Homeಕರ್ನಾಟಕಜಿಎಸ್‌ಟಿ ಜಾರಿ ಮಾಡಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ, ಈಗ ಬೆನ್ನು ತಟ್ಟಿಕೊಳ್ಳುತ್ತಿರುವುದು ಮೋದಿಯವರೇ : ಸಿಎಂ...

ಜಿಎಸ್‌ಟಿ ಜಾರಿ ಮಾಡಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ, ಈಗ ಬೆನ್ನು ತಟ್ಟಿಕೊಳ್ಳುತ್ತಿರುವುದು ಮೋದಿಯವರೇ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. ಜಿಎಸ್‌ಟಿ ಜಾರಿ ಮಾಡಿದ್ದೂ ಮೋದಿ. ಜಿಎಸ್‌ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಸೋಮವಾರ (ಸೆ.22) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಎಂಟು ವರ್ಷ ವಿಪರೀತ ಜಿಎಸ್‌ಟಿ ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಸಿಎಂ ಪ್ರಶ್ನಿಸಿದರು.

ಜಿಎಸ್‌ಟಿ ಶೇಕಡ 18, 28 ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು.

ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ ಎಂದು ಸಿಎಂ ಹೇಳಿದರು.

ಮಾಜಿ ಸಂಸದರಿಗಿಂತ ನಾನು ಉತ್ತಮ ಹಿಂದೂ: ಸಿಎಂ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಚಾಟಿ ಬೀಸಿದ್ದನ್ನು ಪ್ರಸ್ತಾಪಿಸಿದ ಸಿಎಂ, ಬಾನು ಮುಷ್ತಾಕ್‌ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್ ಸಂವಿಧಾನದ ಪೀಠಿಕೆ ಓದಲು ಹೇಳಿದೆ ಎಂದರು.

ಬಾನು ಮುಷ್ತಾಕ್ ಅವರಿಗೆ ಎರಡು ಬಾರಿ ಸಂಸದರಾಗಿದ್ದವರು ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡ ಹಬ್ಬ ಎನ್ನುವುದೂ ಕೂಡ ಗೊತ್ತಿಲ್ಲ ಅವರಿಗೆ. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು. ಇಬ್ಬರು ದೇವರನ್ನು ಹೊಂದಿರುವ ನಾನು ಅವರಿಗಿಂತ ಉತ್ತಮ ಹಿಂದೂ ಎಂದು ಸಿಎಂ ಹೇಳಿದರು.

‘ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ..’; ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...