬೈರೇಗೌಡ ಅವರು ನಿನ್ನೆ ನಿಮ್ಮನ್ನು ಭೇಟಿಯಾದ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿದ್ದಾರೆ. ರೈತ, ಕಾರ್ಮಿಕರ ಮುಖಂಡರ ಜೊತೆಗೆ ಸಭೆ ನಡೆಸಲು ಮೂರು ನಾಲ್ಕು ಗಂಟೆಗಳಾದರೂ ಬೇಕೆಂದು ಅವರು ತಿಳಿದುಕೊಂಡಿದ್ದಾರೆ. ಡಿಸೆಂಬರ್ 19 ರಂದು ಸಂಜೆ 4 ಗಂಟೆಗೆ ಸಮಯ ನಿಗದಿ ಮಾಡಿದ್ದಾರೆ. ಹೋರಾಟಗಾರರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ತಿಳಿದಿದೆ. ದೊಡ್ಡ ಶಕ್ತಿ ಪ್ರದರ್ಶನ ಮಾಡಿದ್ದೀರಿ. ಕೇಂದ್ರ ಸರ್ಕಾರ ಕೂಡಾ ನಿಮ್ಮ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂಬ ನಂಬಿಕೆ ಇದೆ ಎಂದು ನಸೀರ್ ಅಹ್ಮದ್ ಹೇಳಿದರು.

ನಿನ್ನೆ ಮಹಾಧರಣಿ ಸ್ಥಳಕ್ಕೆ ಮುಖ್ಯಮಂತ್ರಿಗಳ ಪರವಾಗಿ ಭೇಟಿ ನೀಡಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಧರಣಿ ನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದಾರೆ. ಶೀಘ್ರದಲ್ಲೇ ಹೋರಾಟಗಾರರೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದಿದ್ದರು.

ನವೆಂಬರ್ 26 ಭಾನುವಾರದಿಂದ ಪ್ರಾರಂಭವಾದ ದುಡಿವ ಜನರ 72 ಗಂಟೆಗಳ ಮಹಾಧರಣಿ ಇಂದು (ನ.28) ಸಮಾಪ್ತಿಯಾಗಲಿದೆ.

ಇದನ್ನೂ ಓದಿ : ದುಡಿವ ಜನರು ಬೆಕ್ಕುಗಳಲ್ಲ, ಹುಲಿಗಳೆಂದು ನೆನಪಿಸಲು ‘ಮಹಾಧರಣಿ’: ಸಿದ್ದನಗೌಡ ಪಾಟೀಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪ್ರದೇಶ: ಕ್ಷೌರ ಮಾಡಲು ತಡವಾಗಿ ಬಂದ ಕ್ಷೌರಿಕನನ್ನು ಲಾಕಪ್‌ನಲ್ಲಿ ಕೂಡಿ ಹಾಕಿದ ಪೊಲೀಸ್‌ ಅಧಿಕಾರಿ

0
ಕ್ಷೌರಕ್ಕಾಗಿ ಮನೆಗೆ ಕ್ಷೌರಿಕ ತಡವಾಗಿ ಬಂದ ಎಂದು ಪೊಲೀಸ್‌ ಅಧಿಕಾರಿಯೋರ್ವ ಕ್ಷೌರಿಕನನ್ನು ಲಾಕಪ್‌ನಲ್ಲಿ ಕೂಡಿ ಹಾಕಿರುವ ಅಮಾನವೀಯ ಘಟನೆ ಬಿಜೆಪಿ ಆಡಳಿತದ ಉತ್ತರಪ್ರದೇಶದ ಬುದೌನ್‌ನ ಪೊಲೀಸ್ ಠಾಣೆಯೊಂದರಲ್ಲಿ ನಡೆದಿದೆ. ಸರ್ಕಲ್ ಆಫೀಸರ್(ಸಿಒ) ಸುನೀಲ್ ಕುಮಾರ್...