Homeಕರ್ನಾಟಕಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಚುರುಕುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಚುರುಕುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

- Advertisement -
- Advertisement -

ರಾಜ್ಯದಲ್ಲಿ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಚುರುಕುಗೊಳಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ, ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಸಲಹೆ ನಿಡಿದ್ದಾರೆ.

“ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು” ಎಂದರು.

“ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್‌ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು” ಎಂದು ಹೇಳಿದರು.

“ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

“ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು” ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

“ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು. ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯಾಗಿ ನೇಮಿಸಬೇಕು” ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

“ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಬೇಕು. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು” ಎಂದರು.

“ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‌ಲೈನ್‌ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು” ಎಂದರು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...