Homeಕರ್ನಾಟಕಕೇಂದ್ರ ಗೃಹ ಸಚಿವರನ್ನು ಭೇಟಿಯಾದ ಸಿಎಂ; ಬರ ಪರಿಹಾರ ಬಿಡುಗಡೆಗೆ ಮನವಿ

ಕೇಂದ್ರ ಗೃಹ ಸಚಿವರನ್ನು ಭೇಟಿಯಾದ ಸಿಎಂ; ಬರ ಪರಿಹಾರ ಬಿಡುಗಡೆಗೆ ಮನವಿ

- Advertisement -
- Advertisement -

ಕೂಡಲೇ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯಯವರನ್ನು ಭೇಟಿಯಾಗಿದ್ದರು. ಇಂದು ಗೃಹ ಸಚಿವ ಅಮಿತ್ ಅವರನ್ನು ಭೇಟಿಯಾಗಿ, ಪ್ರಕೃತಿ ವಿಕೋಪ ಕುರಿತಂತೆ ಕೂಡಲೇ ಉನ್ನತ ಮಟ್ಟದ ಸಭೆ ನಡೆಸಿ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, ‘ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು, ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,18,177 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ’ ಎಂದು ಹೇಳಿದ್ದಾರೆ.

₹4,663 ಕೋಟಿ ಇನ್ಪುಟ್ ಸಬ್ಸಿಡಿ, ₹12,577 ಕೋಟಿ ತುರ್ತು ಪರಿಹಾರ, ₹566 ಕೋಟಿ ಕುಡಿಯುವ ನೀರಿಗಾಗಿ ಹಾಗೂ ₹363 ಕೋಟಿ ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

‘ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಪರಿಗಣಿಸುವಾಗ ಕೇಂದ್ರ ಸರ್ಕಾರವು 2015-16ರ ಕೃಷಿ ಗಣತಿಯ ದತ್ತಾಂಶವನ್ನು ಪರಿಗಣಿಸುತ್ತಿದೆ. ಆದರೆ ಇದು 8 ವರ್ಷ ಹಳೆಯ ಮಾಹಿತಿಯಾಗಿದ್ದು, ಆಸ್ತಿ ವಿಭಜನೆ ಮತ್ತಿತರ ಕಾರಣಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆ ಹೆಚ್ಚಾಗಿದ್ದು, 83 ಲಕ್ಷಕ್ಕೂ ಹೆಚ್ಚಿದೆ. ಪಿಎಂ-ಕಿಸಾನ್ ಯೋಜನೆಗೆ ರಾಜ್ಯದ ರೈತರ ದತ್ತಾಂಶ ಸಂಗ್ರಹಿಸುವ ತಂತ್ರಾಂಶ ಫ್ರೂಟ್‌ನಲ್ಲಿ ದಾಖಲಿಸಿದ ಮಾಹಿತಿಯನ್ನು ಪರಿಗಣಿಸಲಾಗುತ್ತಿದೆ. ಅಂತೆಯೇ ಬೆಳೆ ಪರಿಹಾರ ವಿತರಣೆಗೂ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡುತ್ತೇನೆ’ ಎಂದಿದ್ದಾರೆ.

‘ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದು ಸಲ್ಲಿಸಲಾಗಿತ್ತು. ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆರ್.ಎಫ್. ಅಡಿ ₹17,901 ಕೋಟಿ ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ ₹12,577 ಕೋಟಿ ಮೊತ್ತವೂ ಸೇರಿದೆ. ನವೆಂಬರ್ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ ₹18,177 ಕೋಟಿ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ’ ಎಂದು ಕೇಂದ್ರ ಗೃಹ ಸಚಿವರಿಗೆ ಮನವರಿಕೆ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ರಾಜ್ಯಸಭಾ ಸದಸ್ಯರಾದ ಜಿ.ಸಿ. ಚಂದ್ರಶೇಖರ್ ಹಾಗೂ ಡಾ. ಎಲ್. ಹನುಮಂತಯ್ಯ ಇದ್ದರು.

ಇದನ್ನೂ ಓದಿ; ನಾನು ದಲಿತ ಎಂಬ ಕಾರಣಕ್ಕೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಬೇಕೆ?: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...