ದೇವನಹಳ್ಳಿ| ಕೈಗಾರಿಕೆಗಳಿಗೆ ಬಂಜರು ಭೂಮಿ ಬಳಸಿ,  ಗ್ರಾಮ ಆಧಾರಿತ ಕೈಗಾರಿಕೆಗೆ ಉತ್ತೇಜನ ನೀಡಿ: ಸಿಎಂ ಸಿದ್ದರಾಮಯ್ಯಗೆ ಮೇಧಾಪಾಟ್ಕರ್ ಪತ್ರ

ಬೆಂಗಳೂರು: ದೇವನಹಳ್ಳಿಯಲ್ಲಿ ಕೈಗಾರಿಕಾ ಯೋಜನೆಗಳಿಗಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆ ತೀವ್ರ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಪ್ರಸ್ತುತ ನಡೆಯುತ್ತಿರುವ ಅನ್ಯಾಯವನ್ನು ತಡೆಯುವಂತೆ ಮನವಿ ಮಾಡಿದ್ದಾರೆ. ರೈತರು ಮತ್ತು ಸಣ್ಣ ವ್ಯಾಪಾರಿಗಳು ನಗದು ಪರಿಹಾರಕ್ಕಿಂತ ಹೆಚ್ಚಾಗಿ ತಮ್ಮ ಪಾರಂಪರಿಕ ಜೀವನೋಪಾಯದ ಭೂಮಿಯ ರಕ್ಷಣೆಗೆ ಆದ್ಯತೆ ನೀಡುತ್ತಿದ್ದಾರೆ ಎಂದು ಅವರು ಪತ್ರದಲ್ಲಿ ಒತ್ತಿ ಹೇಳಿದ್ದಾರೆ. ದೇವನಹಳ್ಳಿಯಲ್ಲಿ ಈಗಾಗಲೇ 6000 ಎಕರೆಗೂ ಹೆಚ್ಚು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೂ, ಸಂತ್ರಸ್ತರು … Continue reading ದೇವನಹಳ್ಳಿ| ಕೈಗಾರಿಕೆಗಳಿಗೆ ಬಂಜರು ಭೂಮಿ ಬಳಸಿ,  ಗ್ರಾಮ ಆಧಾರಿತ ಕೈಗಾರಿಕೆಗೆ ಉತ್ತೇಜನ ನೀಡಿ: ಸಿಎಂ ಸಿದ್ದರಾಮಯ್ಯಗೆ ಮೇಧಾಪಾಟ್ಕರ್ ಪತ್ರ