Homeಮುಖಪುಟಐದನೇ ಗ್ಯಾರಂಟಿ 'ಯುವನಿಧಿ ಯೋಜನೆ'ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಐದನೇ ಗ್ಯಾರಂಟಿ ‘ಯುವನಿಧಿ ಯೋಜನೆ’ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಚುನಾವಣಾ ಪೂರ್ವ ನೀಡಿದ್ದ ಗ್ಯಾರಂಟಿಗಳ ಪೈಕಿ ಐದನೇ ಗ್ಯಾರಂಟಿ ‘ಯುವನಿಧಿ ಯೋಜನೆ’ಗೆ ಇಂದು (ಜ.12) ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಶಿವಮೊಗ್ಗ ನಗರ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯದ ವಿವಿದಡೆಗಳಿಂದ ಆಗಮಿಸಿದ್ದ 15 ಮಂದಿ ಯುವ ಜನರಿಗೆ ಸಾಂಕೇತಿಕವಾಗಿ ನಿರುದ್ಯೋಗ ಭತ್ಯೆಯ ಚೆಕ್ ನೀಡುವ ಮೂಲಕ ಸಿಎಂ ಯೋಜನೆಯನ್ನು ಉದ್ಘಾಟಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್, ಮಧು ಬಂಗಾರಪ್ಪ, ಬಿ.ನಾಗೇಂದ್ರ, ಮಂಕಾಳ್ ವೈದ್ಯ ಸೇರಿದಂತೆ ಪ್ರಮುಖರು ಹಾಜರಿದ್ದರು.

ಕಾರ್ಯಕ್ರಮದ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, “ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಅವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ ಎಂದಿದ್ದಾರೆ.

“ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಗೃಹಲಕ್ಷಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಯ ಐದು ಗ್ಯಾರಂಟಿಗಳನ್ನು ನೀಡಿತ್ತು. ಯುವನಿಧಿ ಮೂಲಕ ಐದೂ ಗ್ಯಾರಂಟಿಗಳು ಜಾರಿಯಾದಂತಾಗಿದೆ.

ಇದನ್ನೂ ಓದಿ: ‘ಯುವನಿಧಿ’ ನೋಂದಣಿ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...