Homeಕರ್ನಾಟಕಮುಡಾ ಪ್ರಕರಣ | ವೈಟ್ನರ್ ಹಿಂದಿರುವುದೇನು? ವಿಡಿಯೋ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಮುಡಾ ಪ್ರಕರಣ | ವೈಟ್ನರ್ ಹಿಂದಿರುವುದೇನು? ವಿಡಿಯೋ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ಕ್ಕೆ ಬರೆದಿದ್ದ ಪತ್ರಕ್ಕೆ ವೈಟ್ನರ್ ಹಾಕಿ ತಿದ್ದಲಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆರೋಪಿಸಿದ್ದರು. ಈ ಆರೋಪಕ್ಕೆ ಸಿಎಂ ತಿರುಗೇಟು ನೀಡಿದ್ದಾರೆ.

ಪತ್ರದ ವೈಟ್ನರ್ ಹಾಕಿರುವ ಭಾಗಕ್ಕೆ ಲೈಟ್ ಹಿಡಿದು ತೋರಿಸುವ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಸಿಎಂ, ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದಿದ್ದಾರೆ.

“ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ–ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ” ಎಂದು ಸಿಎಂ ಬರೆದುಕೊಂಡಿದ್ದಾರೆ.

“ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ ‘ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ’ ಎಂಬ ನಾಲ್ಕೈದು ಪದಗಳಿಗೆ ವೈಟ್ನರ್‌ ಹಾಕಿ, ಪ್ರಾಧಿಕಾರ ಅಭಿವೃದ್ಧಿಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ” ಎಂದಿದ್ದಾರೆ.

“ವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದು’ ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ” ಎಂದು ಸಿಎಂ ಕಿಡಿಕಾರಿದ್ದಾರೆ.

“ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ–ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾತಿಥ್ಯ : ಪರಪ್ಪನ ಅಗ್ರಹಾರ ಜೈಲಿನ 7 ಸಿಬ್ಬಂದಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...