Homeಕರ್ನಾಟಕಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

- Advertisement -
- Advertisement -

“ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಈಗ ಫ್ಯಾಷನ್ ಆಗಿಬಿಟ್ಟಿದೆ, ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಏಳು ಜನ್ಮದವರೆಗೂ ಸ್ವರ್ಗ ಸಿಗುತಿತ್ತು” ಎಂದು ರಾಜ್ಯಸಭೆಯಲ್ಲಿ ಹೇಳುವ ಮೂಲಕ ಬಾಬಾ ಸಾಹೇಬರಿಗೆ ಅವಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಹಲವರು ಕಿಡಿಕಾರಿದ್ದಾರೆ.

ಅಂಬೇಡ್ಕರ್ ವಿರುದ್ಧದ ಹೇಳಿಕೆ ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ ಮಹದೇವಪ್ಪ, ಕೇಂದ್ರ ಗೃಹ ಸಚಿವರಿಗೆ ತಿರುಗೇಟು ನೀಡಿದ್ದಾರೆ.

ಈ  ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಮಾತಿನಿಂದ ನಮಗೆ ಆಶ್ಚರ್ಯವಾಗಿಲ್ಲ, ನಮಗೆ ಇದು ಗೊತ್ತಿತ್ತು. ಸಂಸತ್ ನಲ್ಲಿ (18-12-2024) ಆಡಿದ ನಿಮ್ಮ ಮಾತಿನಿಂದ ಇಡೀ ದೇಶಕ್ಕೆ ನಿಮ್ಮ ಅಂತರಂಗದ ಅರಿವಾಗಿದೆ.. ಬಾಬಾಸಾಹೇಬ್ ಅವರು ಕೊಟ್ಟ ಸಂವಿಧಾನದಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಸಂಸತ್‌ನಲ್ಲಿ ನಿಂತು ಅವರ ಸ್ಮರಣೆಯನ್ನು ವ್ಯಸನ ಎಂದು ತುಚ್ಛೀಕರಿಸುವ ನಿಮ್ಮ ಧಾಷ್ಟ್ರಕ್ಕೆ ಶಹಭಾಸ್ ಅನ್ನಲೇಬೇಕು” ಎಂದು ಹೇಳಿದ್ದಾರೆ.

“ಅಮಿತ್ ಶಹಾ ಅವರೇ, ಬಾಬಾಸಾಹೇಬರ ಬಗ್ಗೆ ತಮಗೆ ಅಪಾರ ಅಭಿಮಾನ ಇದೆ, ಗೌರವ ಇದೆ, ನನ್ನ ಮಾತುಗಳನ್ನು ತಿರುಚಲಾಗಿದೆ ಎಂದೆಲ್ಲ ಸ್ಪಷ್ಟೀಕರಣ ಕೊಟ್ಟು ಆತ್ಮವಂಚನೆ ಮಾಡಿಕೊಳ್ಳಬೇಡಿ. ಅದನ್ನು ಸಮರ್ಥಿಸಿಕೊಂಡು ದೇಶವನ್ನು ಎದುರಿಸಿ” ಎಂದು ಸವಾಲು ಹಾಕಿದ್ದಾರೆ.

“ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ. ನಮ್ಮ ಉಸಿರು ಇರುವವರೆಗೆ, ಈ ಭೂಮಿಯಲ್ಲಿ ಸೂರ್ಯ-ಚಂದ್ರ ಇರುವವರೆಗೆ ಅಂಬೇಡ್ಕರ್ ಸ್ಮರಣೆ ಇರಲಿದೆ. ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ್ಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ. ನಿಮ್ಮ ದುರಹಂಕಾರದ ಮಾತಿಗೆ ನಿಮ್ಮ ಬೆನ್ನಹಿಂದಿರುವ ಚೇಲಾಗಳು ಮೇಜುಕುಟ್ಟಿ ಸಂಭ್ರಮಿಸಿರಬಹುದು. ಆದರೆ, ಅಂಬೇಡ್ಕರ್ ಅವರಿಂದಾಗಿ ಸಮಾನತೆ ಮತ್ತು ಘನತೆಯ ಬದುಕನ್ನು ಪಡೆದಿರುವ ದೇಶದ ಕೋಟ್ಯಂತರ ಜನ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎನ್ನುವುದು ತಿಳಿದಿರಲಿ” ಎಂದು ಕಿಡಿಕಾರಿದ್ದಾರೆ.

“ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ನನಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ. ನಾನು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು.. ನಮ್ಮ ಪಕ್ಷದ ಹಿರಿಯ ನಾಯಕರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಪಡೆದು ಎಐಸಿಸಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರಲಿಲ್ಲ, ಕಲಬುರ್ಗಿಯ ಯಾವುದಾದರೂ ಕಾರ್ಖಾನೆಯಲ್ಲಿ ಕಾರ್ಮಿಕರಾಗಿರುತ್ತಿದ್ದರು. ಈ ವಾಸ್ತವ ಸದಾ ನಮ್ಮ ನೆನಪಲ್ಲಿರುತ್ತದೆ. ನೀವು ಹೇಳುವ ವ್ಯಸನ ನಮ್ಮ ಪಾಲಿನ ಅಂಬೇಡ್ಕರ್ ಸ್ಮರಣೆ, ನಮ್ಮನ್ನೆಲ್ಲ ಇಲ್ಲಿಗೆ ತಂದು ನಿಲ್ಲಿಸಿ ನಮಗೆ ಸ್ಥಾನಮಾನ, ಗೌರವ ಮತ್ತು ಜನರ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದೆ ಎನ್ನುವುದನ್ನು ನಾವು ಮರೆತಿಲ್ಲ” ಎಂದು ಸಿಎಂ ಹೇಳಿದ್ದಾರೆ.

“ನಾನು ಮಾತ್ರ ಅಲ್ಲ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಕೊಟ್ಟಿರುವ ಸಂವಿಧಾನ ಇಲ್ಲದೆ ಇರುತ್ತಿದ್ದರೆ ನೀವು ಕೂಡಾ ಗೃಹಸಚಿವರಾಗಿ ಬದುಕು ಕೊಟ್ಟ ಮಹಾತ್ಮನನ್ನೇ ತುಚ್ಛೀಕರಿಸುವ ಅವಕಾಶ ನಿಮಗೆ ಸಿಗುತ್ತಿರಲಿಲ್ಲ. ನೀವು ನಿಮ್ಮೂರಿನಲ್ಲಿ ಎಲ್ಲಾದರೂ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗುತ್ತಿತ್ತು, ದೇಶದ ಪ್ರಧಾನಿ ಮತ್ತು ನಿಮ್ಮ ಸಹದ್ಯೋಗಿ ನರೇಂದ್ರ ಮೋದಿ ಅವರು ಕೂಡಾ ರೈಲ್ವೇ ಸ್ಟೇಷನ್ ನಲ್ಲಿ ಚಹಾ ಮಾರಿಕೊಂಡೇ ಇರಬೇಕಾಗಿತ್ತೋ ಏನೋ? ಅವರಿಗೂ ಪ್ರಧಾನಿಯಾಗುವ ಅವಕಾಶವೇ ಸಿಗುತ್ತಿರಲಿಲ್ಲ. ಇದನ್ನು ಪ್ರಧಾನಿಯವರೂ ಒಪ್ಪಿಕೊಳ‍್ಳಬಹುದು ಎಂದು ನಂಬಿದ್ದೇನೆ, ನೀವೂ ಒಪ್ಪಿಕೊಂಡು ಬಿಡಿ” ಎಂದಿದ್ದಾರೆ.

