Homeಕರ್ನಾಟಕವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

ವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ವಕ್ಫ್ ಆಸ್ತಿಗಳ ಒಡೆತನ, ಖಾತೆ ವರ್ಗಾವಣೆ ಸಂಬಂಧಿಸಿದ ಗೊಂದಲಗಳ ಪರಿಶೀಲನೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಡಿ.18) ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.

ವಕ್ಫ್ ಮಂಡಳಿಯು ರೈತರು, ಮಠ-ಮಂದಿರಗಳ ಆಸ್ತಿಯನ್ನು ಕಬಳಿಸುತ್ತಿದೆ ಎಂದು ನಿಯಮ 69ರ ಅಡಿಯಲ್ಲಿ ನಡೆದ ಚರ್ಚೆಗೆ ಸದನದಲ್ಲಿ ಉತ್ತರ ನೀಡಿದ ಸಿಎಂ, “ರೈತರಿಗೆ ಮಂಜೂರಾದ ಜಮೀನು, ಮಠ-ಮಂದಿರಗಳ ಆಸ್ತಿ ಮತ್ತು ರುದ್ರಭೂಮಿಗಳ ಜಮೀನಿನ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸುವುದಿಲ್ಲ. ಇದರ ಹೊರತಾಗಿಯೂ ಗೊಂದಲಗಳಿದ್ದರೆ ಪರಿಹಾರ ಕಂಡುಕೊಳ್ಳಲು ಸಮಿತಿ ರಚಿಸಲಾಗುವುದು ಎಂದಿದ್ದಾರೆ.

ಇನಾಂ ರದ್ದತಿ ಕಾಯ್ದೆ ಮತ್ತು ಕರ್ನಾಟಕ ಭೂ ಸುಧಾರಣಾ ಕಾಯ್ದೆಯಡಿ ರೈತರಿಗೆ ಮಂಜೂರಾಗಿರುವ ಯಾವುದೇ ಜಮೀನಿನ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಲು ಅವಕಾಶ ನೀಡುವುದಿಲ್ಲ. ದೇವಸ್ಥಾನ, ರುದ್ರಭೂಮಿ ಮತ್ತು ಶಾಲೆಗಳು ವಕ್ಫ್ ಆಸ್ತಿಯಲ್ಲಿದ್ದರೆ ಅಂತಹ ಆಸ್ತಿಗಳ ಮೇಲಿನ ಹಕ್ಕನ್ನೂ ತ್ಯಜಿಸಲು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸಭೆಯಲ್ಲಿ ತೀರ್ಮಾನವಾಗಿದೆ ಎಂದು ವಕ್ಫ್ ಸಚಿವ ಝಮೀರ್ ಅಹ್ಮದ್ ತಿಳಿಸಿದ್ದಾರೆ. ಅವರ ಸಲಹೆಯಂತೆ ವಕ್ಫ್ ಆಸ್ತಿಯಲ್ಲಿರುವ ದೇವಸ್ಥಾನ, ರುದ್ರಭೂಮಿ ಮತ್ತು ಶಾಲೆಗಳಿಗೆ ರಕ್ಷಣೆ ದೊರೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಯಾವುದೇ ಖಾಸಗಿ ಆಸ್ತಿಗೆ ವಕ್ಫ್ ಮಂಡಳಿ ನೋಟಿಸ್ ನೀಡಿದ್ದರೆ, ಮಂಜೂರಾದ ಜಮೀನುಗಳ ಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದರೆ, ಇನಾಂ ರದ್ದತಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಯಡಿ ಹಕ್ಕು ಮಂಡನೆ ಬಾಕಿ ಉಳಿದಿದ್ದರೆ ಸಮಿತಿ ಮುಂದೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು. ಸಮಿತಿಯು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಿಎಂ ಹೇಳಿದ್ದಾರೆ.

