Homeಮುಖಪುಟಸಹಕಾರಿ ಬ್ಯಾಂಕ್‌ಗಳಲ್ಲಿರುವ ರೈತರ ಸಾಲದ ಬಡ್ಡಿ ಮನ್ನಾ: ಸಿಎಂ ಸಿದ್ದರಾಮಯ್ಯ ಘೋಷಣೆ

ಸಹಕಾರಿ ಬ್ಯಾಂಕ್‌ಗಳಲ್ಲಿರುವ ರೈತರ ಸಾಲದ ಬಡ್ಡಿ ಮನ್ನಾ: ಸಿಎಂ ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನದ ಕೊನೆಯ ದಿನವಾದ ಇಂದು (ಡಿಸೆಂಬರ್ 15) ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಮಾತನಾಡಿದ ಸಿಎಂ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದು ತಿಳಿಸಿದ್ದಾರೆ.

“ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುತ್ತೇವೆ ಎಂದು ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರಲಿಲ್ಲ. ಆದರೂ ಮಾಡುತ್ತಿದ್ದೇವೆ. 2018ರ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಪ್ರಣಾಳಿಕೆಯಲ್ಲಿ ರೈತರ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ, ಬಳಿಕ ಬಂದ ಯಡಿಯೂರಪ್ಪ ಸರ್ಕಾರ ಯಾವುದೇ ಸಾಲ ಮನ್ನಾ ಮಾಡಿಲ್ಲ” ಎಂದು ಸಿಎಂ ಹೇಳಿದ್ದಾರೆ.

ವಿಧಾನಸಭೆ ಕಲಾಪದ ಕೊನೆಯ ದಿನವಾದ ಇಂದು ಸಿಎಂ ಹಲವು ಷೋಷಣೆಗಳನ್ನು ಮಾಡಿದ್ದಾರೆ. ಅವುಗಳು ಹೀಗಿವೆ..

  • ಸಹಕಾರ ಬ್ಯಾಂಕ್ ಗಳಲ್ಲಿರುವ ರೈತರ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ.
  • ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪನೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು.
  • ಉತ್ತರ ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ಉದ್ಯೋಗಾವಕಾಶ ಸೃಷ್ಟಿಗೆ ಕ್ರಮ.
  • ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪನೆ.
  • ರಾಯಚೂರಿನಲ್ಲಿ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು.
  • ಧಾರವಾಡ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆ.
  • ಧಾರವಾಡದಲ್ಲಿರುವ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ಉನ್ನತೀಕರಣ.

ಡಿಸೆಂಬರ್ 4ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಾರಂಭಗೊಂಡ ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದು(ಡಿ.15) ಕೊನೆಗೊಂಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...