Homeಕರ್ನಾಟಕಸಿಎಂ ಸಿದ್ದರಾಮಯ್ಯ 'ಜನತಾ ದರ್ಶನ': 3,812 ಅರ್ಜಿಗಳ ಸ್ವೀಕಾರ

ಸಿಎಂ ಸಿದ್ದರಾಮಯ್ಯ ‘ಜನತಾ ದರ್ಶನ’: 3,812 ಅರ್ಜಿಗಳ ಸ್ವೀಕಾರ

- Advertisement -
- Advertisement -

ನಿನ್ನೆ(ನ.27) ಬೆಳಿಗ್ಗೆ 10 ಗಂಟೆಯಿಂದ ಸಂಜೆ 4:30ರವರೆಗೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜ್ಯ ಮಟ್ಟದ ‘ಜನತಾ ದರ್ಶನ’ ಕಾರ್ಯಕ್ರಮಕ್ಕೆ ಸಾವಿರಾರು ಜನರು ತಮ್ಮ ಅಹವಾಲು ಹೊತ್ತು ಆಗಮಿಸಿದ್ದರು.

ರಾಜ್ಯ ವಿವಿಧ ಭಾಗಗಳಿಂದ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದಿದ್ದ ಜನರನ್ನು ಖುದ್ದು ಮುಖ್ಯಮಂತ್ರಿಯೇ ಭೇಟಿಯಾಗಿ ಅಹವಾಲು ಆಲಿಸಿದರು.

ಮುಖ್ಯಮಂತ್ರಿಗಳ ಕಚೇರಿ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ನಿನ್ನೆ ಬೆಳಿಗ್ಗೆಯಿಂದ ಸಂಜೆಯವರೆಗೆ ಒಟ್ಟು 3,812 ಅರ್ಜಿಗಳನ್ನು ಜನರಿಂದ ಸ್ವೀಕರಿಸಲಾಗಿದೆ. ಈ ಪೈಕಿ 980 ಅರ್ಜಿಗಳನ್ನು ಮುಖ್ಯಮಂತ್ರಿಗಳೇ ನೇರವಾಗಿ ಸ್ವೀಕರಿಸಿದ್ದಾರೆ. ಉಳಿದ 2,862 ಅರ್ಜಿಗಳನ್ನು ಅಧಿಕಾರಿಗಳು ಸ್ವೀಕರಿಸಿ ಐಪಿಜಿಆರ್‌ಎಸ್‌ ತಂತ್ರಶಾದಲ್ಲಿ ನೋಂದಣಿ ಮಾಡಿದ್ದಾರೆ.

ಹಲವು ಅರ್ಜಿಗಳಿಗೆ ಸಿಎಂ ಸ್ಥಳದಲ್ಲೇ ಪರಿಹಾರ ಒದಗಿಸಿದ್ದಾರೆ. ಉಳಿದ ಅರ್ಜಿಗಳನ್ನು ವಿಲೇವಾರಿ ಮಾಡಲು ಅಧಿಕಾರಿಗಳಿಗೆ 15 ದಿನಗಳ ಸಮಯ ನೀಡಿದ್ದಾರೆ.

ಸಾವಿರಾರು ಜನರು ಸಮಸ್ಯೆ ಹೊತ್ತು ಬಂದಿರುವುದನ್ನು ಕಂಡು ಸಿಎಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನುಮುಂದೆ ಇಷ್ಟು ಅರ್ಜಿಗಳು ನನ್ನ ಬಳಿ ಬರಬಾರದು. ಸ್ಥಳೀಯ ಮಟ್ಟದಲ್ಲೇ ಜನರ ಸಮಸ್ಯೆ ಪರಿಹರಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂ ಜನತಾ ದರ್ಶನದ ವೇಳೆ ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿರಿದ್ದರು.

ಇದನ್ನೂ ಓದಿ : ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ; ಆರೋಪಿಗಳು ಪೊಲೀಸ್‌ ವಶಕ್ಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

0
ಔಷಧೀಯ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ಒಪ್ಪಿಕೊಂಡ ಹಿನ್ನೆಲೆ, ವಕೀಲರೊಬ್ಬರು ಈ ಲಸಿಕೆಯ ಅಡ್ಡ ಪರಿಣಾಮಗಳು ಮತ್ತು ಅಪಾಯದ ಅಂಶಗಳನ್ನು ಪರೀಕ್ಷಿಸಲು ವೈದ್ಯಕೀಯ...