ವಕ್ಫ್ ಅದಾಲತ್ ಅನ್ನು ಬಿಜೆಪಿಯವರು ತಪ್ಪಾಗಿ ಬಿಂಬಿಸಿದರು- ಸಚಿವ ಝಮೀರ್ ಅಹ್ಮದ್

ವಕ್ಫ್ ಮಂಡಳಿಗೆ ಸೇರಿದ ಆಸ್ತಿಗಳ ರಕ್ಷಣೆ ಹಾಗೂ ಗೊಂದಲಗಳ ನಿವಾರಣೆಗೆ ನಾನು ವಕ್ಫ್‌ ಆದಾಲತ್ ನಡೆಸಿದ್ದೆ. ಅದನ್ನೇ ಬಿಜೆಪಿಯವರು ತಪ್ಪಾಗಿ ಬಿಂಬಿಸಿದರು. ಕೇಂದ್ರ ಸರ್ಕಾರ ರೂಪಿಸಿರುವ ಕಾಯ್ದೆಯಂತೆ ವಕ್ಫ್ ಆಸ್ತಿಗಳ ರಕ್ಷಣೆ ಕಾರ್ಯ ನಡೆದಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿ ಎಲ್ಲಾ ಸರ್ಕಾರಗಳ ಅವಧಿಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿತ್ತು ಎಂದು ಸಚಿವ ಝಮೀರ್ ಅಹ್ಮದ್ ಹೇಳಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗಲೇ 2010, 2020 ಮತ್ತು 2021ರಲ್ಲಿ ನಾಲ್ಕು ಆದೇಶಗಳನ್ನೂ ಹೊರಡಿಸಲಾಗಿದೆ ಎಂದು ಸದನದಲ್ಲಿ ದಾಖಲೆ ಪ್ರದರ್ಶಿಸಿದರು.

ರಾಜ್ಯದಲ್ಲಿ 1.28 ಲಕ್ಷ ಎಕರೆ ವಕ್ಫ್ ಆಸ್ತಿಯಿತ್ತು. ಅದೆಲ್ಲ ದಾನಿಗಳು ಸಮಾಜದ ಶ್ರೇಯೋಭಿವೃದ್ದಿಗಾಗಿ ನೀಡಿರುವಂತದ್ದು. ಖಬರಸ್ಥಾನಗಳನ್ನು ಹೊರತುಪಡಿಸಿ ಒಂದೇ ಒಂದು ಇಂಚು ಜಾಗವನ್ನು ವಕ್ಫ್ ಮಂಡಳಿ ಸರ್ಕಾರದಿಂದ ಪಡೆದಿಲ್ಲ. 1.28 ಲಕ್ಷ ಎಕರೆಯಲ್ಲಿ ಇನಾಂ ರದ್ದತಿ ಕಾಯ್ದೆಯಡಿ 47,263 ಎಕರೆ, ಭೂ ಸುಧಾರಣಾ ಕಾಯ್ದೆಯಡಿ 23,620 ಎಕರೆ, ಸರ್ಕಾರದ ವಿವಿಧ ಯೋಜನೆಗಳಿಗೆ ಸ್ವಾಧೀನಪಡಿಸಿಕೊಳ್ಳುವ ಮೂಲಕ 3 ಸಾವಿರ ಎಕರೆ ಹೋಗಿದೆ. ಉಳಿದಿರುವುದು 17, 966 ಎಕರೆ ಮಾತ್ರ ಎಂದು ಝಮೀರ್ ಅಹ್ಮದ್ ತಿಳಿಸಿದರು.

ಸುಳ್ಳು ಹಬ್ಬಿಸಿ ಜನರಲ್ಲಿ ಭೀತಿ ಹುಟ್ಟಿಸಲಾಗುತ್ತಿದೆ – ಸಚಿವ ಕೃಷ್ಣಬೈರೇಗೌಡ

ವಕ್ಫ್‌ ಆಸ್ತಿಯನ್ನು ಶೇ.95ರಷ್ಟು ಒತ್ತುವರಿ ಮಾಡಿರುವುದು ಮುಸ್ಲಿಮರೇ ಆಗಿದ್ದಾರೆ. ವಕ್ಫ್‌ ಆಸ್ತಿಯ ಹೆಸರಿನಲ್ಲಿ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಈ ಮೂಲಕ ಒಗ್ಗಟ್ಟಿನಿಂದ ಇರುವ ಗ್ರಾಮೀಣ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಎಲ್ಲಾ ಸರ್ಕಾರಗಳ ಅವಧಿಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ವಕ್ಫ್ ಆಸ್ತಿ ಅತಿಕ್ರಮಣದ ವಿರುದ್ದ ಕಾರ್ಯಪಡೆ ರಚಿಸಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದೇಶವಾಗಿತ್ತು. ಹೀಗಿದ್ದರೂ, ರೈತರು, ದೇವಸ್ಥಾನಗಳ ಆಸ್ತಿಯನ್ನು ಕಸಿದುಕೊಳ್ಳಲಾಗತ್ತಿದೆ ಎಂದು ಬಿಜೆಪಿಗರು ವಿವಾದ ಎಬ್ಬಿಸಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು.

