Homeಕರ್ನಾಟಕಸಿಎಂ ಸಿದ್ದರಾಮಯ್ಯ ಬಣದ ವಿರುದ್ಧ ಶಿವಕುಮಾರ್ ಹೊಸ ದಾಳಿ; ಆಪ್ತ ಸಚಿವರ ತಲೆದಂಡಕ್ಕೆ ತಂತ್ರ!

ಸಿಎಂ ಸಿದ್ದರಾಮಯ್ಯ ಬಣದ ವಿರುದ್ಧ ಶಿವಕುಮಾರ್ ಹೊಸ ದಾಳಿ; ಆಪ್ತ ಸಚಿವರ ತಲೆದಂಡಕ್ಕೆ ತಂತ್ರ!

- Advertisement -
- Advertisement -

ರಾಜ್ಯ ಕಾಂಗ್ರೆಸ್‌ನಲ್ಲಿನ ಒಳ ಜಗಳ ಹೊಸ ತಿರುವು ಪಡೆದುಕೊಂಡಿದ್ದು, ತನ್ನನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲು ಪ್ರಯತ್ನಿಸುತ್ತಿರುವ ವಿರೋಧಿಗಳ ವಿರುದ್ಧ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಾಗಿದ್ದಾರೆ. ಸಿದ್ದರಾಮಯ್ಯ ಅವರ ಆಪ್ತರು ಆರಂಭಿಸಿದ ಸಂಘಟಿತ ಅಭಿಯಾನವನ್ನು ಸರಿದೂಗಿಸುವುದು ಈ ಪ್ರತಿದಾಳಿಯ ಉದ್ದೇಶವಾಗಿದೆ ಎಂದು ವರದಿ ಹೇಳಿದೆ. ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರ ವಿರುದ್ಧ ಹೊಸದಾಗಿ ದಾಳಿ ನಡೆಸಿರುವ ಶಿವಕುಮಾರ್ ಅವರು ರಾಜ್ಯ ಸಚಿವ ಸಂಪುಟ ಪುನರ್ರಚನೆ ಮಾಡುವಂತೆ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಬೀಡುಬಿಟ್ಟಿದ್ದಾಗ ಶಿವಕುಮಾರ್ ಅವರು ಕಾಂಗ್ರೆಸ್‌ನ ಉನ್ನತ ನಾಯಕತ್ವವನ್ನು ಭೇಟಿಯಾದಾಗ ಈ ವಿಷಯ ಚರ್ಚೆಗೆ ಬಂದಿತು ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೌಲ್ಯಮಾಪನದ ನಂತರ, “ಕಾರ್ಯನಿರ್ವಹಿಸದ” ಸಚಿವರನ್ನು ಕೈಬಿಟ್ಟು ಹೊಸ ಮುಖಗಳನ್ನು ತರುವ ಬಗ್ಗೆ ಶಿವಕುಮಾರ್ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಡಿಎಚ್‌ ವರದಿ ಹೇಳಿದೆ. ಅವರ ಪಟ್ಟಿಯಲ್ಲಿ ಸಿಎಂ ಅವರ ಆಪ್ತರು ಇದ್ದಾರೆ ಎಂದು ಎಂದು ವರದಿ ಉಲ್ಲೇಖಿಸಿದೆ. ಸಿಎಂ ಸಿದ್ದರಾಮಯ್ಯ

ಅವರು ಸೂಚಿಸಿರು ಪ್ರಮುಖರಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ವಸತಿ ಮತ್ತು ವಕ್ಫ್ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್, ಗಣಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಸೇರಿದ್ದಾರೆ ಎಂದು ವರದಿ ಹೇಳಿದೆ.

ವಿರೋಧಿಗಳ ಪಾಳೆಯದ ಇತ್ತೀಚಿನ ನಡೆಗಳ ಬಗ್ಗೆ ತಿಳಿದ ನಂತರ, ಸಿದ್ದರಾಮಯ್ಯ ಅವರ ಬೆಂಬಲಿಗರು ಕಳೆದ ಕೆಲವು ದಿನಗಳಲ್ಲಿ ದೆಹಲಿಗೆ ಧಾವಿಸಿ, ತಮ್ಮ ಪ್ರಯತ್ನವನ್ನು ಚುರುಕುಗೊಳಿಸಿದ್ದಾರೆ. ಶಿವಕುಮಾರ್ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕುವುದರ ಜೊತೆಗೆ, ಅವರು ಹೊಂದಿರುವ ನೀರಾವರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಕೆಲವು ಪ್ರಮುಖ ಖಾತೆಗಳನ್ನು ಇತರ ಸಚಿವರಿಗೆ ಹಂಚಬೇಕೆಂದು ಅವರು ಹೈಕಮಾಂಡ್ ಅನ್ನು ಒತ್ತಾಯಿಸಿದ್ದಾರೆ.

ಶಿವಕುಮಾರ್ ಪ್ರಸ್ತುತ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿಯಾಗಿ ಅವಳಿ ಜವಾಬ್ದಾರಿಗಳನ್ನು ಹೊಂದಿದ್ದಾರೆ, ಜೊತೆಗೆ ಎರಡು ಖಾತೆಗಳನ್ನು ಕೂಡಾ ಅವರು ನಿರ್ವಹಿಸುತ್ತಿದ್ದಾರೆ.

ಸಂಪುಟ ಪುನರ್ರಚನೆಯಾದರೆ, ಶಿವಕುಮಾರ್ ಅವರ ಆಪ್ತ ಸಚಿವರಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಬೇಕು ಎಂದು ಸಿಎಂ ಪಾಳಯವು ಕೇಂದ್ರ ನಾಯಕತ್ವದ ಮೇಲೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದೆ.

ಸಿದ್ದರಾಮಯ್ಯ ಅವರ ಇಬ್ಬರು ಆಪ್ತರಾದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಗೃಹ ಸಚಿವ ಜಿ. ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಇತರ ನಾಯಕರು ತಮ್ಮ ಮನವಿಯನ್ನು ನೀಡಲು ಒಂದೆರಡು ದಿನಗಳಲ್ಲಿ ರಾಷ್ಟ್ರ ರಾಜಧಾನಿಗೆ ತೆರಳುವ ನಿರೀಕ್ಷೆಯಿದೆ.

ಕಾಂಗ್ರೆಸ್ ನಾಯಕತ್ವವು ಸಚಿವರ ಮಧ್ಯಂತರ ಮೌಲ್ಯಮಾಪನ ಮಾಡಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದ್ದು, ಆದರೆ ಮುಂದಿನ ತಿಂಗಳು ನಡೆಯಲಿರುವ ರಾಜ್ಯ ಬಜೆಟ್ ಅಧಿವೇಶನದ ನಂತರವೇ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಅದು ಸೂಚಿಸಿದೆ.

ಇದನ್ನೂಓದಿ:  ಅಕ್ರಮ ವಲಸೆ | 6 ಟ್ರಾವೆಲ್‌ ಏಜೆನ್ಸಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಪಂಜಾಬ್ ಪೊಲೀಸರು

ಅಕ್ರಮ ವಲಸೆ | 6 ಟ್ರಾವೆಲ್‌ ಏಜೆನ್ಸಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...