HomeUncategorizedಮುಖ್ಯವಾಹಿನಿಗೆ ಬನ್ನಿ - ನಕ್ಸಲರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ಮುಖ್ಯವಾಹಿನಿಗೆ ಬನ್ನಿ – ನಕ್ಸಲರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

- Advertisement -
- Advertisement -

ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ನಮ್ಮ  ಸರ್ಕಾರವು ಬಯಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, “ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿರುತ್ತಾರೆ” ಎಂದು ತಿಳಿಸಿದ್ದು, ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.

ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ ಎಂದು ಹೇಳಿದ್ದಾರೆ.

ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ, ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ‌ ಎಂದು ಹೇಳಿದ್ದಾರೆ.

“ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ.  ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದ್ದು, ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡುತ್ತೇನೆ.

ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರುಗಳ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು.

ಅವರ ಮೇಲಿನ ಮೊಕದ್ದಮೆ / ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದೆ ಹಾಗೂ ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು. ಈಗಾಗಲೇ ಶರಣಾಗತರಾದ ನಕ್ಸಲೀಯರ ಅಗತ್ಯಗಳನ್ನು ಸಹ ಗುರುತಿಸಿ ಅವರಿಗೂ ಸಹ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಯಾರೇ ಆದರೂ, ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರವು ತೆಗೆದುಕೊಳ್ಳಲಿದೆ ಎಂದೂ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಬಯಸುತ್ತೇನೆ ಎಂದು ಅವರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...