“ಅಮಿತ ಶಾ ಅವರೇ, ಇತಿಹಾಸವನ್ನು ಓದಿರುವ ನಮ್ಮಂತಹವರಿಗೆ ನಿಮ್ಮೊಳಗಿನ ಅಂಬೇಡ್ಕರ್ ದ್ವೇಷ ಹೊಸದಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ದೇಶದ ಸಂವಿಧಾನವನ್ನು ಅವರು ಬದುಕಿರುವಾಗಲೇ ನಿಮ್ಮ ಮಾತೃಸಂಸ್ಥೆಯಾದ ಆರ್‌ಎಸ್‌ಎಸ್ ಯಾಕೆ ತಿರಸ್ಕರಿಸಿತ್ತು? ಆರ್‌ಎಸ್‌ಎಸ್ ನಾಯಕರಾಗಿದ್ದ ಹೆಡಗೆವಾರ್, ಗೋಲ್ವಾಲ್ಕರ್ ಮತ್ತು ಸಾವರ್ಕರ್ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆಗಳೇನು ಎನ್ನುವ ವಿವರಗಳೆಲ್ಲ ಇತಿಹಾಸದ ಪುಟಗಳಲ್ಲಿ ಇವೆ. ನಿಮ್ಮ ಸುಳ್ಳುಗಳು ಮತ್ತು ಆತ್ಮವಂಚನೆಯ ನಡವಳಿಕೆಗಳಿಂದ ಅದನ್ನು ಮರೆಮಾಚಬಹುದು. ಆದರೆ, ಅಳಿಸಿಹಾಕಲಾಗುವುದಿಲ್ಲ ಎನ್ನುವುದು ನೆನಪಿರಲಿ. ಆ ಅಭಿಪ್ರಾಯವನ್ನೇ ನೀವು ಸಂಸತ್ ನಲ್ಲಿ ಆಡಿದ್ದೀರಿ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ನಿಮ್ಮ ಮಾತಿನ ಧಾಟಿಯಲ್ಲಿಯೇ ಪ್ರತಿಕ್ರಿಯಿಸುತ್ತೇನೆ. ನಿಮ್ಮ ಪಕ್ಷ ಮತ್ತು ಅದರ ಹಿಂದಿರುವ ಪರಿವಾರಕ್ಕೆ ಇತ್ತೀಚೆಗೆ ಮೋದಿ…ಮೋದಿ.. ಮೋದಿ ಎಂದು ಹೇಳುವುದು ಒಂದು ವ್ಯಸನ ಆಗಿದೆ. ಮೋದಿಯವರ ಬದಲಿಗೆ ಅಷ್ಟು ಬಾರಿ ದೇವರ ನಾಮ ಸ್ಮರಣೆ ಮಾಡಿದ್ದರೆ ಏಳು ಜನ್ಮದಲ್ಲಿ ಮಾತ್ರ ಅಲ್ಲ, ನೂರು ಜನ್ಮದಲ್ಲಿಯೂ ನಿಮಗೆ ಸ್ವರ್ಗವೇ ಸಿಗುತ್ತಿತ್ತು, ಕೇವಲ ಅಧಿಕಾರದಲ್ಲಿ ಉಳಿಯಲಿಕ್ಕಾಗಿ ಮಾಡಿರುವ ಪಾಪಕೃತ್ಯಗಳಿಗೆ ಕ್ಷಮೆಯೂ ಸಿಗುತ್ತಿತ್ತು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಡಾ. ಎಚ್‌.ಸಿ. ಮಹದೇವಪ್ಪ ಆಗ್ರಹ

“ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಶಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ” ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌ಸಿ ಮಹದೇವಪ್ಪ ಆಗ್ರಹಿಸಿದ್ದಾರೆ.

“ಅಂಬೇಡ್ಕರ್ ಅವರ ಹೆಸರನ್ನು ಪದೇಪದೆ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಹೆಸರನ್ನು ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು ಹೊತ್ತಿಗೆ ಏಳು ಜನ್ಮದವರೆಗೆ ಸ್ವರ್ಗ ಸಿಗುತ್ತಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯ ಸಭೆಯಲ್ಲಿ ಹೇಳಿದ್ದು ಅವರ ಈ ಅಸೂಕ್ಷ್ಮವಾದ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದಿದ್ದಾರೆ.