ವಕ್ಫ್ ಮಂಡಳಿಗೆ 1,12,000 ಎಕರೆ ಜಮೀನು ನೋಟಿಫೈ ಆಗಿತ್ತು. 47,263 ಎಕರೆ ಇನಾಂ ರದ್ಧತಿ ಹಾಗೂ 23,620 ಎಕರೆಯನ್ನು ಭೂಸುಧಾರಣಾ ಕಾಯಿದೆಯಡಿ ರೈತರಿಗೆ ಮಂಜೂರು ಮಾಡಲಾಗಿದೆ. ಒಟ್ಟು 70 ಸಾವಿರ ಎಕರೆ ರೈತರ ವಶದಲ್ಲಿದೆ. ಇನಾಮ್ ರದ್ದತಿ ಮತ್ತು ಭೂ ಸುಧಾರಣೆ ಕಾಯ್ದೆಯಡಿ ಭೂಮಿ ಮಂಜೂರಾದ ರೈತರ ತಂಟೆಗೆ ಸರ್ಕಾರ ಹೋಗುವುದಿಲ್ಲ. ವಕ್ಫ್ ಜಮೀನಿನಲ್ಲಿ ಮಸೀದಿ, ದರ್ಗಾ, ಖಬರ್‌ಸ್ತಾನ ಇದೆ. ಅಂತದ್ದು ಒತ್ತುವರಿ ಆಗಿದ್ದರೆ ಅದನ್ನು ಬಿಟ್ಟು ಕೊಡುವಂತೆ ಹೇಳಿದ್ದಾರೆ. ನೀರಾವರಿ ಹಾಗೂ ಇನ್ನಿತರೆ ಉದ್ದೇಶಗಳಿಗೆ 3,101 ಎಕರೆಯನ್ನು ಸರ್ಕಾರ ಸ್ವಾಧೀನಕ್ಕೆ ಪಡೆದಿದೆ. ಸುಮಾರು 17,969 ಎಕರೆಯನ್ನು ಖಾಸಗಿಯವರು ಒತ್ತುವರಿ ಮಾಡಿದ್ದಾರೆ ಕೃಷ್ಣಬೈರೆಗೌಡ ಸದನಕ್ಕೆ ತಿಳಿಸಿದರು.

ಬಿಜೆಪಿಗೆ ಕೈಕೊಟ್ಟ ಜೆಡಿಎಸ್

ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಭಾತ್ಯಾಗ ಮಾಡಿತು. ಆದರೆ, ಅದರ ಮಿತ್ರಪಕ್ಷ  ಜೆಡಿಎಸ್‌ನ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಸೇರಿದಂತೆ ಸದಸ್ಯರಾದ ಎ. ಮಂಜು, ಶಾರದಾ ಪೂರ್ಯಾನಾಯ್ಕ್, ಜಿ.ಟಿ ದೇವೇಗೌಡ ಸದನದಲ್ಲೇ ಉಳಿಯುವ ಮೂಲಕ ಬಿಜೆಪಿ ಮುಖಭಂಗ ಉಂಟು ಮಾಡಿದರು. ಸರ್ಕಾರ ನೀಡಿದ ಸುದೀರ್ಘ ಉತ್ತರಕ್ಕೆ ಸುರೇಶ್ ಬಾಬು ಅಭಿನಂದಿಸಿದರು. ಈ ಮೂಲಕ ಬಿಜೆಪಿ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ ಎಂಬ ಸಂದೇಶ ನೀಡಿದರು. ಇದೇ ವೇಳೆ ಬಿಜೆಪಿ ಸದಸ್ಯರಾದ ಎಸ್‌.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಕೂಡ ಸದನದಲ್ಲೇ ಉಳಿಯುವ ಮೂಲಕ ಗಮನಸೆಳೆದರು.

ಇದನ್ನೂ ಓದಿ : ಕೆಐಎಡಿಬಿ ಭೂ ಸ್ವಾಧೀನ ಪರಿಹಾರದ ಹಣ ಆರ್‌ಟಿಜಿಎಸ್‌ ಮೂಲಕ ಪಾವತಿ: ಸಚಿವ ಎಂ.ಬಿ. ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...