Homeಕರ್ನಾಟಕಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

"ಬಿಜೆಪಿ ನಾಯಕರ ರಾಜಕೀಯ ಹೇಳಿಕೆಗಳನ್ನು ಕಸದ ಬುಟ್ಟಿಗೆ ಎಸೆಯಿರಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ"-ಸಿಎಂ

- Advertisement -
- Advertisement -

ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಎಲ್ಲವೂ ಯಥಾಸ್ಥಿತಿಯಲ್ಲಿಯೇ ಇರಬೇಕು. ಬಡವರು ಬಡವರಾಗಿಯೇ ಉಳಿಯಬೇಕು, ಹಿಂದುಳಿದವರು ಹಿಂದೆಯೇ ಉಳಿಯಬೇಕು. ಮಹಿಳೆಯರು ಅವಕಾಶ ವಂಚಿತರಾಗಿಯೇ ಇರಬೇಕು. ವರ್ಣ ಮತ್ತು ವರ್ಗಗಳ ನಡುವಿನ ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ. ಬಿಜೆಪಿಯ ನಾಯಕರ ಅಂತರಂಗದಲ್ಲಿರುವುದು ಇದೇ ಮನುವಾದಿ ಮನಸ್ಥಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವಿರುದ್ದ ಹೇಳಿಕೆ ಕೊಟ್ಟಿರುವ ಬಿಜೆಪಿ ನಾಯಕರಿಗೆ ಸಿಎಂ ತಿರುಗೇಟು ಕೊಟ್ಟಿದ್ದು, ಜನರು ಸಮೀಕ್ಷೆಯಲ್ಲಿ ಪಾಲ್ಗೊಂಡು ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಸೋಮವಾರ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, ನಮ್ಮ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ ಎಂದಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ದವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಮ್ಮ ಸರ್ಕಾರ ನಡೆಸುವ ಸಮೀಕ್ಷೆಯಿಂದ ಕೇವಲ ದಲಿತ, ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸ್ಥಿತಿ-ಗತಿ ಮಾತ್ರವಲ್ಲ, ಮುಂದುವರಿದ ಜಾತಿಗಳೊಳಗಿನ ಬಡವರು ಮತ್ತು ಅವಕಾಶ ವಂಚಿತರ ಸ್ಥಿತಿಗತಿಯೂ ಗೊತ್ತಾಗಲಿದೆ. ಈ ವಾಸ್ತವಸ್ಥಿತಿ ಅರಿವಾಗುವುದು ಬಿಜೆಪಿಯವರಿಗೆ ಬೇಡವಾಗಿದೆ. ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಪ್ರತಿಯೊಂದು ಜಾತಿ ಮತ್ತು ಧರ್ಮದೊಳಗಿನ ಉಳ್ಳವರ ಕೈಯಲ್ಲಿಯೇ ಇರಬೇಕು ಎನ್ನುವುದೇ ಅವರ ವಿರೋದಧ ಹಿಂದಿನ ದುರುದ್ದೇಶ ಎಂದು ಟೀಕಿಸಿದ್ದಾರೆ.

ಬಿಹಾರದಲ್ಲಿ ಇವರದ್ದೇ ಮೈತ್ರಿ ಸರ್ಕಾರ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಇದೇ ರೀತಿ ತೆಲಂಗಾಣದಲ್ಲಿಯೂ ನಡೆದಿದೆ. ಅಲ್ಲಿಯೂ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡಿದ್ದಾರೆ. ಇವೆಲ್ಲಕ್ಕಿಂತಲೂ ಮಿಗಿಲಾಗಿ ಈಗ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಜಾತಿ ಗಣತಿ ಮಾಡಲು ಹೊರಟಿದೆ ಎಂದು ಸಿಎಂ ನೆನಪಿಸಿದ್ಧಾರೆ.

ಕರ್ನಾಟಕದಲ್ಲಿ ಜಾತಿಗಳನ್ನು ಪರಿಗಣಿಸಿ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರೇ, ನೀವು ಕೇಂದ್ರ ಸರ್ಕಾರದ ಜಾತಿ ಗಣತಿಯನ್ನೂ ವಿರೋಧಿಸುತ್ತೀರಾ? ಹಾಗೆ ವಿರೋಧಿಸುವುದಾದರೆ ಅದನ್ನು ಗಟ್ಟಿ ದನಿಯಲ್ಲಿ ಈಗಲೇ ಹೇಳಿಬಿಡಿ. ಪ್ರಧಾನಿಯ ಎದುರು ತಲೆ ಎತ್ತಿ ಮಾತನಾಡುವ ದಮ್ಮು-ತಾಕತ್ತು ಇಲ್ಲದ ನಿಮಗೆ ಇದನ್ನು ವಿರೋಧಿಸುವ ಧೈರ್ಯ ಇದೆಯೇ? ಯಾಕೆ ತಮ್ಮ ಮೂರ್ಖತನದ ಹೇಳಿಕೆಗಳ ಮೂಲಕ ರಾಜ್ಯದ ಪ್ರಜ್ಞಾವಂತ ಜನರ ಎದುರು ನಗೆಪಾಲಿಗೀಡಾಗುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರ ಈ ಆತ್ಮವಂಚಕ ನಡವಳಿಕೆಯನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕು. ಅವರ ರಾಜಕೀಯ ಪ್ರೇರಿತ ಠಕ್ಕುತನದ ಹೇಳಿಕೆಗಳನ್ನು ಮನೆಯ ಕಸದ ಬುಟ್ಟಿಗೆ ಎಸೆದು ಎಲ್ಲರೂ ಈಗ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡು ಸಂಪೂರ್ಣ ಸಹಕಾರ ನೀಡಬೇಕು. ಈ ಮೂಲಕ ನಾವೆಲ್ಲರೂ ಸೇರಿ ಸಮ ಸಮಾಜವನ್ನು ನಿರ್ಮಾಣ ಮಾಡುವ ಮೂಲಕ ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವನ್ನು ಮಾಡೋಣ ಎಂದು ವಿನಯಪೂರ್ವಕವಾಗಿ ಅರಿಕೆ ಮಾಡಿಕೊಳ‍್ಳುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಎಸ್‌ಐಆರ್ ವಿರುದ್ಧ ಸರ್ವಾನುಮತದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...