“ಭಾರತದ ಇತಿಹಾಸದಲ್ಲಿ ಅಸ್ಪೃಶ್ಯ ಸಮುದಾಯಗಳಿಗೆ ಇದ್ದ ಪರಿಸ್ಥಿತಿಯನ್ನು ನೆನಪಿಸಿಕೊಂಡರೆ ವಿಪರೀತ ಅವಮಾನ ದೌರ್ಜನ್ಯಕ್ಕೆ ಒಳಗಾಗಿದ್ದ ಅವರನ್ನು ಯಾವ ದೇವರೂ ಕೂಡಾ ರಕ್ಷಣೆ ಮಾಡಿದ ಉದಾಹರಣೆ ಇಲ್ಲ.
ಆದರೆ, ಅಸ್ಪೃಶ್ಯರು, ಮಹಿಳೆಯರು ಮತ್ತು ಶೋಷಿತರ ಬದುಕನ್ನು ತನ್ನ ತ್ಯಾಗ, ಅಧ್ಯಯನ, ಬದ್ಧತೆ ಮತ್ತು ಮಹಾಲೋಕದೃಷ್ಟಿಯ ಮೂಲಕ ಪ್ರತಿದಿನವೂ ರಕ್ಷಣೆ ಮಾಡುತ್ತಿರುವ ನಿಜವಾದ ಶಕ್ತಿ ಯಾವುದಾದರೂ ಇದ್ದರೆ ಅದು ಬಾಬಾ ಸಾಹೇಬರು ಮತ್ತವರ ಸಂವಿಧಾನ ಎಂಬುದನ್ನು ನಾನು ಎದೆ ತಟ್ಟಿಕೊಂಡು ಹೇಳುತ್ತೇನೆ.
ಭಾರತದ ಸಂದರ್ಭದಲ್ಲಿ ಅಸ್ಪೃಶ್ಯತೆ ಅನುಭವಿಸಿದ ನಮ್ಮ ಜನರು, ಇಲ್ಲಿನ ಮಹಿಳೆಯರು ಮತ್ತು ಶೋಷಿತ ವರ್ಗಗಳು ಅಂಬೇಡ್ಕರ್ ಅವರನ್ನು ಬಿಟ್ಟು ಅಮಿತ್ ಶಾ ಅವರ ದೇವರ ಹೆಸರನ್ನು ಹೇಳುತ್ತಾ ಕೂತಿದ್ದರೆ ಇಷ್ಟೊತ್ತಿಗೆ ಅವರೆಲ್ಲರೂ ದೇವರ ಪಾದ ಸೇರಬೇಕಾಗಿತ್ತು” ಎಂದು ಹೇಳಿದ್ದಾರೆ.

“ಹೀಗಾಗಿ ಪುಣ್ಯಗಿಣ್ಯ ಎಂದು ಹೇಳುತ್ತಾ ಸಮಾಜಕ್ಕೆ ಕಂಟಕಪ್ರಾಯವಾದ ಮೌಢ್ಯತೆಯನ್ನು ಆಚರಿಸುವುದಕ್ಕಾಗಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಶಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಈ ಮೂಲಕ ನಾನು ಆಗ್ರಹಿಸುತ್ತೇನೆ” ಎಂದಿದ್ದಾರೆ.

“ಜೊತೆಗೆ ಯಾವ ಧರ್ಮ ಅಥವಾ ದೇವರು ನಮ್ಮನ್ನು ರಕ್ಷಣೆ ಮಾಡುವುದಿಲ್ಲ, ಬದಲಿಗೆ ಶಿಕ್ಷಣ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವೇ ನಮ್ಮ ಬದುಕನ್ನು ಬದಲಿಸುವ ಕೀಲಿಕೈ ಎಂಬ ಬಾಬಾ ಸಾಹೇಬರ ಮಾತನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುತ್ತೇನೆ” ಎಂದು ಅಮಿತ್ ಶಾ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ; ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...